ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ: ಆರ್.ವಿ. ದೇಶಪಾಂಡೆ..!
ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಸಿಎಂ ಆಗಬೇಕೆಂದು ಬೆನ್ನು ಹತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಅಧಿಕಾರ ನಡೆಸುತ್ತಾರೆ. ನಾವು ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ನಮಗೆ ಇನ್ನೂ 4 ವರ್ಷ ಕಾಲಾವಕಾಶ ಇದೆ. ಹೀಗಿರುವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದು ತಪ್ಪಾಗುತ್ತದೆ: ಮಾಜಿ ಸಚಿವ ಆರ್.ವಿ. ದೇಶಪಾಂಡೆ
ಬೆಳಗಾವಿ(ಸೆ.11): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಾರೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಸಿಎಂ ಆಗಬೇಕೆಂದು ಬೆನ್ನು ಹತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಅಧಿಕಾರ ನಡೆಸುತ್ತಾರೆ. ನಾವು ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ನಮಗೆ ಇನ್ನೂ 4 ವರ್ಷ ಕಾಲಾವಕಾಶ ಇದೆ. ಹೀಗಿರುವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದು ತಪ್ಪಾಗುತ್ತದೆ. ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ವ್ಯತಿರಿಕ್ತ ಪರಿಣಾಮ ಬರಲು ಸಾಧ್ಯವೇ ಇಲ್ಲ. ಸಿಎಂ ಪತ್ನಿ ತಪ್ಪು ಹೆಜ್ಜೆ ಇಟ್ಟಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಕೂಗು: ಈಗಾಗಲೇ ಮುಖ್ಯಮಂತ್ರಿ ಇದ್ದಾರೆ ಅವರನ್ನ ಇಳಿಸುವವರು ಯಾರು?, ಸತೀಶ ಜಾರಕಿಹೊಳಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಮಲಾ ಹ್ಯಾರಿಸ್ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ. ಈ ಕುರಿತು ಅವರೇ ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ ಎಂದರು. ಡಿಕೆಶಿಯವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಸಹ ಕಳೆದ 6 ತಿಂಗಳಲ್ಲಿ ಎರಡು ಬಾರಿ ಮೋದಿಯವರನ್ನು ಭೇಟಿಯಾಗಿದ್ದಾರೆ. ರಾಜ್ಯಕ್ಕೆ ಬರಬೇಕಾದ ಅನುದಾನ ಕೇಳಿದ್ದಾರೆ. ಇದರಲ್ಲಿ ಬೇರೆ ಅರ್ಥ ಇಲ್ಲ ಎಂದರು.
ನಾಯಕರ ದೆಹಲಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ದೆಹಲಿ ನಮ್ಮ ಸೆಂಟರ್. ಹೀಗಾಗಿ, ನಾಯಕರು ದೆಹಲಿಗೆ ಹೋಗುತ್ತಿರುತ್ತಾರೆ. ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ನಾನಂತೂ ದೆಹಲಿಗೆ ಹೋಗುತ್ತಿಲ್ಲ ಎಂದರು.
ದೀಪಾವಳಿ ಬಳಿಕ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ ಎಂದು ಇದೇ ವೇಳೆ ಅವರು ಆರೋಪಿಸಿದರು.