ಮೈಸೂರು, (ಜ.11): ಚಾಮರಾಜನದ ಕೊಳ್ಳೆಗಾಲ ಕ್ಷೇತ್ರದ ಬಿ.ಎಸ್.ಪಿ ಶಾಸಕ ಎನ್. ಮಹೇಶ್ ಅವರ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಬಿಎಸ್‌ಪಿಯಿಂದ ಅಮಾನತುಗೊಂಡಿರುವ ಮಹೇಶ್ ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.

ಇದಕ್ಕೆ ಪೂರಕವೆಂಬಂತೆ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಹೌದು....ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮತನಾಡಿದರು.

ಬಿಜೆಪಿ ಸೇರಲು ಮುಂದಾದ ಶಾಸಕ: ವಿಜಯೇಂದ್ರ ಜತೆ ಮೊದಲ ಸುತ್ತಿನ ಮಾತುಕತೆ ಮುಕ್ತಾಯ..! 

ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ. ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ. ಆದರೆ ಕೊಡೋದು ಬಿಡೋದು ಅವರಿಗೆ ಬಿಟ್ಟಿದ್ದು,  ನನಗೆ ಸಚಿವ ಸ್ಥಾನ‌ ಸಿಗುತ್ತದೆಯೋ ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಆದರೆ ನಾನು ಯಡಿಯೂರಪ್ಪನವರ ಜೊತೆ ಇರಲು ನಿರ್ಧಾರ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ. ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿ ಮಾಡುವೆ ಎಂದು ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರು.