ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸುಮಲತಾ
‘ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯದಲ್ಲಿ ಚುನಾವಣೆಗೆ ಇನ್ನೂ ನಾಲ್ಕು ವರ್ಷ ಕಾಯಬೇಕು. ನಾನು ಕೇಂದ್ರ ರಾಜಕೀಯದ ಕಡೆ ಗಮನ ಕೊಡಬೇಕು ಎಂದುಕೊಂಡಿದ್ದೇನೆ’ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯ (ಮೇ.30) : ‘ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯದಲ್ಲಿ ಚುನಾವಣೆಗೆ ಇನ್ನೂ ನಾಲ್ಕು ವರ್ಷ ಕಾಯಬೇಕು. ನಾನು ಕೇಂದ್ರ ರಾಜಕೀಯದ ಕಡೆ ಗಮನ ಕೊಡಬೇಕು ಎಂದುಕೊಂಡಿದ್ದೇನೆ’ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿ, ‘ಬಿಜೆಪಿಯ ನಾಯಕರು ನನಗೆ ಸೂಕ್ತ ಸ್ಥಾನ-ಮಾನಗಳನ್ನು ನೀಡುವ ಭರವಸೆ ನೀಡಿದ್ದಾರೆ. ಸದ್ಯ ಚುನಾವಣೆ ಫಲಿತಾಂಶ ಏನಾಗುತ್ತೆ, ಕೇಂದ್ರದಲ್ಲಿ ಸರ್ಕಾರ ಯಾವಾಗ ರಚನೆ ಆಗುತ್ತೆ ಎಂಬ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈಗಲೇ ಈ ಸ್ಥಾನ ಕೊಡಿ, ಆ ಸ್ಥಾನ ಕೊಡಿ ಎಂದು ನಾನು ಕೇಳುವುದಿಲ್ಲ. ಜೆ.ಪಿ.ನಡ್ಡಾ, ರಾಜಮೋಹನ್ ದಾಸ್ ಅವರು ನಿಮಗೆ ಒಳ್ಳೆಯ ಭವಿಷ್ಯ ಇದೆ ಎಂದು ಹೇಳಿದ್ದಾರೆ. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತೆ’ ಎಂದು ಹೇಳಿದರು.\
ಮಂಡ್ಯದಲ್ಲಿ ಡಾ.ಅಂಬರೀಶ್ ಫೌಂಡೇಷನ್ ಆರಂಭಿಸಿದ ಸಂಸದೆ ಸುಮಲತಾ; ವಿದ್ಯಾರ್ಥಿಗಳ ದತ್ತು ಸ್ವೀಕಾರ
‘ನಾನು ಎಂಪಿ ಚುನಾವಣೆಯ ಫಲಿತಾಂಶದ ನಿರೀಕ್ಷೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಚುನಾವಣೆಯಲ್ಲಿಯೇ ನಾನು ತಲೆ ಕೆಡಿಸಿಕೊಂಡಿರಲಿಲ್ಲ. ನಾನು ಈಗ ಬಿಜೆಪಿಗೆ ಸೇರಿದ್ದೇನೆ. ಬಿಜೆಪಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತದೆ. ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಯಾರೂ ನನ್ನನ್ನು ಕೇಳಲಿಲ್ಲ. ಹಾಗಾಗಿ ಈ ಚುನಾವಣೆ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ’ ಎಂದು ಹೇಳಿದರು.
ಮಂಡ್ಯ ಹೆಣ್ಣು ಭ್ರೂಣಹತ್ಯೆ ಬಗ್ಗೆ ಮತ್ತೆ ಸಿಡಿದೆದ್ದ ಸಂಸದೆ ಸುಮಲತಾ ಅಂಬರೀಶ್; ಕೈ ಸರ್ಕಾರಕ್ಕೆ ತರಾಟೆ!
ತಮ್ಮ ಪುತ್ರ ಅಭಿಷೇಕ್ ಅಂಬರೀಶ್ ರಾಜಕೀಯ ಪ್ರವೇಶ ವಿಚಾರವಾಗಿ ಪ್ರತಿಕ್ರಿಯಿಸಿ, ‘ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರುವುದಿಲ್ಲ. ಅಭಿಷೇಕ್ ಸಹ ನನ್ನ ಬಳಿ ಇದೇ ಮಾತು ಹೇಳಿದ್ದಾರೆ. ಮುಂದೆ ಏನಾಗುತ್ತೆ ನೋಡೋಣ’ ಎಂದರು.