Asianet Suvarna News Asianet Suvarna News

Chargesheet Against DK Shivakumar: ನಾನು ತಪ್ಪು ಮಾಡಿಲ್ಲ, ಇದು ಷಡ್ಯಂತ್ರ: ಡಿಕೆಶಿ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ. ರಾಜಕೀಯದಲ್ಲಿ ಬಿಜೆಪಿಯವರು ಅವರ ಪಕ್ಷದವರನ್ನೇ ಬಿಡುವುದಿಲ್ಲ. ಇನ್ನು ವಿರೋಧ ಪಕ್ಷದವನಾದ ನನ್ನನ್ನು ಬಿಡುತ್ತಾರೆಯೇ? 

i have complete confidence in the court dk shivakumar reaction after ed chargesheet gvd
Author
Bangalore, First Published May 27, 2022, 3:26 AM IST

ಬೆಂಗಳೂರು (ಮೇ.27): ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ. ರಾಜಕೀಯದಲ್ಲಿ ಬಿಜೆಪಿಯವರು ಅವರ ಪಕ್ಷದವರನ್ನೇ ಬಿಡುವುದಿಲ್ಲ. ಇನ್ನು ವಿರೋಧ ಪಕ್ಷದವನಾದ ನನ್ನನ್ನು ಬಿಡುತ್ತಾರೆಯೇ? ಮುಂದೆ ಇನ್ನಷ್ಟು ಬರಬಹುದು. ಆದರೆ ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ ಮಾಡಿರುವ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲ್ಲಿಸಿದೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದಿದೆ. 

ಇನ್ನೂ ನನ್ನ ಕೈಗೆ ಪ್ರತಿ ಸಿಕ್ಕಿಲ್ಲ. ಬಿಜೆಪಿಯವರು ಅವರ ರಾಜಕೀಯ ಹಾದಿಗೆ ಅಡ್ಡಿಯಾಗಿರುವವರನ್ನು ನಿರ್ಮೂಲನೆ ಮಾಡಲು ಹೊರಟಿದ್ದಾರೆ. ಅವರಿಗೆ ಶರಣಾಗಬೇಕು, ಇಲ್ಲದಿದ್ದರೆ ಅಂತಹವರನ್ನು ಮುಗಿಸಲು ಪ್ರಯತ್ನಿಸುತ್ತಾರೆ. ನಾನು ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನೆ ಎಂದು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನನ್ನನ್ನು ಬಂಧಿಸಿದ 60 ದಿನಗಳ ಒಳಗಾಗಿ ಆರೋಪ ಪಟ್ಟಿಸಲ್ಲಿಸಬೇಕಿತ್ತು. ಅವರು ಸರಿಯಾದ ಸಮಯಕ್ಕೆ ಆರೋಪಪಟ್ಟಿಸಲ್ಲಿಸದ ಕಾರಣ ನನಗೆ ಜಾಮೀನು ದೊರೆತಿತ್ತು. ಆದರೆ ಮೂರು ವರ್ಷಗಳ ನಂತರ ಸಲ್ಲಿಸುತ್ತಿದ್ದಾರೆ. ನನಗೆ ಇನ್ನು ಅದರ ಪ್ರತಿ ಸಿಕ್ಕಿಲ್ಲ. ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ತೆರಿಗೆ ಇಲಾಖೆಯವರು ಕಾನೂನು ವಿರುದ್ಧವಾಗಿ ಸಾಕಷ್ಟುಸೃಷ್ಟಿಸಿದ್ದಾರೆ ಎಂದು ದೂರಿದರು.

Chargesheet Against DK Shivakumar: ಮೋದಿ ವಿರೋಧಿಸಿದ್ರೆ ತುಳೀತಾರೆ, ನಾನು ಬಗ್ಗಲ್ಲ; ಡಿಕೆಶಿ

ಇದು ಬಿಜೆಪಿ ಕಾರ್ಯವೈಖರಿ: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪಿತೂರಿ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ, ಈ ವಿಚಾರ ನಿಮ್ಮೆಲ್ಲರಿಗೂ ತಿಳಿದಿದೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಖರಿ. ಅವರು ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಬಿಜೆಪಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದೆ. ನಾನು ಪ್ರತಿ ವರ್ಷ ನನ್ನ ಆದಾಯ ತೆರಿಗೆ ವಿವರ ಸಲ್ಲಿಸುತ್ತಿದ್ದು, ಈ ಪ್ರಕರಣ ಸಿಬಿಐಗೆ ನೀಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್‌ ಜನರಲ್ ಅವರೇ ಹೇಳಿದ್ದರೂ ಬಿಜೆಪಿ ಸರ್ಕಾರ ನನ್ನ ಪ್ರಕರಣವನ್ನು ಸಿಬಿಐಗೆ ನೀಡಿದೆ. ಅವರು ತಮ್ಮ ಬಳಿ ಇರುವ ಎಲ್ಲ ಅಸ್ತ್ರಗಳನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದರು.

