ಮೋದಿ ಯೋಚನೆಗಳು ಅವರ ಸಹೋದ್ಯೋಗಿಗಳಿಗೂ ಗೊತ್ತಾಗಲ್ಲ. ಹೀಗಾಗಿ ಅವರ ಮನದಲ್ಲಿ ಏನಿದೆಯೋ ಗೊತ್ತಿಲ್ಲ. ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧಿಸಲ್ಲ ಸದ್ಯ ರಾಜ್ಯ ಸಭೆಯಲ್ಲಿಯೇ ಇರುತ್ತೇನೆ. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ ಎಂದು ಹೇಳಿದ ಎಚ್.ಡಿ.ದೇವೇಗೌಡ 

ಬೆಂಗಳೂರು(ಜ.14): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ಕುರಿತು ಗೊತ್ತಿಲ್ಲ, ನನ್ನ ಮುಂದೆ ಆ ಬಗ್ಗೆ ಚರ್ಚೆ ಆಗಿಲ್ಲ, ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಮನಸಿನಲ್ಲಿ ವಿನಿದೆಯೋ ಗೊತ್ತಿಲ್ಲ. ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಯೋಚನೆಗಳು ಅವರ ಸಹೋದ್ಯೋಗಿಗಳಿಗೂ ಗೊತ್ತಾಗಲ್ಲ. ಹೀಗಾಗಿ ಅವರ ಮನದಲ್ಲಿ ಏನಿದೆಯೋ ಗೊತ್ತಿಲ್ಲ. ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧಿಸಲ್ಲ ಸದ್ಯ ರಾಜ್ಯ ಸಭೆಯಲ್ಲಿಯೇ ಇರುತ್ತೇನೆ. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ ಎಂದು ಹೇಳಿದರು.

ಮೇಕೆದಾಟು ಯೋಜನೆ: ತಮಿಳ್ನಾಡು ಕ್ಯಾತೆಗೆ ಮಾಜಿ ಪ್ರಧಾನಿ ದೇವೇಗೌಡ ಕಿಡಿ

ರಾಮಮಂದಿರ ಉದ್ಘಾಟನೆಗೆ ಪತ್ನಿ ಜತೆ ಹೋಗ್ತಿನಿ: ಗೌಡ ಸಿದ್ದು ಕೂಡ ಹೋಗೋದನ್ನು ಸ್ವಾಗತಿಸುವೆ

ಬೆಂಗಳೂರು: ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಪತ್ನಿ ಜತೆ ಹೋಗುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಶನಿವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶೇ. 99ರಷ್ಟು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ನನ್ನ ಶ್ರೀಮತಿ ಜತೆ ಹೋಗುವೆ ಎಂದು ತಿಳಿಸಿದರು.

ಇದೇ ವೇಳೆ ಜ. 22ರ ಬಳಿಕ ರಾಮಮಂದಿರಕ್ಕೆ ಹೋಗುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತಿಸು ತ್ತೇನೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡಲು ಹೇಳಿದ್ದಾರೆ. ಇದು ಒಳ್ಳೆಯ - ವಿಚಾರ. ಮೃದು ಹಿಂದುತ್ತವೋ, ಇನ್ನೊಂದೋ ಗೊತ್ತಿಲ್ಲ. ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗುವ ಹೇಳಿಕೆ ಸ್ವಾಗತಾರ್ಹ ಎಂದರು.