ಆರ್ ಅಶೋಕ್ ಕಾಲಜ್ಞಾನಿ ಎಂಬುದು ನನಗೆ ಗೊತ್ತಿರಲಿಲ್ಲ: ಎಚ್‌ಡಿಕೆ ವ್ಯಂಗ್ಯ
ಕಂದಾಯ ಸಚಿವ ಆರ್.ಅಶೋಕ್ ಅವರು ಭವಿಷ್ಯ ಮತ್ತು ಸಂಖ್ಯಾಶಾಸ್ತ್ರವನ್ನು ಹೇಳುವ ಕಾಲಜ್ಞಾನಿ ಎಂದು ನನಗೆ ಗೊತ್ತಿರಲಿಲ್ಲ. ಗೊತ್ತಾಗಿದ್ದು ಈಗಲೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಬೆಂಗಳೂರು (ಮಾ.18) : ಕಂದಾಯ ಸಚಿವ ಆರ್.ಅಶೋಕ್ ಅವರು ಭವಿಷ್ಯ ಮತ್ತು ಸಂಖ್ಯಾಶಾಸ್ತ್ರವನ್ನು ಹೇಳುವ ಕಾಲಜ್ಞಾನಿ ಎಂದು ನನಗೆ ಗೊತ್ತಿರಲಿಲ್ಲ. ಗೊತ್ತಾಗಿದ್ದು ಈಗಲೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಈ ಕುರಿತ ಟ್ವೀಟ್ ಮೂಲಕ ಕಿಚಾಯಿಸಿರುವ ಎಚ್‌ಡಿ ಕುಮಾರಸ್ವಾಮಿಯವರು, ಅವರಲ್ಲಿಯೂ ಒಬ್ಬರು 'ಕಾಲಜ್ಞಾನಿ' ‘ಸಂಖ್ಯಾಜ್ಞಾನಿ’ ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ. ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್(R ashok) ಅವರಲ್ಲಿದೆ. ಸಂತೋಷ.
ಸಿದ್ದರಾಮಯ್ಯಗೆ ಗೆಲುವಿನ ಗ್ಯಾರಂಟಿ ಇಲ್ಲ, ಇತರರನ್ನು ಹೇಗೆ ಗೆಲ್ಲಿಸುತ್ತಾರೆ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್‌ಗೆ 20 ಸ್ಥಾನಗಳು ಬರುತ್ತವೆ ಎಂದು ಚಿಕ್ಕಬಳ್ಳಾಪುರ(Chikkaballapur)ದಲ್ಲಿ ಗಿಣಿ ಭವಿಷ್ಯ ಹೇಳಿರುವ ಅವರು, ತಮ್ಮ ಬಿಜೆಪಿ ಅದೆಷ್ಟುಸೀಟು ಗೆಲ್ಲುತ್ತದೆ ಎನ್ನುವುದನ್ನು ಹೇಳಲು ಮರೆತಿದ್ದಾರೋ ಅಥವಾ ಬೇಕೆಂದೇ ಹೇಳಲಿಲ್ಲವೋ ಅವರೇ ಹೇಳಬೇಕು ಎಂದು ಕಾಲೆಳೆದರು.
ಎಷ್ಟೇ ಆಗಲಿ, ಅವರ ಜಾಣತನ ಜಗಜ್ಜಾಹೀರು ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಅಶೋಕ್ ಸಾಹೇಬರು ವಿಜಯ ಸಂಕಲ್ಪ(Vijaya sankalpa) ಕ್ಕೆ ಬದಲಾಗಿ 'ಸುಳ್ಳು ಸಂಕಲ್ಪ ಯಾತ್ರೆ ಗೆ ನನ್ನ ಶುಭಾಶಯಗಳು ಮತ್ತು ಗಾಢ ಸಾಂತ್ವನಗಳು. ಆದರೆ, ಅವರ ಕಾಮಾಲೆ ಮನಸ್ಸಿನ, ಅದರ ಅರೆಬೆಂದ ಲೆಕ್ಕದ ಬಗ್ಗೆ ನನ್ನ ಅನುಕಂಪ ಇದೆ.
ದೇವೇಗೌಡರ ಕುಟುಂಬ ತೆರಿಗೆ ಹಣ ಲೂಟಿ ಮಾಡಿಲ್ಲ: ಎಚ್.ಡಿ.ಕುಮಾರಸ್ವಾಮಿ
ತಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ನೊಣ ಹುಡುಕುವುದು ಬಿಜೆಪಿಗೆ ಅಂಟಿದ ಜಾಡ್ಯ ಮತ್ತು ಆಜನ್ಮಪರ್ಯಂತ ಬಂದಿರುವ ಚಾಳಿ. ನಮ್ಮ ಪಕ್ಷ ಬಿಡುವವರ ಮಾತು ಹಾಗಿರಲಿ, ನಿಮ್ಮ ಪಕ್ಷದಲ್ಲಿ ವಾರದೊಪ್ಪತ್ತಿನಿಂದ ನಿರಂತರವಾಗಿ ಕೇಳಿಬರುತ್ತಿರುವ ಅರುಣರಾಗ, ವಿಜಯನಾದ ಕಥನಗಳ ಕಥೆ ಏನು ಅಶೋಕ್ ಅವರೇ ಎಂದು ವ್ಯಂಗ್ಯವಾಡಿದ್ದಾರೆ.