Karnataka Assembly Elections: ಚನ್ನಪಟ್ಟಣದಿಂದಲೇ ಮುಂದಿನ ಸಲವೂ ಸ್ಪರ್ಧೆ: ಎಚ್‌ಡಿಕೆ ಸ್ಪಷ್ಟನೆ
HD Kumaraswamy Constituency: ಮುಂದಿನ ವಿಧಾನಸಭೆ ಚುನಾವಣೆಯನ್ನು ಚನ್ನಪಟ್ಟಣದಿಂದಲೇ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ
ಚನ್ನಪಟ್ಟಣ (ಅ. 22): ಮುಂದಿನ ವಿಧಾನಸಭೆ ಚುನಾವಣೆಯನ್ನು (Assembly Elections 2023) ಚನ್ನಪಟ್ಟಣದಿಂದಲೇ ಸ್ಪರ್ಧಿಸುವುದಾಗಿ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy), ಮಾಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದೆಲ್ಲ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ರಾಮನಗರ (Ramanagara) ಜಿಲ್ಲೆ ಚನ್ನಪಟ್ಟಣ ತಾಲೂಕಿನ ಭೈರಾಪುರದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಯಾವುದೇ ಕ್ಷೇತ್ರಕ್ಕೆ ಹೋಗುವುದಿಲ್ಲ. ಚನ್ನಪಟ್ಟಣದಿಂದಲೇ ಸ್ಪರ್ಧಿಸುತ್ತೇನೆ. ಮಾಗಡಿ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಸುಳ್ಳು. ಅಲ್ಲಿಂದ ಈಗ ಗೆದ್ದಿರುವ ನಮ್ಮ ಪಕ್ಷದ ಅಭ್ಯರ್ಥಿಯೇ ಸ್ಪರ್ಧೆ ಮಾಡಲಿದ್ದಾರೆ. ಹಾಗೂ ಮತ್ತೆ ಅವರೇ ಗೆದ್ದು ಶಾಸಕರಾಗಲಿದ್ದಾರೆ ಎಂದರು.
ರಾಜ್ಯಾದ್ಯಂತ ಪಕ್ಷದ ಸಂಘಟನೆ ಕೈಗೊಂಡಿದ್ದ ಕಾರಣ ಕೆಲಕಾಲ ಚನ್ನಪಟ್ಟಣಕ್ಕೆ ಬರಲಿಲ್ಲ. ಇಡೀ ಜಿಲ್ಲೆಯೇ ನನ್ನ ಕರ್ಮಭೂಮಿ. ರಾಮನಗರದಿಂದ ನಾನು ಸ್ಪರ್ಧೆ ಮಾಡುತ್ತಿದ್ದವನು ಅನಿವಾರ್ಯ ಕಾರಣದಿಂದ ಚನ್ನಪಟ್ಟಣಕ್ಕೆ ಬರಬೇಕಾಯಿತು. ದೇವೇಗೌಡರ ಕುಟುಂಬದೊಂದಿಗೆ ಈ ತಾಲೂಕಿನ ಜನತೆ ಹೊಂದಿರುವ ಅವಿನಾಭಾವ ಸಂಬಂಧ ಇದಕ್ಕೆ ಕಾರಣ ಎಂದರು.
ಚನ್ನಪಟ್ಟಣದಲ್ಲಿ ಅಲ್ಪ ಸಂಖ್ಯಾತರ ಕಚೇರಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿರುವ ಎಚ್ ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಅಲ್ಪ ಸಂಖ್ಯಾತರ ಕಚೇರಿಯನ್ನು ತೆರೆಯಲಾಗಿದೆ, ಪಕ್ಷದ ಮುಖಂಡರು ಅತ್ಯಂತ ಆಸಕ್ತಿ ವಹಿಸಿ ಕಚೇರಿ ಆರಂಭಿಸಿದ್ದಾರೆ ಎಲ್ಲಾ ವರ್ಗದವರಿಗೂ ಕಚೇರಿ ಮೀಸಲಿರಸಲಾಗುತ್ತದೆ" ಎಂದರು.
ಅಸೆಂಬ್ಲಿ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಎಚ್‌ಡಿಕೆ
ಇಬ್ರಾಹಿಂ ಅವರ ಸಹಕಾರದೊಂದಿಗೆ ರಾಜ್ಯದಲ್ಲಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಹೊರಟಿದ್ದೇವೆ ಎಂದ ಅವರು "ಕಾರ್ಯಕರ್ತರಿಗೆ ಪಕ್ಷದಲ್ಲಿ ವೈಯಕ್ತಿಕವಾಗಿ ಅಧಿಕಾರವನ್ನು ನೀಡಲಾಗುತ್ತದೆ. ಕಾರ್ಯಕರ್ತರ ರಕ್ಷಣೆಯನ್ನು ಪಕ್ಷದಿಂದ ಮಾಡಲಾಗುತ್ತದೆ. ರಾಜ್ಯಾದ್ಯಾಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು. ನಮಗೆ ಹೆಚ್ಚಿನ ಸಮಯವಿಲ್ಲ. ಎಲ್ಲರೂ ರಾಜ್ಯ ಪ್ರವಾಸ ಮಾಡಲು ಸಿದ್ದರಾಗಬೇಕು. ನಿಖಿಲ್ ಕುಮಾರಸ್ವಾಮಿ ಅವರಿಗೆ ಹಳೆ ಮೈಸೂರು ಭಾಗದ ಸಂಪೂರ್ಣ ಜವಾಬ್ದಾರಿ ನೀಡಲಾಗುವುದು. 60 ಕ್ಕೂ ಹೆಚ್ಚು ಕ್ಷೇತ್ರಗಳ ಜವಬ್ದಾರಿಯನ್ನು ನಿಖಿಲ್ ಅವರಿಗೆ ನೀಡಲಾಗುವುದು" ಎಂದರು.
ವಿರೋಧಿಗಳ ಅಪಪ್ರಚಾರ: "ಚನ್ನಪಟ್ಟಣ ತಾಲ್ಲೂಕಿನಲ್ಲಿ ಪಕ್ಷದ ಕೆಲವರು ಗೊಂದಲು ಸೃಷ್ಟಿಸಿದರು. ಆ ನಿಟ್ಟಿನಲ್ಲಿ ನಿನ್ನೆ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವ ಬಗ್ಗೆ ಕಿರುಹೊತ್ತಿಗೆಯನ್ನು ಹಳ್ಳಿ ಹಳ್ಳಿಗೂ ತಲುಪಸಲಾಗಿತ್ತದೆ. ಇಡೀ ರಾಜ್ಯದಲ್ಲಿ ನನ್ನ ಹೆಸರು ಉಳಿಸುವ ಕೆಲಸ ಮಾಡಲಾಗುತ್ತದೆ. ಕೇವಲ ಕಲ್ಲಿನ ಮೇಲೆ ನನ್ನ ಹೆಸರು ಇಡಲು ಬಯಸುವುದಿಲ್ಲ.ಯಾರೋ ವಿರೋಧಿಗಳು ನನ್ನ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ" ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.
ಎರಡು ಕಡೆ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡವೇ ಕಾರಣ: ಕುಮಾರಸ್ವಾಮಿ ಕ್ಷೇತ್ರ ಬದಲಾಯಿಸುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು "ನಮ್ಮ ಕೆಲವು ವಿರೋಧಿಗಳು ಅಪಪ್ರಚಾರ ಮಾಡಿದ್ದಾರೆ. ಚನ್ನಪಟ್ಟಣ ಕಾರ್ಯಕರ್ತರೂ ಕುಮಾರಸ್ವಾಮಿ ಈ ಬಾರಿ ಮಾಗಡಿಯಲ್ಲಿ ಸ್ಪರ್ಧೆ ಮಾಡಬೇಕೆಂದು ಹೇಳಿದ್ದಾರೆ. ಕೆಲವರು ಮಂಡ್ಯ ಭಾಗದಲ್ಲೂ ಸ್ಪರ್ಧೆ ಮಾಡಲು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಅದಕ್ಕೆ ನಾನು ಸ್ಪಷ್ಟ ಪಡಿಸಿದ್ದೇನೆ. ಚುನಾವಣೆ ಸಂಧರ್ಭದಲ್ಲಿ ಕ್ಷೇತ್ರ ಬದಲಿಸಲು ನಾನು ಟೂರಿಂಗ್ ಟಾಕೀಸ್ ಅಲ್ಲ ಎಂದು ಹೇಳಿದ್ದೇನೆ.
ಜಿಟಿಡಿ ಬಗ್ಗೆ ಒಂದೇ ಒಂದು ಅಪಸ್ವರ ಕೇಳಿದರೂ ಸಹಿಸುವುದಿಲ್ಲ : ಎಚ್.ಡಿ. ದೇವೇಗೌಡ
ನಾನು ಕಳೆದ ಬಾರಿ ಎರಡು ಕಡೆ ಸ್ಪರ್ಧೆ ಮಾಡಲು ಕಾರ್ಯಕರ್ತರ ಒತ್ತಡವೇ ಕಾರಣ. ನಾನು ರಾಜ್ಯದಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ರಾಮನಗರ ವಿಧಾನಸಭಾ ಕ್ಷೇತ್ರವೇ ಕಾರಣ. ರಾಮನಗರ- ಚನ್ನಪಟ್ಟಣ ಎರಡು ಕ್ಷೇತ್ರಗಳು ನನ್ನ ಎರಡು ಕಣ್ಣುಗಳು ಇದ್ದಂತೆ. ಕೆಲವು ಬೇರೆ ಪಕ್ಷದ ರಾಜಕೀಯ ಮುಖಂಡರಿಗೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತೀನಿ ಅನ್ನೋದೆ ಗೊಂದಲದಲ್ಲಿದೆ. ನಾನು ಚನ್ನಪಟ್ಟಣ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸೊಲ್ಲ ಎಂದು ಎಚ್‌ಡಿಕೆ ಹೇಳಿದರು.