ವಿರೋಧ ಪಕ್ಷದ ಅಭ್ಯರ್ಥಿ ಯಾರು ಎಂಬುದು ನನಗೆ ಮುಖ್ಯವಾಗಲ್ಲ. ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿ ಕೆಲಸವೇ ನಮಗೆ ಮುಖ್ಯ ಎಂದು ತಿಳಿಸಿದ ಸಂಸದ ಬಿ.ವೈ.ರಾಘವೇಂದ್ರ 

ಶಿವಮೊಗ್ಗ(ಮಾ.09):  ಎದುರಾಳಿ ಪಕ್ಷದ ಅಭ್ಯರ್ಥಿ ಯಾರೆಂದು ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿ ಕೆಲಸವೇ ನಮಗೆ ಮುಖ್ಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಬಿಡುಗಡೆ ಮಾಡಲಾದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ ಕುಮಾರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದ ಅಭ್ಯರ್ಥಿ ಯಾರು ಎಂಬುದು ನನಗೆ ಮುಖ್ಯವಾಗಲ್ಲ. ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿ ಕೆಲಸವೇ ನಮಗೆ ಮುಖ್ಯ ಎಂದು ತಿಳಿಸಿದ್ದಾರೆ.

ದಲಿತರ ಕೇರಿಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇ ಬಿಜೆಪಿ: ಕೆ.ಎಸ್.ಈಶ್ವರಪ್ಪ

ಅಭಿವೃದ್ಧಿ ಹಾಗೂ ಕಾರ್ಯಕರ್ತರ ಪರಿಶ್ರಮವೇ ನಮಗೆ ಶಕ್ತಿ. ಈ ಚೌಕಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಈ ಬಾರಿಯೂ ಗೆಲ್ಲುವ ವಿಶ್ವಾಸವಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿಯಿಂದ ಬಿ.ವೈ. ರಾಘವೇಂದ್ರ ಅವರೇ ಸ್ಪರ್ಧಿಸುವ ಸಾಧ್ಯತೆಯಿದೆ.