ನಾನು ಮಂತ್ರಿ ಆಗುವುದು ಪಕ್ಕಾ ಆಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ನನಗೂ ಖಾತೆ ಸಿಗಲಿದೆ ಎಂದು ಮಾಜಿ ಶಾಸಕರೋರ್ವರು ಹೇಳಿದರು.

ಬೆಂಗಳೂರು [ಡಿ.14]: ಶೂನ್ಯ ಮಾಸ ಇರುವುದರಿಂದ ಸಚಿವ ಸಂಪುಟ ವಿಸ್ತರಣೆ ಒಂದು ವಾರ ತಡವಾಗಬಹುದು. ಆದರೆ, ನನಗೆ ಸಚಿವ ಸ್ಥಾನ ನೀಡುವುದಾಗಿ ಈಗಾಗಲೇ ಮಾತು ಕೊಟ್ಟಿದ್ದಾರೆ ಎಂದು ಅನರ್ಹ ಶಾಸಕ ಆರ್‌. ಶಂಕರ್‌ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡುವುದಾಗಿ ಮಾತು ನೀಡಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. 

ಆದರೂ ನಾನು ಮಂತ್ರಿ ಆಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಮಂತ್ರಿ ಆಗುತ್ತೇನೆ ಎಂದಿದ್ದಾರೆ.

BSYಯಿಂದ ಶ್ರೀರಾಮುಲು ಅಂತರ ಕಾಯ್ದುಕೊಳ್ತಿರೋದೇಕೆ?: ಇಲ್ಲಿವೆ 7 ಕಾರಣಗಳು...

ಶೂನ್ಯ ಮಾಸ ಇರುವುದರಿಂದ ಇನ್ನೂ ಒಂದು ವಾರ ತಡವಾಗಬಹುದು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸದ್ಯದಲ್ಲೇ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.

ಈಗಾಗಲೇ ಎಲ್ಲಾ ಅನರ್ಹ ಶಾಸಕರಿಗೂ ಮಂತ್ರಿ ಸ್ಥಾನ ಸಿಗಲಿದೆ ಎಂದು ಸಿಎಂ ಯಡಿಯೂರಪ್ಪ ಕೂಡ ಹೇಳಿದ್ದು, ಈ ಚುನಾವಣೆಯಲ್ಲಿ ಸೋತ ಎಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಕೂಡ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.