ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹಲವು ಬಾರಿ ಹೇಳಿದ್ದೇನೆ. ಮಂಡ್ಯ ಜಿಲ್ಲೆಯಿಂದಲೂ ಸ್ಪರ್ಧಿಸುವುದಿಲ್ಲ: ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು(ಜ.11): ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಟಿಕೆಟ್ ಆಕಾಂಕ್ಷಿಯೂ ಅಲ್ಲ. ನನ್ನ ಹೇಳಿಕೆಯಲ್ಲಿ ಬದಲಾವಣೆ ಮಾಡುವ ವ್ಯಕ್ತಿಯಲ್ಲ ಎಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಪಕ್ಷದ ನಾಯಕರ ಜತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹಲವು ಬಾರಿ ಹೇಳಿದ್ದೇನೆ. ಮಂಡ್ಯ ಜಿಲ್ಲೆಯಿಂದಲೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ನಟ-ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ
ಗುರುವಾರ ಮಂಡ್ಯ ಜಿಲ್ಲೆಯ ನಾಯಕರ ಸಭೆ ನಡೆಯಲಿದ್ದು, ಸಭೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುವುದು. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ಮುಖಂಡರು ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಯ ಬಗ್ಗೆ ತೀರ್ಮಾನಿಸುತ್ತಾರೆ ಎಂದರು.
