‘ಪ್ರಸಕ್ತ ಅವಧಿಯ ಐದು ವರ್ಷವೂ ನಾನೇ ಮುಖ್ಯಮಂತ್ರಿ. ಮುಂದಿನ ಅವಧಿಯ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ನಾನೇ ಮುಖ್ಯಮಂತ್ರಿ ಆಗಿ ಇರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ (ಮಾ.13): ‘ಪ್ರಸಕ್ತ ಅವಧಿಯ ಐದು ವರ್ಷವೂ ನಾನೇ ಮುಖ್ಯಮಂತ್ರಿ. ಮುಂದಿನ ಅವಧಿಯ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ನಾನೇ ಮುಖ್ಯಮಂತ್ರಿ ಆಗಿ ಇರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಬುಧವಾರದ ಕಲಾಪದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಸದಸ್ಯರ ನೇಮಕಕ್ಕೆ ಆಕ್ಷೇಪಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ‘ಕಳೆದ ಅವಧಿಯಲ್ಲಿ (2013-18) ಸಿದ್ದರಾಮಯ್ಯ ಅವರು ಹೇಯ್....ಅಶೋಕ ಬರೆದುಕೊಳ್ಳಪ್ಪ, ನಾನೇ ಪರ್ಮನೆಂಟು’ ಎಂದಿದ್ದರು. ಆದರೆ ಆ ನಂತರ ಕಾಣೆಯಾಗಿ ಹೋದರು. ಕಾಣದಂತೆ ಮಾಯವಾದನೋ ನಮ್ಮ ಶಿವಾ ಎಂಬಂತಾದರು. ಈಗ ಮತ್ತೆ ನಾನೇ ಬರ್ತೀನಿ ಅಂತಿದ್ದಾರೆ ಎಂದು ಕಾಲೆಳೆದರು. ಇದೇ ವೇಳೆ ರಾಜ್ಯದಲ್ಲಿ ಪವರ್ ಶೇರಿಂಗ್ (ಅಧಿಕಾರ ಹಂಚಿಕೆ) ವಿಚಾರವಾಗಿ ಅನೇಕ ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ.
ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕೇಂದ್ರದ ನಡೆ ಖಂಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಐದೂ ವರ್ಷ ಪೂರೈಸಲಿ ಎಂದು ನಾವು ಬಯಸುತ್ತೇವೆ ಎಂದು ಅಶೋಕ್ ಹೇಳಿದರು. ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅವರು, ‘ಹೌದು ಈ ಐದು ವರ್ಷ ಅಲ್ರೀ, ಮತ್ತೆ ಮುಂದಿನ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದು ಹೇಳಿದರು. ಆಗಲೂ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂಬ ಬಿಜೆಪಿ ಸದಸ್ಯರ ಪ್ರಶ್ನೆಗೆ, ‘ಹೌದು ನಾನೇ ಇರುತ್ತೇನೆ’ ಎಂದು ಸ್ಪಷ್ಟವಾಗಿ ಹೇಳಿದರು.
ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಒಳಮೀಸಲು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ. ಜಾರಿಗೆ ದತ್ತಾಂಶ ಬೇಕಿದ್ದು, ಈ ವಿಚಾರದಲ್ಲಿ ಜಸ್ಟೀಸ್ ನಾಗಮೋಹನ್‌ದಾಸ್ ಅವರ ಸಮಿತಿ ರಚಿಸಲಾಗಿದ್ದು, ವರದಿ ಬಂದಕೂಡಲೇ ಜಾರಿಮಾಡಿಯೇ ತೀರುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ತಾಲೂಕಿನ ರಂಗಸ್ಥಳದ ಶ್ರೀ ರಂಗನಾಥನ ಸನ್ನಿಧಿಯಲ್ಲಿ ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ಭಾನುವಾರ ನಡೆದ 45 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಧೂವರರನ್ನು ಆಶೀರ್ವದಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.
ಸಚಿವರ ಧೋರಣೆ ಬಗ್ಗೆ ಮತ್ತೆ ಶಾಸಕರು ಗರಂ: ಶಾಸಕಾಂಗ ಪಕ್ಷದ ಸಭೆಯಲ್ಲೂ ಸಿಎಂ ಸಿದ್ದು ಮುಂದೆ ಅಸಮಾಧಾನ
ಎಲ್ಲರ ಹೋರಾಟದ ಫಲ: ಒಳಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಸಿ.ಮಹದೇವಪ್ಪ, ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ. ಕಳೆದ 30 ವರ್ಷಗಳಿಂದ ಇದಕ್ಕಾಗಿ ಶ್ರಮಿಸಿದ ಎಲ್ಲಾ ಸಂಘಸಂಸ್ಥೆಗಳ ಹೋರಾಟದ ಫಲವಾಗಿ ಒಳಮೀಸಲು ಜಾರಿಯಾಗುವ ಹಂತ ತಪುಪಿದೆ. ಕಮಿಷನ್ ವರದಿ ಬಂದ ಕೂಡಲೇ ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
