ಬಿಜೆಪಿಯಿಂದ ಸ್ಪರ್ಧಿಸಲು ರೆಡಿ, ಟಿಕೆಟ್ ನೀಡೋದು ಹೈಕಮಾಂಡ್ ನಿರ್ಧಾರ: ಡಾ.ಗೋಪಾಲ ಕಾರಜೋಳ
ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆಯೇ ಹೊರತು ಯಾವುದೇ ಪದಾಧಿಕಾರಿಯಾಗಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ. ನಾಗಠಾಣ(ಮೀ) ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ: ಕಾರಜೋಳ.
ವಿಜಯಪುರ(ಜ.21): ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಮಾನದಂಡ ಅನುಸರಿಸಿದರೇ ಅಪ್ಪ ಒಬ್ಬರೇ ನಿಲ್ತಾರೆ. ಸಾಮರ್ಥ್ಯ ಪರಿಗಣಿಸಿ ಇಬ್ಬರಿಗೆ ನೀಡಿದರೇ ನಾನೂ ಕೂಡ ಸ್ಪರ್ಧಿಸುತ್ತೇನೆ. ಇದೆಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಬಿಜೆಪಿ ಮುಖಂಡ ಡಾ.ಗೋಪಾಲ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆಯೇ ಹೊರತು ಯಾವುದೇ ಪದಾಧಿಕಾರಿಯಾಗಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ. ನಾಗಠಾಣ(ಮೀ) ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ. ಎರಡು ವರ್ಷಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಮತಕ್ಷೇತ್ರದಲ್ಲಿ ಸುತ್ತಾಡಲು ಸಾಧ್ಯವಾಗಿರಲಿಲ್ಲ. ಆದರೂ, ಕಾರ್ಯಕರ್ತರೊಂದಿಗೆ ಸರತ ಸಂಪರ್ಕದಲ್ಲಿದ್ದೇನೆ. ಅವರ ಕೆಲಸ ಕಾರ್ಯಗಳಿಗೆ ಸ್ಪಂದಿಸಿದ್ದೇನೆ. ಈಗ ಮತಕ್ಷೇತ್ರಾದ್ಯಂತ ಸಂಚರಿಸುತ್ತಿದ್ದೇನೆ. ಈ ವರ್ಷ ನಡೆಯಲಿರುವ ವಿಧಾನ ಸಭೆ ಚುನಾವಣೆಗೆ ಸ್ಪಧಿರ್ಸಲು ಅಗತ್ಯ ತಯಾರಿ ಮಾಡಿಕೊಂಡಿದ್ದೇನೆ ಎಂದರು.
ಟಿಕೆಟ್ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಸಂಸದ ರಮೇಶ ಜಿಗಜಿಣಗಿ ಈಗಾಗಲೇ ವಿಧಾನಸಭೆ ಚುನಾವಣೆ ಸ್ಪರ್ಧೆಯ ಕುರಿತು ತಮ್ಮ ನಿಲುವನ್ನು ಮಾಧ್ಯಮಗಳ ಮುಂದೆ ಸ್ಪಷÜ್ಟಪಡಿಸಿದ್ದಾರೆ. ಹೀಗಾಗಿ ಹೈಕಮಾಂಡ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಜೆ.ಪಿ ನಡ್ಡಾ ಹವಾ, ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು!
ಆಡಿಯೋ ಬಹಿರಂಗ ವಿಚಾರ:
ಇತ್ತೀಚೆಗೆ ವೈರಲ್ ಆಗಿದ್ದ ಆಡಿಯೋ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಹಾಗೂ ಬಿಜೆಪಿ ಕಾರ್ಯಕರ್ತ ಶಿವಾನಂದ ಮಖಣಾಪುರ ಮಧ್ಯೆ ಎರಡು ವಷÜರ್‍ಗಳ ಹಿಂದೆ ಜಿಪಂ ಚುನಾವಣೆ ಸಂಬಂಧ ನಡೆದ ಸಂಭಾಷÜಣೆ ಅದಾಗಿದೆ. ಈಗ ಅದನ್ನು ಯಾಕೆ ವೈರಲ್ ಮಾಡಿದ್ದಾರೋ ಗೊತ್ತಿಲ್ಲ. ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಜಿಲ್ಲಾ ಘಟಕ ಈ ನಿರ್ಧಾರ ಕೈಗೊಂಡಿದೆ ಎಂದರು.
ಅಭಿವೃದ್ಧಿಗೆ ಅಡ್ಡಗಾಲು ಆರೋಪ ವಿಚಾರ:
ನಾಗಠಾಣ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಚಿವ ಗೋವಿಂದ ಕಾರಜೋಳ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಡಾ.ದೇವಾನಂದ ಚವ್ಹಾಣ ಮಾಡಿರುವ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವಾನಂದ ಚವ್ಹಾಣ ಅವರು ದಾಖಲೆ ಸಮೇತ ಬರಲಿ. ಮಾಧ್ಯಮಗಳ ಮುಂದೆಯೇ ಉತ್ತರಿಸುತ್ತೇನೆ. ಆರೋಪ ಮಾಡುವುದು ಪ್ರತಿಪಕ್ಷಗಳ ಕೆಲಸವಾಗಿದೆ ಎಂದು ಡಾ. ಗೋಪಾಲ ಗೊವಿಂದ ಕಾರಜೋಳ ಟೀಕಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್, ಬಿಜೆಪಿ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇಂಡಿ, ನಾಗಠಾಣ, ಸಿಂದಗಿ ಹಾಗೂ ದೇವರ ಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಜ.21 ರಿಂದ 29 ರವರೆಗೆ ಬೂತ್ ವಿಜಯ ಸಂಕಲ್ಪ ಅಭಿಯಾನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ 9 ಮಂಡಲಗಳಲ್ಲಿ ಪೂರ್ವಭಾವಿ ಸಭೆ ನಡೆಸಿದ್ದೇವೆ. ಈ ಕ್ಷೇತ್ರದ ವ್ಯಾಪ್ತಿಯ ಪ್ರತಿ ಮನೆಮನೆಗೆ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಯಡಿಯೂರಪ್ಪ ಮತ್ತು ಬೊಮ್ಮಾಯಿಯವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯ, ಸ್ಟಿಕರ್‌ಗಳನ್ನು ಅಂಟಿಸುವ ಕಾರ್ಯಕ್ರಮ ನಡೆಯಲಿದೆ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಅಶ್ವಥ್ ನಾರಾಯಣ ಭಾಗವಹಿಸಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಚಂದ್ರಶೇಖರ್ ಕವಟಗಿ, ಸುರೇಶ್ ಬಿರಾದಾರ, ಕೃಷ್ಣ ಗೋನಾಳಕರ್, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ ಜೋಶಿ ಮುಂತಾದವರು ಇದ್ದರು.