ಬಿಜೆಪಿ ಸೋಲಿನ ಹೊಣೆಯನ್ನು ನಾನೇ ಹೊರುವೆ: ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬೆಳಗಾವಿಯಲ್ಲೂ ಬಿಜೆಪಿ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

I will bear the responsibility of BJPs defeat Says Basavaraj Bommai gvd

ಬೆಳಗಾವಿ (ಜೂ.06): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬೆಳಗಾವಿಯಲ್ಲೂ ಬಿಜೆಪಿ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯ ವೇಳೆ ನಾವು ತಡವಾಗಿ ಸೀಟ್‌ ಅನೌನ್ಸ್‌ ಮಾಡಿದ್ದೇವು. ಹೊಸಬರಿಗೆ ಟಿಕೆಟ್‌ ಕೊಟ್ಟಿದ್ದು ಸಂಯೋಜನೆ ಆಗಲಿಲ್ಲ. ಸ್ಥಳೀಯವಾಗಿಯೂ ಕೆಲವು ತೊಂದರೆ ಆಗಿದೆ. ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಎಂದರು.

ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಪ್ರತಿಕ್ರಿಯಿಸಿ, ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಖಂಡಿತವಾಗಿ ಅತಿ ಶೀಘ್ರವೇ ಮಾಡುತ್ತೇವೆ. ಈ ಅಧಿವೇಶನದೊಳಗೆ ಪ್ರತಿಪಕ್ಷ ನಾಯಕನ ಆಯ್ಕೆ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರದ ಅಮಲು ಬಂದಿದೆ. ಕೆಲ ಸಚಿವರ ಹೇಳಿಕೆ ನೋಡಿದರೆ ವಾಕ್‌ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದ್ದಾರೆ ಎನಿಸುತ್ತಿದೆ. ತಮ್ಮ ಅಭಿಪ್ರಾಯಕ್ಕೆ ಸಹಮತ ಇಲ್ಲದವರ ಧ್ವನಿಯನ್ನು ಹತ್ತಿಕ್ಕುವ ಪ್ರವೃತ್ತಿಯಲ್ಲಿ ಮಾತನಾಡುತ್ತಿದ್ದಾರೆ. 

ಪ್ರಕೃತಿ ನಡುವಿನ ಸಂಘರ್ಷದಲ್ಲಿ ನಾವು ಸೋತರೆ ಬದುಕುತ್ತೇವೆ: ರಿಷಬ್‌ ಶೆಟ್ಟಿ

ಅತೀ ಶೀಘ್ರದಲ್ಲೇ ಕರ್ನಾಟಕದಲ್ಲಿ ಎಮರ್ಜೆನ್ಸಿ ಎದುರಾಗಲಿದೆ ಎಂದು ಕಿಡಿಕಾರಿದರು. ಅಧಿಕಾರಿಗಳಿಗೆ ಒಬ್ಬ ಮಂತ್ರಿ, ‘ಕೆಲಸ ಮಾಡದಿದ್ದರೆ ಚಾಕುವಿನಿಂದ ಹೊಡೆಯುತ್ತೇವೆ’ ಎನ್ನುತ್ತಾರೆ. ಯಾರನ್ನು ಜೈಲಿಗೆ ಹಾಕುತ್ತಿರೋ ಹಾಕಿ. ನಿಮ್ಮ ನೀತಿ, ವರ್ತನೆಗಳ ವಿರುದ್ಧ ಜನರು ತಿರುಗಿ ಬಿದ್ದರೆ ನಿಮಗೆ ಜೈಲುಗಳು ಸಾಕಾಗುವುದಿಲ್ಲ. ತಾಕತ್ತಿನಿಂದ ಮಣಿಸುತ್ತೇವೆಂದರೆ, ನಮ್ಮದೇನೂ ಇಸ್ಲಾಂ ರಾಷ್ಟ್ರವಲ್ಲ. ಎಮರ್ಜೆನ್ಸಿ ಹೇರಲು ಪ್ರಜಾಪ್ರಭುತ್ವದಲ್ಲಿ ಜನತೆ ಕೈಯಲ್ಲಿ ದೊಡ್ಡ ಶಕ್ತಿಯಿದೆ. ಖಂಡಿತವಾಗಿ ನಾವು ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್‌ ಬಿಲ್‌ ಏರಿಕೆಗೆ ಖಂಡನೆ: ಹಿಂದಿನ ಕಾಂಗ್ರೆಸ್‌ ಸರ್ಕಾರದ ಕಾಲದಲ್ಲಿ ದೊಡ್ಡ ಪ್ರಮಾಣದ ಹೊರೆಯನ್ನು ಹೆಸ್ಕಾಂ ಮೇಲೆ ಹಾಕಿದ್ದರು. ನಾನು ಮುಖ್ಯಮಂತ್ರಿ ಆಗಿದ್ದಾಗ ದೊಡ್ಡ ಪ್ರಮಾಣದ ಅನುದಾನ ನೀಡಿದ್ದೆ. .13 ಸಾವಿರ ಕೋಟಿ ನೀಡಿ ಹೆಸ್ಕಾಂ, ಕೆಪಿಟಿಸಿಎಲ್‌ ಪುನಶ್ಚೇತನ ಮಾಡಿದ್ದೇವೆ. ಕಾಂಗ್ರೆಸ್‌ ಪಕ್ಷಕ್ಕೆ ಇದು ಗೊತ್ತಿಲ್ಲ ಅಂಥೆನಿಲ್ಲ. ವಿದ್ಯುಚ್ಛಕ್ತಿ ಕ್ಷೇತ್ರ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಹಳೆ ಬಾಕಿ ಅಂತ ಪುಕ್ಕಟೆ ಹೊರೆಯನ್ನು ಜನರ ಮೇಲೆ ಹಾಕಿದ್ದಾರೆ. ಇದು ಜನರಿಗೆ ಮಾಡಿರುವ ಒಂದು ದೋಖಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೈಗಾರಿಕೆ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ: ಸಚಿವ ಎಂ.ಬಿ.ಪಾಟೀಲ್‌

ಶಾಸಕ ವಿನಯ ಹೇಳಿಕೆಗೆ ಬೊಮ್ಮಾಯಿ ಬೆಂಬಲ!: ಸಂಪುಟದಲ್ಲಿ ಲಿಂಗಾಯತ ಸಮುದಾಯದ ಕಡೆಗಣನೆ ಕುರಿತು ಶಾಸಕ ವಿನಯ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ,ಇದು ಸಾಮಾನ್ಯ ಲಿಂಗಾಯತನ ಮನಸ್ಸಿನಲ್ಲಿ ಇರುವಂಥದ್ದು. ಇದು ಕಾಂಗ್ರೆಸ್‌ನ ಆಂತರಿಕ ವಿಚಾರ. ಆ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಈ ಸಲ ಲಿಂಗಾಯತ ಸಮುದಾಯದ ಹೆಚ್ಚಿನ ಶಾಸಕರು ಗೆದ್ದಿದ್ದಾರೆ. ಸಂಪುಟದಲ್ಲಿ ಇನ್ನೂ ಹೆಚ್ಚಿನ ಪ್ರಾತಿನಿಧಿತ್ವವನ್ನು ಲಿಂಗಾಯತ ಸಮುದಾಯಕ್ಕೆ ಕೊಡಬೇಕಿತ್ತು ಎಂದರು.

Latest Videos
Follow Us:
Download App:
  • android
  • ios