ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ

ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರವಿಲ್ಲ. ಪಕ್ಷದ ವರಿಷ್ಠರು ಯಾರು ಸ್ಪರ್ಧಿಸಬೇಕು ಎನ್ನುವುದನ್ನು ನಿರ್ಧರಿಸುತ್ತಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು. 

I will not contest Lok Sabha elections Says Govind Karajol gvd

ವಿಜಯಪುರ (ನ.13): ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರವಿಲ್ಲ. ಪಕ್ಷದ ವರಿಷ್ಠರು ಯಾರು ಸ್ಪರ್ಧಿಸಬೇಕು ಎನ್ನುವುದನ್ನು ನಿರ್ಧರಿಸುತ್ತಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು. ತಮ್ಮನ್ನು ಇಲ್ಲಿ ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾವು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಸಂತಸ ತಂದಿದೆ. ಯುವಕರಿಗೆ ಪ್ರೋತ್ಸಾಹ ಸಿಗುತ್ತೆ ಎಂಬುದನ್ನು ಬಿಜೆಪಿ ತೋರಿಸಿದೆ. ಯಡಿಯೂರಪ್ಪನವರು ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೂ ಸಿಕ್ಕಿದೆ. 

ವಿಜಯೇಂದ್ರರ ನಾಯಕತ್ವದಲ್ಲಿ ಯುವಕರು ಸಂಘಟಿತರಾಗಿ 25ಕ್ಕೂ ಅಧಿಕ ಲೋಕಸಭೆ ಸ್ಥಾನ ಗೆಲ್ಲಿಸಲಿದ್ದಾರೆ. ಇವರು ಇದೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದರು. ರಾಜಕಾರಣಲ್ಲಿದ್ದವರು ಸಹಜವಾಗಿಯೇ ಅಧಿಕಾರ ಅಪೇಕ್ಷೆ ಪಡುತ್ತಾರೆ. ಕಳೆದ ಬಾರಿ ನಾವು ಸರ್ಕಾರವನ್ನು ಕಳೆದುಕೊಂಡಿದ್ದೇವೆ. ಹಾಗಾಗಿ ಅಳೆದು ತೂಗಿ ಹೈಕಮಾಂಡ್ ನಿರ್ಧಾರ ಮಾಡಿರುತ್ತದೆ. ಅದಕ್ಕೆ ನಾವೆಲ್ಲ ಬೆಂಬಲಿಸಬೇಕು. ಅಸಮಾಧಾನ ಇದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತೆ. ಭಿನ್ನಾಭಿಪ್ರಾಯ ಎಲ್ಲೂ ಇಲ್ಲ. ಒಂದೆರೆಡು ದಿನ ಅಸಮಾಧಾನ ಇರುತ್ತೆ, ಅದೆಲ್ಲ ಸರಿಯಾಗುತ್ತೆ ಎಂದರು.

ವಿಜಯೇಂದ್ರ ಆಯ್ಕೆಯಿಂದ ಕೆಲವರಲ್ಲಿ ಅಸಮಾಧಾನವಾಗಿರುವುದು ನಿಜ: ಮುರುಗೇಶ್‌ ನಿರಾಣಿ

ಬಿಜೆಪಿ ದೊಡ್ಡ ಪಕ್ಷವಾಗಿ ವಿರೋಧ ಪಕ್ಷದ ಕೆಲಸ ಮಾಡುತ್ತದೆ. ಬಿಜೆಪಿಯವರೇ ವಿರೋಧ ಪಕ್ಷದ ನಾಯಕ ಆಗುತ್ತಾರೆ. ಮೈತ್ರಿಯಲ್ಲಿ ಅಧಿಕಾರ ಹಂಚಿಕೆ ಮಾಡಬಹುದು. ಆದರೆ, ವಿರೋಧ ಪಕ್ಷದ ಸ್ಥಾನ ಕೊಡಲು ಬರುವುದಿಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಸುಳ್ಳು ಗ್ಯಾರಂಟಿ ಕೊಟ್ಟಿದ್ದಾರೆ. ತಾಕತ್ ಇದ್ದರೆ ಲೋಕಸಭೆ ಚುನಾವಣೆ ಎದುರಿಸಿ ತೋರಿಸಲಿ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ನುಡಿದರು.

ಮಿತ್ರಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನ ಬಿಟ್ಟು ಕೊಡಲಾಗದು: ಮೈತ್ರಿಯಲ್ಲಿ ಅಧಿಕಾರ ಹಂಚಿಕೆ ಮಾಡಬಹುದು. ಆದರೆ, ವಿರೋಧ ಪಕ್ಷದ ಸ್ಥಾನ ಕೊಡಲು ಬರುವುದಿಲ್ಲ. ಬಿಜೆಪಿ ದೊಡ್ಡ ಪಕ್ಷವಾಗಿ ವಿರೋಧ ಪಕ್ಷದ ಕೆಲಸ ಮಾಡುತ್ತದೆ. ಹಾಗಾಗಿ ಬಿಜೆಪಿಯವರೇ ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಗೆ ಸಂತಸ ವ್ಯಕ್ತಪಡಿಸಿದರು.

ರಾಜಕೀಯ ಬೇಡ ಎನ್ನಿಸಿದರೆ ರಾಜಕಾರಣ ಬಿಟ್ಟು ಕುಳಿತುಕೊಳ್ಳುತ್ತೇನೆ: ಸಿ.ಟಿ.ರವಿ

ಮುಂದುವರಿದು, ಯುವಕರಿಗೆ ಪ್ರೋತ್ಸಾಹ ಸಿಗುತ್ತೆ ಎಂಬುದನ್ನು ಬಿಜೆಪಿ ತೋರಿಸಿದೆ. ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ಮುಂದೆ ವಿಜಯೇಂದ್ರ ಅವರ ನಾಯಕತ್ವದಲ್ಲಿ ಯುವಕರು ಸಂಘಟಿತರಾಗಿ 25ಕ್ಕೂ ಅಧಿಕ ಲೋಕಸಭೆ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರಲ್ಲದೆ, ಇನ್ನು, ಅಸಮಾಧಾನ ಇದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದರು.

Latest Videos
Follow Us:
Download App:
  • android
  • ios