Asianet Suvarna News Asianet Suvarna News

ನಾನು ರೆಬೆಲ್ ಅಲ್ಲ, ಸರ್ಕಾರ 5 ವರ್ಷ ಪೂರೈಸುತ್ತೆ: ಸತೀಶ ಜಾರಕಿಹೊಳಿ

ಮೂವರು ಡಿಸಿಎಂ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಡಿಸಿಎಂ ಸ್ಥಾನದ ಬಗ್ಗೆ ಈಗ ಚರ್ಚೆ ಕೂಡ ನಡೆಯುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷ ಅವಧಿ ಪೂರೈಸುತ್ತದೆ. ಕುಮಾರಸ್ವಾಮಿಯವರು ಕಾಂಗ್ರೆಸ್‌ ಸರ್ಕಾರ ಬೀಳಲಿದೆ ಎಂದು 5 ವರ್ಷ ಹೇಳುತ್ತಲೇ ಇರಲಿ ಎಂದು ವ್ಯಂಗ್ಯವಾಡಿದ ಸಚಿವ ಸತೀಶ ಜಾರಕಿಹೊಳಿ 
 

I am Not Rebel in Congress Says Minister Satish Jarkiholi grg
Author
First Published Dec 27, 2023, 5:55 AM IST

ವಿಜಯಪುರ(ಡಿ.27): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣ ಅಸ್ತಿತ್ವದಲ್ಲಿರುತ್ತದೆ. ನನ್ನನ್ನು ರೆಬೆಲ್ ಆಗಿ ಬಿಂಬಿಸುತ್ತಿರುವುದು ಸರಿಯಲ್ಲ, ನಾನು ಹಿಂದೆಯೂ ರೆಬೆಲ್ ಆಗಿರಲಿಲ್ಲ, ಮುಂದೆಯೂ ರೆಬೆಲ್‌ ಆಗುವುದಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. 

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೂವರು ಡಿಸಿಎಂ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಡಿಸಿಎಂ ಸ್ಥಾನದ ಬಗ್ಗೆ ಈಗ ಚರ್ಚೆ ಕೂಡ ನಡೆಯುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷ ಅವಧಿ ಪೂರೈಸುತ್ತದೆ. ಕುಮಾರಸ್ವಾಮಿಯವರು ಕಾಂಗ್ರೆಸ್‌ ಸರ್ಕಾರ ಬೀಳಲಿದೆ ಎಂದು 5 ವರ್ಷ ಹೇಳುತ್ತಲೇ ಇರಲಿ ಎಂದು ವ್ಯಂಗ್ಯವಾಡಿದರು. 

ದಲಿತ ನಾಯಕರ ಜೊತೆ ಸತೀಶ್ ಜಾರಕಿಹೊಳಿ ದೆಹಲಿಗೆ ದೌಡು; ಕನಕಪುರ ಬಂಡೆಗೆ ಲಗಾಮು ಹಾಕ್ತಾರಾ ಸಾಹುಕಾರ?

ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೋವಿಡ್ ಕಾಲದಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಶಾಸಕ ಯತ್ನಾಳರ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಅವ್ಯವಹಾರ ಕುರಿತು ತನಿಖೆ ಮಾಡಲು ಒಂದು ತನಿಖಾ ತಂಡ ರಚನೆಯಾಗಿದೆ. ಈ ತನಿಖಾ ತಂಡ ವರದಿ ನೀಡಲಿದೆ. ವರದಿ ಬಂದ ಬಳಿಕವೇ ಈ ಬಗ್ಗೆ ಪ್ರತಿಕ್ರಿಯೆ ನೀಡುವೆ ಎಂದರು.

Follow Us:
Download App:
  • android
  • ios