Lok Sabha Election 2024: ಪ್ರೀತಂಗೆ ಹಾಸನಕ್ಕೆ ಬರಬೇಡಿ ಎಂದಿದ್ದೇನೆ: ರಾಧಾಮೋಹನ್
ಈವರೆಗೆ ನೀವು ಪ್ರೀತಂ ಗೌಡರಿಗೇಕೆ ಕರೆ ಮಾಡಿಲ್ಲ. ಅವರನ್ನು ಹೊರತುಪಡಿಸಿ ಉಳಿದ ಪರ್ಯಾಯ ನಾಯಕರನ್ನೆಲ್ಲಾ ಸಂಪರ್ಕಿಸಿದ್ದೀರಿ. ಅವರನ್ನೇಕೆ ಸಂಪರ್ಕಿಸಿಲ್ಲ ಎಂದು ಪ್ರಶ್ನಿಸುವ ಮೂಲಕ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಅವರನ್ನೇ ತಬ್ಬಿಬ್ಬು ಮಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್
ಹಾಸನ(ಏ.07): ಬಿಜೆಪಿ ನಾಯಕ ಪ್ರೀತಂಗೌಡ ಅವರಿಗೆ ಹಾಸನದಲ್ಲಿ ಇರಬೇಡಿ ಎಂದು ನಾನೇ ಹೇಳಿದ್ದೇನೆ. ನಮಗೆ ಹಾಸನ ಎಷ್ಟು ಮುಖ್ಯವೋ, ಮೈಸೂರು ಅಷ್ಟೇ ಮುಖ್ಯ. ಅಲ್ಲಿ ಯದು ವೀರ್ ಅವರನ್ನು ನಿಲ್ಲಿಸಿದ್ದೇವೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾ ಗಿರುವ ಪ್ರೀತಂ ಗೌಡ ಅವರು ಮೈಸೂರಿ ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹೇಳಿದರು.
ನಗರದಲ್ಲಿ ಶನಿವಾರ ನಡೆದ ಬಿಜೆಪಿ-ಜೆಡಿಎಸ್ ತುರ್ತು ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು. ಈವರೆಗೆ ನೀವು ಪ್ರೀತಂ ಗೌಡರಿಗೇಕೆ ಕರೆ ಮಾಡಿಲ್ಲ. ಅವರನ್ನು ಹೊರತುಪಡಿಸಿ ಉಳಿದ ಪರ್ಯಾಯ ನಾಯಕರನ್ನೆಲ್ಲಾ ಸಂಪರ್ಕಿಸಿದ್ದೀರಿ. ಅವರನ್ನೇಕೆ ಸಂಪರ್ಕಿಸಿಲ್ಲ ಎಂದು ಪ್ರಶ್ನಿಸುವ ಮೂಲಕ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಅವರನ್ನೇ ತಬ್ಬಿಬ್ಬು ಮಾಡಿದರು.
ಕೋಲಾರ ಕ್ಷೇತ್ರ ಅಧಿಕೃತವಾಗಿ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ; ದೊಡ್ಡಗೌಡ್ರಿಗೆ ಗುನ್ನಾ ಇಟ್ಟ ಪ್ರೀತಂಗೌಡರ ಶಿಷ್ಯ!
ಮೈತ್ರಿ ನಂತರವೂ ಪ್ರೀತಂಗೌಡರು ಜೆಡಿಎಸ್ ಗೆ ಸಹಕರಿ ಸುತ್ತಿಲ್ಲ ಎನ್ನುವ ದೇವೇಗೌಡರ ದೂರಿನ ಮೇರೆಗೆ ಸಭೆ ಕರೆಯಾಗಿತ್ತು. ಸಭೆಯಲ್ಲಿ ಪ್ರೀತಂಗೌಡ ಪರ ಬ್ಯಾಟಿಂಗ್ ಮಾಡಿದ ಅಗರ್ವಾಲ್, ಪ್ರೀತಂಗೌಡರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಅವರು ನಮ್ಮ ಪಕ್ಷದ ಆಸ್ತಿ. ಜೆಡಿಎಸ್ ನಾಯಕರು ತಮ್ಮ ನಡ ವಳಿಕೆ ಬದಲಾವಣೆ ಮಾಡಿ ಕೊಳ್ಳಬೇಕು. ಪ್ರೀತಂಗೌಡ ಖಂಡಿತಾ ಮೈತ್ರಿ ಪರ ಕೆಲಸ ಮಾಡ್ತಾರೆ. ಅವರನ್ನು ವಿಶ್ವಾಸಕ್ಕೆ ತೆಗೆದು ಕೊಂಡೇ ಕೆಲಸ ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್‌ಗೆ ಮತ ಹಾಕುವಂತೆ ಪ್ರೀತಂಗೌಡ ಬೆಂಬಲಿಗರ ಹೇಳಿಕೆ ವಿಚಾರವಾಗಿ ಮಾತನಾಡಿ, 'ಇದು ಸತ್ಯಕ್ಕೆ ದೂರವಾದ ವಿಚಾರ. ನಾವು ಹಾಸನದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಆ ರೀತಿ ಹೇಳಿಕೆ ಎಲ್ಲೂ ಕಂಡು ಬಂದಿಲ್ಲ ಎಂದರು.