ಬಿಜೆಪಿಗೆ ಹೋಗಿ ತಪ್ಪು ಮಾಡಿದೆ: ಚಿಂಚನಸೂರು
ಆರೆಸ್ಸೆಸ್ ಸಿದ್ಧಾಂತ ಹೊಂದಿರುವ ಬಿಜೆಪಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡುವುದಿಲ್ಲ. ನರೇಂದ್ರ ಮೋದಿಯಿಂದ ಬಡವರ ಕಲ್ಯಾಣವಾಗಲು ಸಾಧ್ಯವಿಲ್ಲ ಎಂದ ಬಾಬುರಾವ್ ಚಿಂಚನಸೂರು.
ಗುರುಮಠಕಲ್(ಮಾ.26): ಬಿಜೆಪಿಗೆ ಹೋಗಿ ನಾನು ತಪ್ಪು ಮಾಡಿದೆ. ಇನ್ನು ಮುಂದೆ ಮಲ್ಲಿಕಾರ್ಜುನ ಖರ್ಗೆಯವರ ಮಾರ್ಗದರ್ಶನದಲ್ಲೇ ಮುಂದುವರೆಯುವೆ ಎಂದು ಮಾಜಿ ಸಚಿವ, ಕೋಲಿ ಸಮಾಜದ ಪ್ರಭಾವಿ ನಾಯಕ ಬಾಬುರಾವ್ ಚಿಂಚನಸೂರು ಹೇಳಿದರು.
ಗುರುಮಠಕಲ್ ಮತಕ್ಷೇತ್ರದ ಸೈದಾಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ಸಿದ್ಧಾಂತ ಹೊಂದಿರುವ ಬಿಜೆಪಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡುವುದಿಲ್ಲ. ನರೇಂದ್ರ ಮೋದಿಯಿಂದ ಬಡವರ ಕಲ್ಯಾಣವಾಗಲು ಸಾಧ್ಯವಿಲ್ಲ ಎಂದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿ ಯೋಜನೆ ಜಾರಿ: ಬಂಡೆಪ್ಪ ಖಾಶೆಂಪೂರ್
ಕಲ್ಯಾಣ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಭದ್ರಕೋಟೆ. ಈ ಭಾಗದಲ್ಲಿ ಬಿಜೆಪಿ ಹುನ್ನಾರ ನಡೆಯುವುದಿಲ್ಲ. ತಂದೆಗೆ ತಕ್ಕ ಮಗನಾಗಿ ಉತ್ತಮ ಕೆಲಸಕ್ಕೆ ಖ್ಯಾತಿ ಪಡೆದಿರುವ ಪ್ರಿಯಾಂಕ್ ಖರ್ಗೆ ಚಿತ್ತಾಪುರದಲ್ಲಿ ಈ ಬಾರಿಯೂ ಗೆಲುವಿನ ನಗೆ ಬೀರಲಿದ್ದಾರೆ ಎಂದ ಬಾಬುರಾವ್, ನಾನು ಕಾಂಗ್ರೆಸ್ಸಿಗೆ ಮರಳಿದ ನಂತರ ಬಿಜೆಪಿ ಅಲ್ಲಿ ಉಳಿಯುವುದಿಲ್ಲ ಎಂದು ಲೇವಡಿ ಮಾಡಿದರು.
ಗುರುಮಠಕಲ್ ಕ್ಷೇತ್ರವಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಇದರೊಟ್ಟಿಗೆ ಖರ್ಗೆ ಅವರ ಕೀರ್ತಿ ಪತಾಕೆ ಹಾರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.