ನನಗೆ ಈ ಬಾರಿ ಸಚಿವ ಸ್ಥಾನ ಸಿಗೋದಂತು ಕನ್ಫರ್ಮ್ ಎಂದು ಸಿಎಂ ಆಪ್ತ ಮುಖಂಡರೋರ್ವರು ಹೇಳಿದ್ದಾರೆ.
ಬೆಂಗಳೂರು (ನ.05): ಯಡಿಯೂರಪ್ಪ ಕೇವಲ ವೀರಶೈವ ಸಮುದಾಯಕ್ಕೆ ಸೇರಿದವರಲ್ಲ. ಎಲ್ಲಾ ಸಮಾಜಕ್ಕೂ ಸೇರಿದ ಪ್ರಶ್ನಾತೀತ ನಾಯಕ
ಕೆಲ ವೀರಶೈವ ಮುಖಂಡರು ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಇವರಿಗೆ ಅಧಿಕಾರ ನೀಡಿದವರು ಯಾರು ಹೀಗೆಂದು ಬಿಜೆಪಿ ಮುಖಂಡ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದೆ ಹತಾಶರಾಗಿ ಈ ರೀತಿ ಹುಚ್ಚು ಹುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ. ಶಾಸಕರು ಎಲ್ಲರೂ ಒತ್ತಾಯ ಮಾಡುತ್ತೇವೆ . ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಬಿಜೆಪಿಯೇ 2 ಸೀಟು ಗೆಲ್ಲಲಿದೆ : ಗುಪ್ತಚರ ಇಲಾಖೆಯಿಂದ ಮಾಹಿತಿ .
ಇನ್ನು ಯಡಿಯೂರಪ್ಪ ಪೂರ್ಣ ಅವಧಿಗೆ ಸಿಎಂ, ಮುಂದೆಯೂ ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಇಲ್ಲ ಎಂದು ರೇಣುಕಾಚಾರ್ಯ ಹೇಳಿದರು.
ನನಗೆ ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ನೀಡುತ್ತಾರೆ ಎನ್ನುವ ಭರವಸೆಯಿದೆ. ಹಾದಿ ಬೀದಿಯಲ್ಲಿ ನಾನು ಸಚಿವ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ, ಕೇಳುವುದಿಲ್ಲ. ಆದರೆ ಈ ಬಗ್ಗೆ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.
ವಿನಯ್ ಕುಲಕರ್ಣಿ ಅರೆಸ್ಟ್ : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಪಾತ್ರ ಇದೆ. ಅದಕ್ಕೆ ಸಿಬಿಐ ತನಿಖೆ ನಡೆಸುತ್ತಿದೆ ಇದರಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಸಿಬಿಐ ದುರುಪಯೋಗ ಪಡಿಸಿಕೊಂಡಿರುವುದು ಕಾಂಗ್ರೆಸ್ ಎಂದು ರೇಣುಕಾಚಾರ್ಯ ಹೇಳಿದರು.
