Asianet Suvarna News Asianet Suvarna News

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ ಅಂಬರೀಷ್‌

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ನನ್ನ ಕರ್ಮಭೂಮಿ, ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುವುದು ನನ್ನ ಬಯಕೆ ಎಂದ ಮಂಡ್ಯ ಸಂಸದೆ ಸುಮಲತಾ 

I will Contest Independent if Not Get BJP Ticket in Mandya Says MP Sumalatha Ambareesh grg
Author
First Published Dec 24, 2023, 4:42 AM IST

ಮದ್ದೂರು(ಡಿ.24):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ನನ್ನ ಕರ್ಮಭೂಮಿ, ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುವುದು ನನ್ನ ಬಯಕೆ ಎಂದರು.

ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಹಿಜಾಬ್ ನಿಷೇಧ ವಾಪಸ್ ; ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮಂಡ್ಯದ 'ಹಿಜಾಬ್ ಲೇಡಿ' ಖ್ಯಾತಿಯ ಮಸ್ಕಾನ್

ಮಂಡ್ಯದಲ್ಲಿ ನನ್ನ ಪತಿ ಅಂಬರೀಷ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಾಕಷ್ಟು ಜನಪ್ರಿಯ ಕೆಲಸಗಳನ್ನು ಮಾಡಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ. ನಂತರದ ದಿನಗಳಲ್ಲಿ ನನ್ನ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ನನ್ನ ಆಸೆ

ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ ಎಂದು ಮಂಡ್ಯ ಸಂಸದೆ ಸುಮಲತಾ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios