ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ 

ನವದೆಹಲಿ(ಜೂ.27):  ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. 

ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ ಎಂದು ಹೇಳಿದ್ದಾರೆ.

ಮೈತ್ರಿ ಪಕ್ಷದಿಂದ ಚನ್ನಪಟ್ಟಣದಲ್ಲಿ ಸ್ಪರ್ಧೆ ಯಾರದ್ದು..? ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ಗಾಗಿ ಜೋರಾದ ಫೈಟ್‌

ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಇನ್ನು, ಕಾಂಗ್ರೆಸ್‌ನಿಂದ ಡಿಕೆಶಿ ಕುಟುಂಬದವರು ನಿಂತರೆ ದೊಡ್ಡ ಹೋರಾಟ ನಡೆಯುವುದು ಗ್ಯಾರಂಟಿ ಎಂದರು.