ಕಾಂಗ್ರೆಸ್‌ನಿಂದ ಸ್ಪರ್ಧೆ ಸುಳ್ಳು; ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡೋಲ್ಲ: ಸೋಮಣ್ಣ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಹೊಸ ವರ್ಷದ ಜ.10ರೊಳಗೆ ಎಲ್ಲ ಗೊಂದಲಗಳೂ ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

I will not leave BJP V Somanna clarification at Bengaluru rav

ಬೆಂಗಳೂರು (ಜ.1) : ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಹೊಸ ವರ್ಷದ ಜ.10ರೊಳಗೆ ಎಲ್ಲ ಗೊಂದಲಗಳೂ ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.7 ಅಥವಾ 8ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

ನನಗಾಗಿರುವ ನೋವು, ನನಗಾಗಿರುವ ತೊಂದರೆ ಯಾವುದೇ ಕಾರಣಕ್ಕೂ ಯಾರಿಗೂ ಆಗಬಾರದು. ಪಕ್ಷವನ್ನು ನಂಬಿಕೊಂಡು, ಪಕ್ಷದ ವರಿಷ್ಠರು ಹೇಳುವ ಕೆಲಸವನ್ನು ಮಾಡಿಕೊಂಡು ಹೋಗುವವರಿಗೆ ತೊಂದರೆ ಯಾವತ್ತೂ ಆಗಬಾರದು. ಪಕ್ಷದ ಅನೇಕ ನಾಯಕರು ನನ್ನೊಂದಿಗೆ ಮಾತನಾಡಿದ್ದಾರೆ. ಅನೇಕ ಅನುಭವ ನನಗೂ ಆಗಿವೆ. ಮಾತುಕತೆ ನಡೆಸಿದ ಬಳಿಕ ಜಾಡಿಸಿ ಒದೆಯುತ್ತಾರೆ ಎಂಬುದು ನನಗೂ ಗೊತ್ತಿದೆ. ಇವತ್ತಿನ ಪರಿಸ್ಥಿತಿಗೆ ಕಾರಣಕರ್ತರಾದವರನ್ನೂ ಕರೆದು ಮಾತನಾಡುವ ಮೂಲಕ ವಾತಾವರಣ ತಿಳಿಗೊಳಿಸಬೇಕು ಎಂಬ ಮಾತನ್ನು ಹೇಳಿದ್ದೇನೆ ಎಂದರು.

ಕುಸ್ತಿ ಫೆಡರೇಷನ್‌ ಕಚ್ಚಾಟ ರಾಜ್ಯ 10 ಸಾವಿರ ಕುಸ್ತಿಪಟುಗಳು ಅತಂತ್ರ!

ಈಗಾಗಲೇ ಕೇಂದ್ರ ವರಿಷ್ಠರಿಗೆ ನನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದೇನೆ. ಅವರು ಕೂಡ ಎರಡು ಬಾರಿ ನನ್ನನ್ನು ದೆಹಲಿಗೆ ಕರೆದಿದ್ದಾರೆ. ಕಾರಣಾಂತರಗಳಿಂದ ಹೋಗಿಲ್ಲ. ಇನ್ನು ಮುಂದೆ ನನ್ನ ಮೇಲೆ ಗದಾಪ್ರಹಾರ ನಡೆಯದಂತೆ ನೋಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟ ವಿಷಯ. ರಾಜಕೀಯ ನಿಂತ ನೀರಲ್ಲ. ದೊಡ್ಡವರ ಮಾತು ಕೇಳಿದೆ. ನೋವು ಮಾಡಿಕೊಂಡೆ. ನನ್ನ ಈ ಪರಿಸ್ಥಿತಿಗೆ ಕಾರಣರಾದವರ ಜತೆ ವರಿಷ್ಠರು ಚರ್ಚೆ ಮಾಡಿ ಎಲ್ಲವನ್ನೂ ಬಗೆಹರಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಸ್ಪರ್ಧೆ ಸುಳ್ಳು:

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸೋಮಣ್ಣ, ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮಣ್ಣ ಬರುತ್ತಾರೆ ಎಂದು ವದಂತಿ ಹಬ್ಬಿಸಲಾಗುತ್ತಿದೆ. ಆದರೆ, ಇದು ಸುಳ್ಳು. ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ ಮತ್ತು ಲೋಕಸಭಾ ಟಿಕೆಟ್ ಕೇಳಿಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾಗಾದರೆ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಪಕ್ಷದ ವರಿಷ್ಠರು ಏನು ಹೇಳುವರೋ ಅದನ್ನು ಮಾಡುತ್ತೇನೆ. ಒಂದು ವೇಳೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ವರಿಷ್ಠರು ತೀರ್ಮಾನಿಸಿದರೆ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು. 

ರಾಹುಲ್‌ ಜಿಯು-ಜಿತ್ಸು ಆಟ ನೋಡಿ ಭಜರಂಗ್ ಪೂನಿಯಾ ಶಾಕ್‌! ವಿಡಿಯೋ ವೈರಲ್‌

ಬಡವರಿಗೆ, ಜನಸಾಮಾನ್ಯರಿಗೆ ಸ್ಪಂದಿಸಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪರಾಭವಗೊಂಡ ಹಿನ್ನೆಲೆಯಲ್ಲಿ ಈಗ ನಮ್ಮ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದಾರೆ ಎಂದು ಇದೇ ವೇಳೆ ಬೇಸರದಿಂದ ಹೇಳಿದರು.

ರಾಮಮಂದಿರ ಬಗ್ಗೆ ಪ್ರಸ್ತಾಪಿಸಿದ ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ಭವ್ಯ ಭಾರತ ನಿರ್ಮಾಣವಾಗಲಿದೆ. ಈಗಾಗಲೇ ಕೋಟ್ಯಂತರ ಜನರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ. ದೇಶ ಪ್ರಗತಿ ಸಾಧಿಸುತ್ತಿದೆ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios