2028ರ ಚುನಾವಣೆಯನ್ನು ಹೇಗೆ ಎದುರಿಸಬೇಕೆಂದು ತಮಗೆ ತಿಳಿದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಾವು ಫುಟ್ಬಾಲ್ ಆಡುವವನಲ್ಲ, ಬದಲಿಗೆ ಚೆಸ್ ಆಡುವವನು ಎಂದ ಅವರು, ಸಿದ್ದರಾಮಯ್ಯನವರೊಂದಿಗೆ ಸೇರಿ 136 ಸ್ಥಾನಗಳನ್ನು ಗೆದ್ದು ಸಾಬೀತುಪಡಿಸಿದ್ದೇನೆ ಎಂದ ಸಿಎಂ.

ವಿಧಾನಸಭೆ (ಆ.15) 2028ರ ಚುನಾವಣೆ ಹೇಗೆ ಎದುರಿಸಬೇಕೆಂದು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಾವು ಒಟ್ಟಾಗಿ ಹೋರಾಟ ಮಾಡುತ್ತೇವೆ. ಅಂತಿಮ ಫಲಿತಾಂಶ ಜನರದ್ದು

ಶುಕ್ರವಾರ ಸದನಕ್ಕೆ ಸಂಪುಟದ ಸಚಿವರನ್ನು ಪರಿಚಯಿಸುವ ವೇಳೆ ಮಾತನಾಡಿದ ಅವರು, ಅಧಿಕಾರದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ಇದೇ ಸದನದಲ್ಲಿ ಮಾತನಾಡಿದಾಗ ನಾನು ಒಂದು ಮಾತು ಹೇಳಿದ್ದೆ. ಒಬ್ಬ ಧೈರ್ಯಶಾಲಿ ವ್ಯಕ್ತಿಯಿಂದ ಬಹುಮತ ಸಾಧ್ಯವಾಗುತ್ತದೆ. ಸಿದ್ದರಾಮಯ್ಯ ಅವರು ಸೇರಿ ನಾವು 136 ಜನ ಒಂದೇ ಎಂದು ಅಂತ ಹೇಳಿದ್ದೆ. ನಾನು ಅದನ್ನು ಸಾಬೀತುಪಡಿಸಿದ್ದೇನೆ. ನಾವು ಒಟ್ಟಾಗಿ ಹೋರಾಟ ಮಾಡುತ್ತೇವೆ. ಅಂತಿಮ ಫಲಿತಾಂಶವನ್ನು ಜನ ತೀರ್ಮಾನಿಸುತ್ತಾರೆ ಎಂದು ಹೇಳಿದರು.

ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು

2028ರ ಚುನಾವಣೆ ಹೇಗೆ ಎದುರಿಸಬೇಕು ಎಂದು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಇಲ್ಲಿ ಯಾರೂ ಶಾಶ್ವತವಲ್ಲ. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ರಾಜ್ಯದ ಹಿತ ಕಾಪಾಡಲು ನಮ್ಮೆಲ್ಲರನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.