ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಕೇಳೋಣ ಅಂದುಕೊಂಡಿದ್ದೀನಿ: ಬಿಜೆಪಿ ನಾಯಕ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನೂ ಕಾಂಗ್ರೆಸ್ ಟಿಕೆಟ್ ಕೇಳೋಣ ಅಂದುಕೊಂಡಿದ್ದೀನಿ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ. ಯತೀಂದ್ರ ಸಿದ್ದರಾಮಯ್ಯ ಹೆಸರು ಕೂಡ ಪ್ರಸ್ತಾಪವಾಗಿದೆ. ಅದೂ ಒಳ್ಳೆಯದೇ, ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದ ಎಚ್.ವಿಶ್ವನಾಥ್
ಮೈಸೂರು(ಆ.06): ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾಗಿದೆ. ಆದರೆ ನಾನೂ ಆಕಾಂಕ್ಷಿ ಆಗಿದ್ದೇನೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನೂ ಕಾಂಗ್ರೆಸ್ ಟಿಕೆಟ್ ಕೇಳೋಣ ಅಂದುಕೊಂಡಿದ್ದೀನಿ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ. ಯತೀಂದ್ರ ಸಿದ್ದರಾಮಯ್ಯ ಹೆಸರು ಕೂಡ ಪ್ರಸ್ತಾಪವಾಗಿದೆ. ಅದೂ ಒಳ್ಳೆಯದೇ, ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದರು.
ವರ್ಗಾವಣೆ ಹಿಂದೆ 1000 ಕೋಟಿ ದಂಧೆ: ಎಚ್‌ಡಿಕೆ ಮತ್ತೆ ಬಾಂಬ್!
ಸತ್ಯ ಹರಿಶ್ಚಂದ್ರ ಸತ್ತ ಮೇಲೆ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಇಬ್ಬರು ಮಾತ್ರ ಉಳಿದಿದ್ದಾರೆ. ಇವರಿಬ್ಬರೂ ಮುಖ್ಯಮಂತ್ರಿ ಆಗಿದ್ದಾಗ ಮಾಡಿದ ಅಧ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ‘ಕುಮಾರಸ್ವಾಮಿ ಅವರೇ ಆ ಪೆನ್‌ಡ್ರೈವ್ ಏನಾಯ್ತು ಹೇಳಿ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ’ಎಂದು ತೀಕ್ಷ$್ಣವಾಗಿ ಟೀಕಿಸಿದರು.