Asianet Suvarna News Asianet Suvarna News

ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಜಿ.ಟಿ.ದೇವೇಗೌಡ

ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ಪಕ್ಷದ ಹಿರಿಯ ನಾಯಕರಾದ ಸಿ.ಎಂ. ಇಬ್ರಾಹಿಂ ಆ ಸ್ಥಾನವನ್ನು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವು ಮುನ್ನಡೆಯುತ್ತೇವೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷರಾದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.

I am not an aspirant for the post of JDS state president Says MLA GT DeveGowda gvd
Author
First Published Aug 20, 2023, 8:55 PM IST

ಮೈಸೂರು (ಆ.20): ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ಪಕ್ಷದ ಹಿರಿಯ ನಾಯಕರಾದ ಸಿ.ಎಂ. ಇಬ್ರಾಹಿಂ ಆ ಸ್ಥಾನವನ್ನು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವು ಮುನ್ನಡೆಯುತ್ತೇವೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷರಾದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೀಗ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ. ರಾಜ್ಯಾಧ್ಯಕ್ಷ ಸ್ಥಾನಕ್ಕಿಂತ ಕೋರ್‌ ಕಮಿಟಿ ಅಧ್ಯಕ್ಷ ಸ್ಥಾನ ಪವರ್‌ಫುಲ್‌ ಆಗಿದೆ. ಕೋರ್‌ ಕಮಿಟಿಯಲ್ಲಿ 21 ಮಂದಿ ಸದಸ್ಯರಿದ್ದಾರೆ. ಸೆಪ್ಟೆಂಬರ್‌ 1 ರಂದು ಸಭೆ ಸೇರಿ ಮುಂದಿನ ರೂಪರೇಷೆಗಳನ್ನು ಸಿದ್ಧಪಡಿಸುತ್ತೇವೆ. ಸೆಪ್ಟೆಂಬರ್‌ನಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ಪ್ರವಾಸ ಮಾಡಿ ಸಭೆಗಳನ್ನು ನಡೆಸುತ್ತೇವೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭಿಸುತ್ತೇವೆ ಎಂದು ತಿಳಿಸಿದರು.

ಕಾ​ವೇರಿ ನೀ​ರಿನ ವಿ​ಚಾ​ರ​ದಲ್ಲಿ ರಾ​ಜ​ಕೀಯ ತೀಟೆ ಮಾ​ಡ​ಬೇ​ಡಿ: ಸ​ಚಿವ ಚ​ಲು​ವ​ರಾ​ಯ​ಸ್ವಾಮಿ

ಲೋಕಸಭೆಯಲ್ಲಿ ಸ್ವಂತ ಬಲದಿಂದ ಸ್ಪರ್ಧೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸ್ವಂತ ಬಲದೊಂದಿಗೆ ಸ್ಪರ್ಧಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವುದಿಲ್ಲ. ಒಂದು ಸೀಟು ಗೇಲ್ತೀವೋ, 5 ಸೀಟು ಗೆಲ್ತೀವೋ, 10 ಸೀಟು ಗೆಲ್ತೀವೋ ಗೊತ್ತಿಲ್ಲ. ಆದರೆ, ಜೆಡಿಎಸ್‌ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಸ್ಪರ್ಧಿಸಲಿದೆ ಎಂದರು. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಜೆಡಿಎಸ್‌ ಸ್ಪರ್ಧಿಸಲಿದೆ. ನಮಗೆ ಹೊಂದಾಣಿಕೆಯ ಅವಶ್ಯಕತೆ ಇಲ್ಲ. ನಮ್ಮ ಶಕ್ತಿಯ ಅನುಸಾರ ಸ್ಪರ್ಧಿಸುತ್ತೇವೆ. ಸಾ.ರಾ. ಮಹೇಶ್‌, ಸಿ.ಎಸ್‌. ಪುಟ್ಟರಾಜು ಸೇರಿದಂತೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಪಕ್ಷ ಸೂಚಿಸಿದರೆ ನಾನು ಕೂಡ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.

ಯಾರು ಜೆಡಿಎಸ್‌ ತೊರೆಯಲ್ಲ: ಜೆಡಿಎಸ್‌ನ ಯಾವೊಬ್ಬ ಶಾಸಕರು, ಮುಖಂಡರು ಪಕ್ಷ ತೊರೆಯುವುದಿಲ್ಲ. ಕಾಂಗ್ರೆಸ್‌ ಪಕ್ಷ 135 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಕೆರೆ ಇದೀಗ ತುಂಬಿ ತುಳಿಕಾಡುತ್ತಿದ್ದು, ಭರ್ತಿಯಾಗಿದೆ. ಬೇರೆಯವರನ್ನು ಸೇರಿಸಿಕೊಂಡರೆ ಕೆರೆ ಒಡೆದು ಹೋಗುತ್ತದೆ ಎಂದು ಅವರು ಎಚ್ಚರಿಸಿದರು. ಈಗಾಗಲೇ ಕಾಂಗ್ರೆಸ್‌ನ ಹಲವು ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಶಾಸಕ ಬಸವರಾಜ ರಾಯರೆಡ್ಡಿ ಅವರೇ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರ ನಡುವೆಯೇ ಅಸಮಾಧನವಿದೆ. 

ಮತ್ತೆ ಮುನ್ನೆಲೆಗೆ ಬಂದ ದತ್ತಪೀಠ ವಿವಾದ: ವ್ಯವಸ್ಥಾಪನ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಮಾಜಿ ಸಚಿವ ಪುಟ್ಟರಾಜು ಕೂಡ ಜೆಡಿಎಸ್‌ ಕೋರ್‌ ಕಮಿಟಿ ಸದಸ್ಯರಾಗಿದ್ದಾರೆ. ಸಭೆಯಲ್ಲಿ ಅವರು ಕೂಡ ಭಾಗಿಯಾಗಿದ್ದರು. ಪುಟ್ಟರಾಜು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ. ನಮ್ಮೊಂದಿಗೇ ಇದ್ದುಕೊಂಡು ಜೆಡಿಎಸ್‌ ಬಲವರ್ಧನೆ ಮಾಡಲಿದ್ದಾರೆ ಎದು ಅವರು ತಿಳಿಸಿದರು. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ನಾನು ಯಾರ ವಿರುದ್ಧವೂ ಹೋರಾಡುತ್ತಿಲ್ಲ. ಸಿದ್ದರಾಮಯ್ಯ ವರ್ಸಸ್‌ ಜಿ.ಟಿ. ದೇವೇಗೌಡ ಅಂತೇನಿಲ್ಲ. ಅದೇನಿದ್ದರೂ ಮೋದಿ ವರ್ಸಸ್‌ ಸಿದ್ದರಾಮಯ್ಯ ಅಷ್ಟೇ ಎಂದು ಅವರು ಹೇಳಿದರು.

Follow Us:
Download App:
  • android
  • ios