ಕಳೆದ ನಾಲ್ಕು ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹಲವು ಮಾಧ್ಯಮಗಳಲ್ಲಿ ಮಾಹಿತಿ ಬರುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿಲ್ಲ ಎಂದ ನಳಿನ್ ಕುಮಾರ್ ಕಟೀಲ್
ಬೆಂಗಳೂರು(ಜೂ.25): ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿಯು ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹಲವು ಮಾಧ್ಯಮಗಳಲ್ಲಿ ಮಾಹಿತಿ ಬರುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿಲ್ಲ ಎಂದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷ ಅವಧಿ ಮುಗಿದಿದೆ, ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳಬಹುದು: ಕಟೀಲ್ ಸ್ಪಷ್ಟನೆ
ಬಳ್ಳಾರಿಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ್ದರು. ಈ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ ಎಂದಿದ್ದೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿವೆ ಎಂದರು.
