ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಸೃಷ್ಟಿಸ್ತಾರೋ ಗೊತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಸೃಷ್ಟಿಯಾಗುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರು (ಜು.04): ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಸೃಷ್ಟಿಯಾಗುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದ ಎಸ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರವನ್ನು ಬೆಂಬಲಿಸಿದ್ದಾರೆ. ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಸೃಷ್ಟಿಯಾಗುತ್ತಾರೋ ಗೊತ್ತಿಲ್ಲ. ರಾಜ್ಯ ರಾಜಕೀಯದಲ್ಲಿಯೂ ಯಾವಾಗ ಬೇಕಾದರೂ ಬದಲಾವಣೆಯಾಗಬಹುದು ಎಂದು ಹೇಳಿದರು. ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಎನ್ನುತ್ತಾರೆ. ರಾಜ್ಯ ರಾಜಕೀಯದಲ್ಲಿನ ಪ್ರಸ್ತುತ ಬದಲಾವಣೆಗಳನ್ನು ಗಮನಿಸಿದರೆ, ರಾಜ್ಯದಲ್ಲಿ ಅಂತಹ ಅಜಿತ್ ಪವಾರ್ ಯಾವಾಗ ಬರುತ್ತಾರೋ ನೋಡಬೇಕು ಎಂದು ಮಾರ್ಮಿಕವಾಗಿ ನುಡಿದರು.
ಸರ್ಕಾರ ಐಸಿಯುಗೆ ಹೋಗಲಿದೆ: ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿನ ರಾಜ್ಯಪಾಲರ ಭಾಷಣವನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರವು ಆದಷ್ಟು ಬೇಗ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಐಸಿಯು ಮೇಲೆ ಮಲಗಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಭಾಷಣವು ರಾಜ್ಯದ ಮುಂದಿನ ದುರ್ಬಲ ದಿನಗಳತ್ತ ಬೊಟ್ಟು ಮಾಡಿದೆ. ಈ ಸರ್ಕಾರ ಐಸಿಯುಗೆ ಹೋಗುವ ಕಾಲವೂ ಶೀಘ್ರವೇ ಬರಲಿದೆ ಎಂದು ಅನಿಸುತ್ತಿದೆ.
ಅತೀ ಹೆಚ್ಚು ಅಶಿಸ್ತು ಇರೋ ಪಕ್ಷ ಬಿಜೆಪಿ: ಸಿಎಂ ಸಿದ್ದರಾಮಯ್ಯ
ಐಸಿಯು ಮೇಲೆ ಈ ಸರ್ಕಾರ ನಡೆಯುವ ಸನ್ನಿವೇಶ ನಿರ್ಮಾಣವಾಗಬಹುದು. ಅಲ್ಲದೇ, ಸಮ್ಮಿಶ್ರ ಸರ್ಕಾರದಂತೆ ಆಗಿದೆ ಎಂದು ವ್ಯಂಗ್ಯವಾಡಿದರು. ಪ್ರತಿಪಕ್ಷ ನಾಯಕನಾಗಿ ಟೀಕಿಸಬೇಕೆಂದು ಸರ್ಕಾರ ಟೀಕಿಸುತ್ತಿಲ್ಲ. ಆದರೆ, ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಏನಿದೆ ಎನ್ನುವುದರ ಬಗ್ಗೆ ಸರ್ಕಾರ ಸತ್ಯ ಮರೆಮಾಚಿದೆ. ಚುನಾವಣೆ ವೇಳೆ ಕಾಂಗ್ರೆಸ್ ಜನರಿಗೆ ಕೊಟ್ಟಅಶ್ವಾಸನೆ ಏನು? ಈಗ ಹೇಳುತ್ತಿರುವುದೇನು? ಭವಿಷ್ಯದ ಕರ್ನಾಟಕದ ಬಗ್ಗೆ ಯಾವುದೇ ಒಳನೋಟ ಇಲ್ಲದ ಭಾಷಣ ಇದಾಗಿದೆ. ಈ ಸರ್ಕಾರಕ್ಕೆ ಮುಂದಿನ ಐದು ವರ್ಷಕ್ಕೆ ಏನು ಕೊಡಬೇಕೆಂಬ ದೂರದೃಷ್ಟಿ, ಆತ್ಮವಿಶ್ವಾಸವೇ ಇಲ್ಲ.
ಬರಿದಾಗುತ್ತಿದೆ ಕೆಆರ್‌ಎಸ್ ಜಲಾಶಯ: ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಂಕಷ್ಟ ಪರಿಸ್ಥಿತಿ
ರಾಜ್ಯಪಾಲರ ಭಾಷಣ ಇರಲಿ, ಬಜೆಟ್ ಭಾಷಣ ಇರಲಿ, ಬಜೆಟ್ ಭಾಷಣ ಇರಲಿ, ಸರ್ಕಾರದ ಮುಂದಿನ ಆಶಯಗಳ ಬಗ್ಗೆ ಬೆಳಕು ಚೆಲ್ಲಬೇಕು. ಈ ಭಾಷಣದಲ್ಲಿ ಬೆಳಕಿನ ಮಾತು ಹಾಗಿರಲಿ, ಬರೀ ಕತ್ತಲೇ ತುಂಬಿದೆ ಎಂದು ಟೀಕಾಪ್ರಹಾರ ನಡೆಸಿದರು. ರಾಜ್ಯಪಾಲರ ಭಾಷಣ ಎಂದರೆ ಹೇಗಿರಬೇಕು? ಅದೂ 135 ಸೀಟುಗಳನ್ನು ಗೆದ್ದ ಪೂರ್ಣ ಬಹುಮತದ ಸರ್ಕಾರದ ರಾಜ್ಯಪಾಲರ ಭಾಷಣ ಎಂದರೆ ಅದಕ್ಕೊಂದು ಗಾಂಭೀರ್ಯ ಬೇಡವೇ? ಆಡಳಿತ ಪಕ್ಷದ ಯಾವ ಶಾಸಕರು ಕೂಡ ರಾಜ್ಯಪಾಲರ ಭಾಷಣ ಕೇಳಿ ಮೇಜು ಕುಟ್ಟಿದ್ದು ನೋಡಲಿಲ್ಲ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟರು.