Asianet Suvarna News Asianet Suvarna News

Karnataka Politics: ಶಿಗ್ಗಾಂವಿ ಬಿಟ್ಟು ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

*   2023ಕ್ಕೆ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ
*   ಬಜೆಟ್‌ ಘೋಷಣೆ ತ್ವರಿತ ಅನುಷ್ಠಾನಕ್ಕೆ ಸಿಎಸ್‌ ಸಮಿತಿ
*  ನಾಲ್ಕು ರಾಜ್ಯಗಳ ಚುನಾವಣೆ ಬಳಿಕ ದೇಶದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿ

I Will Be Contest in Shiggaon Assembly Constituency Says CM Basavaraj Bommai grg
Author
Bengaluru, First Published Mar 27, 2022, 7:00 AM IST

ಹಾವೇರಿ(ಮಾ.27): ‘ಶಿಗ್ಗಾಂವಿ ಕ್ಷೇತ್ರದ ಜನ ನನ್ನನ್ನು ಮೂರು ಬಾರಿ ಗೆಲ್ಲಿಸಿದ್ದಾರೆ. ಅತಿ ಹೆಚ್ಚು ಪ್ರೀತಿಯನ್ನು ಕ್ಷೇತ್ರದ ಜನ ತೋರಿಸಿದ್ದಾರೆ. ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲೇ ಸ್ಪರ್ಧಿಸುತ್ತೇನೆ.’ ಇದು ತಮ್ಮ ಮುಂದಿನ ಚುನಾವಣೆ ಸ್ಪರ್ಧೆ ಬಗ್ಗೆ ಹುಟ್ಟಿಕೊಂಡಿದ್ದ ಊಹಾಪೋಹಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ಪಷ್ಟನುಡಿಗಳು. ಸವಣೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೇರೆ ಕಡೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ಮತ್ತೆ ಬಿಜೆಪಿ ಅಧಿಕಾರಕ್ಕೆ:

ಇದೇ ವೇಳೆ 2023ರಲ್ಲಿ ಮತ್ತೆ ಸ್ವಂತ ಶಕ್ತಿಯ ಮೇಲೆ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಾಲ್ಕು ರಾಜ್ಯಗಳ ಚುನಾವಣೆ ಬಳಿಕ ದೇಶದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಇದು 2024ರ ಚುನಾವಣೆಯ ದಿಕ್ಸೂಚಿ ಎನ್ನುವುದು ಸ್ಪಷ್ಟ. ರಾಜ್ಯದಲ್ಲೂ ಕೂಡ ದೊಡ್ಡ ಪ್ರಮಾಣದಲ್ಲಿ ಬಿಜೆಪಿಗೆ ಬೆಂಬಲವಾಗುತ್ತಿದೆ ಎಂದರು.

ಸ್ಟಾರ್ಟ್‌ಅಪ್ ಉದ್ದಿಮೆಗಳ ಸ್ಥಾಪನೆಯಲ್ಲಿ ರಾಜ್ಯ ಮಂಚೂಣಿ: ಸಿಎಂ ಬೊಮ್ಮಾಯಿ

ಏ.5ರಂದು ರಾಜ್ಯಕ್ಕೆ ಮೋದಿ ಭೇಟಿ ಸಾಧ್ಯ​ತೆ 

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಏ.5ರಂದು ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ಮುಖ್ಯ​ಮಂತ್ರಿ ಬಸ​ವ​ರಾಜ ಬೊಮ್ಮಾ​ಯಿ ತಿಳಿ​ಸಿ​ದ್ದಾ​ರೆ. ನಗ​ರ​ದಲ್ಲಿ ಶನಿ​ವಾ​ರ ಸುದ್ದಿ​ಗಾ​ರ​ರೊಂದಿಗೆ ಮಾತ​ನಾಡಿ, ಕೆಲ ವಿಶೇಷ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮೋದಿ ಅವರು ರಾಜ್ಯಕ್ಕೆ ಆಗ​ಮಿ​ಸುವ ಸಾಧ್ಯತೆ ಇದೆ. ಆದರೆ ಕಾರ್ಯಕ್ರಮ ಇನ್ನೂ ಅಂತಿಮವಾಗಿಲ್ಲ ಎಂದು ಬೊಮ್ಮಾಯಿ ಹೇಳಿ​ದ​ರು.

