ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು : ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ ಪದೆ ಅದನ್ನೇ ಕೇಳುವುದು ಸರಿಯಲ್ಲ. ಈ ವಿಚಾರದಲ್ಲಿ ಹೈಕಮಾಂಡ್‌ ಹೇಳಿದ್ದೇ ಅಂತಿಮ ಎಂದು ಈಗಾಗಲೇ ಹೇಳಿದ್ದೇನೆ. ಹೈಕಮಾಂಡ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಇನ್ನು, ನನಗೆ ದೆಹಲಿಗೆ ಬರುವಂತೆ ತಿಳಿಸಿಲ್ಲ. ಅವರು ಕರೆಯದೆ ನಾನು ಏಕೆ ಹೋಗಲಿ? ನಾನು ದೆಹಲಿಗೆ ಹೋಗುವುದಿಲ್ಲ. ನನಗೆ ಇಲ್ಲೇ ಬಹಳಷ್ಟು ಕೆಲಸವಿದ್ದು, ಬಜೆಟ್‌ ಸಿದ್ಧತಾ ಕಾರ್ಯಗಳಿವೆ ಎಂದು ಸ್ಪಷ್ಟಪಡಿಸಿದರು.

ಅವರು ನನಗೆ ಪತ್ರ ಬರೆದಿದ್ದಾರೆ

ಬಜೆಟ್‌ ಸಿದ್ಧತಾ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗೈರಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಅವರು ನನಗೆ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.

ಪ್ರತಾಪ್‌ ಸಿಂಹಗೆ ಟಿಕೆಟ್‌ ನೀಡಲಿಲ್ಲ:

ಅಧಿಕಾರದಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರತಾಪ್‌ ಸಿಂಹಗೆ ಟಿಕೆಟೇ ಕೊಡಲಿಲ್ವಪ್ಪ ಎಂದು ವ್ಯಂಗ್ಯವಾಡಿದರು.