ಚಿತ್ರದುರ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮೊಳಕಾಲ್ಮುರು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ತಿಳಿಸಿದ್ದಾರೆ. 

ಭಾನುವಾರ ನಾಯಕನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ವರಿಷ್ಠರು ಲೋಕಸಭಾ ಚುನಾವಣೆ ನಿಮಿತ್ತ 7 ಕ್ಷೇತ್ರಗಳ ಉಸ್ತುವಾರಿ ನೀಡುವುದಾಗಿ ತಿಳಿಸಿದ್ದಾರೆ. 

ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದರೆ ಇತರೆ ಕ್ಷೇತ್ರಗಳಿಗೆ ತೆರಳಿ ಪಕ್ಷವನ್ನು ಸಂಘಟಿಸಲು ಕಷ್ಟವಾಗುವುದು. ಆದ್ದರಿಂದ ಸದ್ಯ ರಾಜ್ಯ ರಾಜಕಾರಣದಲ್ಲಿ ಉಳಿಯಬೇಕು ಎನ್ನುವ ನಿರ್ಧಾರ ಕೈಗೊಂಡಿದ್ದೇನೆ ಎಂದರು.

ಪಕ್ಷದ ವರಿಷ್ಠರು ಯಾವುದೇ ಕಾರಣಕ್ಕೂ ಅಪರೇಷನ್‌ ಕಮಲಕ್ಕೆ ಮುಂದಾಗಬಾರದು ಎಂದು ಸೂಚನೆ ನೀಡಿದ್ದಾರೆ. ಅದರಂತೆ ನಾವ್ಯಾರೂ ಅತ್ತ ಗಮನಹರಿಸುತ್ತಿಲ್ಲ. ಲೋಕಸಭೆ ಚುನಾವಣೆಯತ್ತ ದೃಷ್ಟಿ ಕೇಂದ್ರೀಕರಿಸಿದ್ದೇವೆಂದು ಪ್ರಶ್ನೆಯೊಂದಕ್ಕೆ ಶ್ರೀರಾಮುಲು ಉತ್ತರಿಸಿದರು.