Asianet Suvarna News Asianet Suvarna News

ನನಗೆ ನನ್ನದೇ ಆದ ಶಕ್ತಿ ಇದೆ: ಬಿ.ಎಸ್‌.ಯಡಿಯೂರಪ್ಪ

ರಾಜ್ಯದಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟುಶ್ರಮ ಹಾಕಿದ್ದೇನೆ. ಯಾರೂ ಯಾರನ್ನೂ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಎಲ್ಲರಿಗೂ ಅವರದೇ ಆದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ವಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. 

I Have My Own Power Says BS Yediyurappa At Koppal gvd
Author
First Published Dec 16, 2022, 1:30 PM IST

ಬೆಂಗಳೂರು (ಡಿ.16): ರಾಜ್ಯದಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟುಶ್ರಮ ಹಾಕಿದ್ದೇನೆ. ಯಾರೂ ಯಾರನ್ನೂ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಎಲ್ಲರಿಗೂ ಅವರದೇ ಆದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ವಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಗುರುವಾರ ಕೊಪ್ಪಳಕ್ಕೆ ತೆರಳುವ ಮುನ್ನ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿಬೆಳೆಸಿದ್ದೇನೆ. 

ಪಕ್ಷವನ್ನು ಅಧಿಕಾರಕ್ಕೆ ತಂದವರು ಯಾರು? ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಪಕ್ಷದಲ್ಲಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪವು ಸತ್ಯಕ್ಕೆ ದೂರವಾದುದು ಎಂದು ತಿಳಿಸಿದರು. ಇನ್ನು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ, ಗೊಂದಲಗಳಾಗಲಿ ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನೂ ಸೃಷ್ಟಿಸಬಾರದು. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಮ್ಮದು ಒಂದೇ ಅಜೆಂಡಾ ಇದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ಬಿಎಸ್‌ವೈ ನಾಯಕತ್ವದ ಶ್ರೀರಕ್ಷೆಯಿದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮಗಳು ರಾಜ್ಯದಲ್ಲಿ ನಡೆಯುತ್ತವೆ. ಇದೆಲ್ಲರ ಪರಿಣಾಮ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ನನ್ನನ್ನು ಪಕ್ಷವು ನಿರ್ಲಕ್ಷ್ಯ ಮಾಡುತ್ತಿಲ್ಲ. ಎಲ್ಲಾ ಕಾರ್ಯಕ್ರಮಗಳಿಗೂ ಹೋಗುತ್ತಿದ್ದೇನೆ. ಸರ್ಕಾರದ ಕಾರ್ಯಕ್ರಮಕ್ಕೆ ಹೋಗುವುದು ಸರಿಯಲ್ಲ ಎಂಬ ಕಾರಣಕ್ಕಾಗಿ ಹೋಗುವುದಿಲ್ಲ ಅಷ್ಟೇ. ಆದರೆ, ಸಾರ್ವಜನಿಕ ಸಭೆ-ಸಮಾರಂಭಗಳಿಗೆ ನನ್ನನ್ನು ಯಾರೂ ಕರೆಯಬೇಕಾಗಿಲ್ಲ. ನನ್ನ ಕರ್ತವ್ಯವನ್ನು ನಾನು ಮಾಡುತ್ತೇನೆ. ಕೊಪ್ಪಳ ಕಾರ್ಯಕ್ರಮಕ್ಕೆ ನಾನು ಹೋಗುವ ಸ್ಥಿತಿ ಇರಲಿಲ್ಲ. ಆದರೆ, ನಡ್ಡಾ ಅವರು ಬರುತ್ತಿರುವುದಕ್ಕೆ ಹೋಗಿದ್ದೇನೆ ಎಂದರು.

ಉಸಿರು ನಿಲ್ಲಿಸೋಣ: ದೇಶದಲ್ಲಿ ನಾಯಕತ್ವದ ಕೊರತೆಯಲ್ಲಿರುವ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಸ್ವಲ್ಪ ಉಸಿರಾಡುತ್ತಿದೆ. ಅದರ ಉಸಿರು ನಿಲ್ಲಿಸಬೇಕಿದೆ. ರಾಜ್ಯದಲ್ಲಿ ಬಿಜೆಪಿ ಪರ ಗಾಳಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಸರ್ವೇಯೊಂದರ ಪ್ರಕಾರ ನೂರಕ್ಕೆ 73ರಷ್ಟುಜನರು ಮತ್ತೊಮ್ಮೆ ಪ್ರಧಾನಿ ಮೋದಿ ಆಗಬೇಕು ಎಂದಿದ್ದಾರೆ ಎಂದರು.

ಮತ್ತೆ ಬಿಜೆಪಿ ಅಧಿಕಾರಕ್ಕೆ: ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕೇತ್ರ ಗೆದ್ದ ಮೇಲೆ ಕಾಂಗ್ರೆಸ್‌ ರಾಜ್ಯದಲ್ಲಿ ಧೂಳೀಪಟವಾಗಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಐದು ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು. ಕಾಂಗ್ರೆಸ್‌ ಅನಗತ್ಯವಾಗಿ ಮೋದಿ ಅವರನ್ನು ಟೀಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲ ಸಮುದಾಯದ ನಾಯಕರ ಜಯಂತಿಯನ್ನು ಬಿಜೆಪಿ ಮಾಡಿದೆ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಶ್ಯಾಮ್‌ ಪ್ರಸಾದ್‌ ಮುಖರ್ಜಿ ನಿಗೂಢ ಸಾವು, ತಾಷ್ಕೆಂಟ್‌ನಲ್ಲಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅನುಮಾನಸ್ಪದ ಸಾವು ಸೇರಿದಂತೆ ಕಾಂಗ್ರೆಸ್‌ ಕಾಲದಲ್ಲಿ ಹಲವು ನಾಯಕರ ಅನುಮಾನಸ್ಪದವಾಗಿ ಸಾವಾಗಿದೆ. ಇದಕ್ಕೆ ಯಾರು ಉತ್ತರ ಕೊಡಬೇಕು ಎಂದರು.

Karnataka Politics: ಒಗ್ಗಟ್ಟು ತೋರಿ ಮುನಿಸು ಮುಚ್ಚಿದ ಬಿಜೆಪಿ ದಿಗ್ಗಜರು

ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಮೈ ಮರೆಯಬಾರದು. ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಹೇಳಬೇಕು. ರಾಜ್ಯದಲ್ಲಿ ಶೇ. 70ರಷ್ಟು ಮತವನ್ನು ಎಲ್ಲ ಕ್ಷೇತ್ರದಲ್ಲಿ ಪಡೆಯಬೇಕಿದೆ ಎಂದು ಬಿಎಸ್‌ವೈ ಸೂಚ್ಯವಾಗಿ ಕಾರ್ಯಕರ್ತರನ್ನು ಎಚ್ಚರಿಸಿದರು. ಕೊಪ್ಪಳದಲ್ಲಿ ನಡೆದ ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ ಕಾರ್ಯಕ್ರಮ ಕಲ್ಯಾಣ ಕರ್ನಾಟಕದ ನೆಲದಿಂದಲೇ 2023ರ ಚುನಾವಣೆಗೆ ರಣಕಹಳೆಯನ್ನು ಬಿಜೆಪಿ ಮೊಳಗಿಸಿತು. ಈ ಮೂಲಕ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ತನ್ನ ಶಕ್ತಿಯನ್ನು ತೋರ್ಪಡಿಸಿತು.

Follow Us:
Download App:
  • android
  • ios