ನಾನೂ ರಾಮ ಭಕ್ತೆ, ರಾಮರಾಜ್ಯ ನಮ್ಮ ಉದ್ದೇಶ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್
ನಾನು ಕೂಡ ರಾಮನ ಭಕ್ತಳು. ರಾಮ ರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರ್ಕಾರ ನಡೆಯುತ್ತಿದೆ. ನಮ್ಮ ಕಾಂಗ್ರೆಸ್ ಸರ್ಕಾರ ಇದನ್ನು ಪಾಲಿಸುತ್ತಿದೆ. ನಾವು ಈಗಾಗಲೇ ರಸ್ತೆ, ಬ್ರಿಡ್ಜ್, ಶಾಲೆ ಸಾಕಷ್ಟು ನಿರ್ಮಿಸಿದ್ದೇವೆ. ಗ್ಯಾರಂಟಿ ಮೂಲಕ ರಾಮರಾಜ್ಯ ನಿರ್ಮಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ (ಫೆ.19): ನಾನು ಕೂಡ ರಾಮನ ಭಕ್ತಳು. ರಾಮ ರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರ್ಕಾರ ನಡೆಯುತ್ತಿದೆ. ನಮ್ಮ ಕಾಂಗ್ರೆಸ್ ಸರ್ಕಾರ ಇದನ್ನು ಪಾಲಿಸುತ್ತಿದೆ. ನಾವು ಈಗಾಗಲೇ ರಸ್ತೆ, ಬ್ರಿಡ್ಜ್, ಶಾಲೆ ಸಾಕಷ್ಟು ನಿರ್ಮಿಸಿದ್ದೇವೆ. ಗ್ಯಾರಂಟಿ ಮೂಲಕ ರಾಮರಾಜ್ಯ ನಿರ್ಮಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ನಗರದಲ್ಲಿ ಮಾತನಾಡಿ, ಪ್ರತಿಯೊಬ್ಬ ಪ್ರಜೆ ಸುಖದಿಂದ, ನೆಮ್ಮದಿಯಿಂದ ಜೀವನ ಮಾಡುವುದೇ ರಾಮರಾಜ್ಯ. ನಮ್ಮ ಸರ್ಕಾರ, ಸಿದ್ದರಾಮಯ್ಯನವರ ಮುಖಂಡತ್ವದಲ್ಲಿ ಚಾಚೂ ತಪ್ಪದೇ ರಾಮರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುತ್ತಿದೆ. ಮನೆ, ಮನೆಯಲ್ಲಿ ರಾಮರಾಜ್ಯ ನಿರ್ಮಾಣ ಮಾಡಬೇಕೆನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.
ಲಕ್ಷ್ಮಣ ಸವದಿ ಕಾಂಗ್ರೆಸ್ ಬಿಡುವುದಿಲ್ಲ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ಸೇರುತ್ತಾರೆಂಬ ಚರ್ಚೆ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವರು, ಲಕ್ಷ್ಮಣ ಸವದಿಯವರು ಬಿಜೆಪಿಗೆ ಹೋಗುತ್ತಾರೆಂಬ ವಿಷಯ ಖಂಡಿತ ತಮ್ಮ ಗಮನಕ್ಕೆ ಬಂದಿಲ್ಲ. ಅವರು ಕಾಂಗ್ರೆಸ್ಸಿಗೆ ಬರುವ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಪಾತ್ರ ನಿರ್ವಹಿಸಿದ್ದೇವು. ಏನೇ ಹೇಳಿ, ಯಾವುದೇ ಕಾರಣಕ್ಕೂ ಲಕ್ಷ್ಮಣ ಸವದಿಯವರು ಪಕ್ಷವನ್ನು ಬಿಡುವುದಿಲ್ಲ ಎಂದು ಹೆಬ್ಬಾಳಕರ್ ಸ್ಪಷ್ಟಪಡಿಸಿದರು. ಲೋಕಸಭಾ ಚುನಾವಣೆಗೆಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗಾವಿಯಲ್ಲಿ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತೋ ಅವರ ಪರವಾಗಿ ಕೆಲಸ ಮಾಡುತ್ತೇವೆ.
ಮಂಗನಕಾಯಿಲೆ ಉಲ್ಬಣಿಸುವ ಮುನ್ನ ಎಚ್ಚರ ವಹಿಸಬೇಕು: ಶಾಸಕ ಆರಗ ಜ್ಞಾನೇಂದ್ರ
ಇಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರಿಗೆ ನಾವು ಸಹಾಯ ಮಾಡುತ್ತೇವೆ. ಮತ್ತೆ ಗೆಲ್ಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ನಿಮ್ಮ ಪುತ್ರ ಮೃಣಾಲ್ ಅವರಿಗೆ ಟಿಕೆಟ್ ನೀಡಬೇಕೆಂದು ಕ್ಷೇತ್ರದ ಜನರು ಮತ್ತು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದರೆ, ಅವರ ತಾಯಿಯವರೇ ಈ ಬಗ್ಗೆ ಮೌನವಹಿಸಿದ್ದಾರೆಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕ್ಷೇತ್ರದ ಜನರ, ಕಾರ್ಯಕರ್ತರ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಭಿಮಾನ ಎನ್ನುವುದು ರಾಜಕಾರಣಿಗಳಿಗೆ ಅತ್ಯಾವಶ್ಯಕ. ಆದರೆ, ನಮ್ಮ ಪಕ್ಷ ಹೈಕಮಾಂಡ್ ತಳಹದಿಯ ಪಕ್ಷ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೇ ಅವರಿಗೆ ನನ್ನ ಬೆಂಬಲವಿದೆ ಎಂದು ಹೇಳಿದರು.