ರಾಷ್ಟ್ರೀಯ ಪಂಚಾ​ಯತ್‌ ರಾಜ್‌ ದಿನ​ವಾದ ಏ.24ರಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾ​ರೆಂದು ಹೇಳ​ಲಾ​ಗಿತ್ತು. ಅಂದು ಅವರು ಶಿವ​ಮೊಗ್ಗ ಜಿಲ್ಲೆಯ ಹೊಳ​ಲೂರು ಗ್ರಾಪಂಗೆ ಭೇಟಿ ನೀಡಿ ವಿವಿಧ ಅಭಿ​ವೃದ್ಧಿ ಕಾಮ​ಗಾ​ರಿ​ಗ​ಳಿಗೆ ಚಾಲನೆ ನೀಡ​ಬೇ​ಕಿತ್ತು.

ಬಜೆಟ್‌ ಘೋಷಣೆ ತ್ವರಿತ ಅನುಷ್ಠಾನಕ್ಕೆ ಸಿಎಸ್‌ ಸಮಿತಿ

ಬಜೆಟ್‌ ಘೋಷಣೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನ ಮಾಡುವುದಕ್ಕೆ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು ಇಂತಹ ಸಮಿತಿ ರಚನೆ ಇದೇ ಮೊದಲು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ ಘೋಷಣೆಗಳನ್ನು ತೀವ್ರಗತಿಯನ್ನು ಅನುಷ್ಠಾನ ಮಾಡಬೇಕೆಂದು ಇಲಾಖೆಗಳಿಗೂ ಸೂಚಿಸಿದ್ದೇನೆ. ಆರ್ಥಿಕ ಇಲಾಖೆ ಕಾರ್ಯದರ್ಶಿ ಸೇರಿದಂತೆ ಎಲ್ಲ ಇಲಾಖೆ ಮುಖ್ಯಸ್ಥರ ಸಂಯೋಜನೆ ಮಾಡಿ ಏ.30ರೊಳಗೆ ಯೋಜನೆ ಅನುಷ್ಠಾವಾಗಲು ಕಾರ್ಯಾದೇಶ ಕೊಡಬೇಕು ಎಂದು ನಿರ್ದೇಶನ ನೀಡಿದ್ದೇನೆ. ಪ್ರತಿ ತಿಂಗಳು ನಾನೇ ಪ್ರಗತಿ ಪರಿಶೀಲನೆ ಮಾಡಲಿದ್ದೇನೆ. ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಬಜೆಟ್‌ ಅನ್ನು ಎಲ್ಲ ವರ್ಗದ ಜನರಿಂದ, ರೈತರು, ಕೂಲಿಕಾರರು, ಉದ್ಯಮಿಗಳು, ವ್ಯಾಪಾರಸ್ಥರು, ಮಹಿಳೆಯರು ಸೇರಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನವ ಕರ್ನಾಟಕದಿಂದ ನವಭಾರತ ನಿರ್ಮಿಸುವ ಧ್ಯೇಯ ಇಟ್ಟುಕೊಂಡು ಬಜೆಟ್‌ ಮಂಡನೆ ಮಾಡಿದ್ದೇನೆ. ಇದು ತಕ್ಷಣ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಬಜೆಟ್‌ ಅನುಷ್ಠಾನ ಸಮಿತಿ ರಚಿಸಲಾಗಿದೆ. ಈ ಸಮಿತಿ ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಘೋಷಿತ ಯೋಜನೆಗಳಿಗೆ ಕಾರ್ಯಾದೇಶ ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಈ ಸಮಿತಿ ರಚಿಸಲಾಗಿದೆ.

ಸಿಎಂ ಬಸವರಾಜ್‌ ಬೊಮ್ಮಾಯಿ ಟ್ವೀಟರ್‌ ಖಾತೆ ಹ್ಯಾಕ್?‌

ಜಿಮ್‌ಗೆ ಸಿದ್ಧತೆ:

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇವೆ. ನವೆಂಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ. ಇದಕ್ಕೆ ಬೇಕಾದ ತಯಾರಿಯನ್ನು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರ ನೇತೃತ್ವದಲ್ಲಿ ನಡೆದಿವೆ. ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಎಫ್‌ಡಿಐ:

ವಿದೇಶ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ)ಯಲ್ಲಿ ಕಳೆದ ಮೂರು ಕ್ವಾರ್ಟರ್‌ನಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನ ಪಡೆದಿದೆ. ಇದು ವಿದೇಶಿ ಹೂಡಿಕೆದಾರರಿಗೆ ನಮ್ಮ ರಾಜ್ಯದ ಮೇಲಿರುವ ವಿಶ್ವಾಸ ತೋರಿಸುತ್ತದೆ ಎಂದು ತಿಳಿಸಿದರು. ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಹಲವರಿದ್ದರು.
 

Follow Us:
Download App:
  • android
  • ios