ಅಹ್ಮದ್‌ ಪಟೇಲ್ ಅವರ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಹಾಯ ಮಾಡಿದೆ ಎಂಬ ಕಾರಣಕ್ಕೆ ನನ್ನ ಹಾಗೂ ನನ್ನ ಸ್ನೇಹಿತರ ಮೇಲೆ ದಾಳಿ ಮಾಡಿ, ಅವರ ಹಣವನ್ನೂ ನನ್ನ ಹಣ ಎಂದು ಬರೆದಿದ್ದಾರೆ ಎಂದು ಕಿಡಿಕಾರಿದರು. ಶಿವಕುಮಾರ್‌ ಅವರು ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂಬ ಸಚಿವರಾದ ಅಶ್ವತ್‌್ಥ ನಾರಾಯಣ ಹಾಗೂ ಸುನಿಲ… ಕುಮಾರ್‌ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ಅವರೆಲ್ಲರೂ ನನ್ನ ರಾಜಕೀಯದ ದೊಡ್ಡ ಸ್ನೇಹಿತರು. ಅವರೇ ಕೋರ್ಚ್‌, ನ್ಯಾಯಾಧೀಶರು, ತನಿಖಾಧಿಕಾರಿಗಳಾಗಿದ್ದಾರೆ. ಅವರು ಏನು ಮಾಡುತ್ತಾರೋ ಮಾಡಿಕೊಳ್ಳಲಿ. ಅವರಿಗೆ ಯಶಸ್ಸಾಗಲಿ ಎಂದಷ್ಟೇ ಹೇಳಿದರು.

ಹೆದರಲ್ಲ, ಎಲ್ಲದಕ್ಕೂ ಸಿದ್ಧವಾಗಿದ್ದೇವೆ-ಡಿಕೆಸು: ಬಿಜೆಪಿ ಸರ್ಕಾರದ ಒಳಸಂಚು, ಷಡ್ಯಂತ್ರವನ್ನು ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್‌ನವರು ಸಮರ್ಥವಾಗಿ ಎದುರಿಸಲಿದ್ದಾರೆ. ನಾವು ಎಲ್ಲದ್ದಕ್ಕೂ ಸಿದ್ಧವಾಗಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್‌ ಅವರ ವಿರುದ್ಧ ಆರೋಪಪಟ್ಟಿಸಲ್ಲಿಕೆ ಮಾಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಅವರಿಗೆ ಹೆದರುವುದಿಲ್ಲ, ಶರಣಾಗುವುದಿಲ್ಲ. 

ಚಾರ್ಜ್ ಶೀಟ್ ಜತೆಗೆ ಟ್ರಂಕ್‌ನಲ್ಲಿ ಕೋರ್ಟ್‌ಗೆ ಡಿಕೆಶಿಯ ಆಸ್ತಿ ಲೆಕ್ಕ ಕೊಟ್ಟ ಇಡಿ

ಕಳೆದ ನಾಲ್ಕು ವರ್ಷಗಳಿಂದ ಸುದೀರ್ಘವಾಗಿ ತನಿಖೆ ನಡೆಯುತ್ತಲೇ ಇದೆ, ಇನ್ನೂ ನಡೆಯಲಿ. ಜೈಲಿಗೆ ಹಾಕಿದರೂ ಹೆದರಲ್ಲ ಅದನ್ನು ಎದುರಿಸಲು ನಾವು ಮಾನಸಿಕವಾಗಿ, ದೈಹಿಕವಾಗಿ ಸಮರ್ಥವಾಗಿದ್ದೇವೆ ಎಂದರು. ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಹತ್ತಿಕ್ಕಲು ಯತ್ನಿಸುತ್ತಾರೆ. ವಿಧಾನಸಭೆಯಲ್ಲಿ ಹಣ ವರ್ಗಾವಣೆ ವಿಚಾರ ಪ್ರಸ್ತಾಪವಾಗಿದೆ. ಶಾಸಕರ ಖರೀದಿ ಪ್ರಕರಣ ನಡೆದಿದೆ. ಆದರೂ ಬಿಜೆಪಿಯವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ಹುದ್ದೆ ಮಾರಾಟಕ್ಕಿದೆ ಎಂದಿದ್ದಾರೆ. ಆದರೂ ಈ ಬಗ್ಗೆ ತನಿಖೆ ಇಲ್ಲ. ಇದೆಲ್ಲವೂ ನಿಮಗೆ ತಿಳಿದಿದೆ ಎಂದರು.

Follow Us:
Download App:
  • android
  • ios