Asianet Suvarna News Asianet Suvarna News

ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ: ಶಾಸಕ ಲಕ್ಷ್ಮಣ ಸವದಿ ಸ್ಪಷ್ಟನೆ

ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಅವರು ಕೂಡಾ ಅವರ ಹಾದಿಯಲ್ಲಿ ನಡೆಯುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿದೆ. ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು. 
 

I dont need to go back to BJP Says MLA Laxman Savadi gvd
Author
First Published Mar 7, 2024, 6:27 PM IST

ಅಥಣಿ (ಮಾ.07): ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಅವರು ಕೂಡಾ ಅವರ ಹಾದಿಯಲ್ಲಿ ನಡೆಯುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿದೆ. ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆಯ ಸಮಾರಂಭದ ಸಿದ್ಧತೆ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ ಅವರು ಅಥಣಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಕೇಳಿದಂತೆ ಅಭಿವೃದ್ಧಿ ಅನುದಾನ ಒದಗಿಸುತ್ತಿದ್ದಾರೆ. ಮತಕ್ಷೇತ್ರದ ಅಭಿವೃದ್ಧಿ ಮಾಡುವ ಮೂಲಕ ಮತದಾರರ ಋಣ ತೀರಿಸಲು ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ನೆರೆಯ ಮಹಾರಾಷ್ಟ್ರ ಸರ್ಕಾರ ಬೇಸಿಗೆ ಸಂದರ್ಭದಲ್ಲಿ ತಾಲೂಕಿನ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ 4 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಹರಿಸಬೇಕು. ಇನ್ನು ಆಲಮಟ್ಟಿ ಹಿನ್ನೀರಿನ ನೀರನ್ನು ನೆರೆಯ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎರಡು ಟಿಎಂಸಿ ನೀರು ಕೊಡುವ ವಿಚಾರವಾಗಿ ಎರಡು ಸರ್ಕಾರಗಳ ಮಧ್ಯೆ ಒಡಂಬಡಿಕೆ ಆಗಬೇಕು ಎಂಬ ಚಿಂತನೆ ಬಹು ದಿನಗಳಿಂದ ನಡೆಯುತ್ತಿದೆ. 

ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ

ಹಿಂದೆ ಈ ಬಗ್ಗೆ ಮಾತುಕತೆಗಳಾಗಿವೆ. ಆದರೆ ಯಾವುದೇ ಅಧಿಕೃತವಾಗಿ ಒಡಂಬಡಿಕೆ ಆಗಿಲ್ಲ. ಈ ಒಡಂಬಡಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಮನವರಿಕೆ ಮಾಡಲು ನೆರೆಯ ಸಾಂಗ್ಲಿ ಮತ್ತು ಜತ್ ಮತಕ್ಷೇತ್ರಗಳ ಜನಪ್ರತಿನಿಧಿಗಳನ್ನು ಈ ಕಾರ್ಯಕ್ರಮದಲ್ಲಿ ಆಹ್ವಾನಿಸಲಾಗಿದೆ. ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಹಾರಾಷ್ಟ್ರದ ಶಾಸಕರ ಗಮನಕ್ಕೆ ತರಲಾಗುವುದು. ಈ ವಿಷಯ ಅವರ ವಿಧಾನಸಭೆಯಲ್ಲಿ ಚರ್ಚಿಸಲು ಅನುಕೂಲವಾಗಲಿದೆ. ಎರಡು ಸರ್ಕಾರಗಳ ಸಮನ್ವತೆಯಿಂದ ಗಡಿ ಭಾಗದ ಕನ್ನಡಿಗರ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದು ಹೇಳಿದರು.

Follow Us:
Download App:
  • android
  • ios