ಕಾಂಗ್ರೆಸ್‌ ಅಧಿಕಾರಕ್ಕೇರಿದರೆ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ರಾಜಕೀಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಹಲವು ಬದಲಾವಣೆಗಳಾಗುತ್ತವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

If Congress comes to power there will be a change in the Political system Says Mallikarjun Kharge gvd

ಕೆ.ಆರ್‌.ಪೇಟೆ (ಮೇ.01): ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ರಾಜಕೀಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಹಲವು ಬದಲಾವಣೆಗಳಾಗುತ್ತವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಪಟ್ಟಣದ ಟಿಎಪಿಸಿಎಂಎಸ್‌ ಆವರಣದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಬಿ ಎಲ್‌ ದೇವರಾಜು ಪರ ಮತಯಾಚನೆ ಮಾಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲೇಬೇಕೆಂದು ಸಾರ್ವಜನಿಕರು ಹಾತೊರೆಯುತ್ತಿದ್ದಾರೆ. 40% ಸರ್ಕಾರವನ್ನು ತೆಗೆದು ಹಾಕಲು ಯುವಕರು ಮಹಿಳೆಯರು ಎಲ್ಲಾ ವರ್ಗದ ಜನ ಸಿದ್ಧರಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಿದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ನಾನು 50 ವರ್ಷದಿಂದ ರಾಜಕಾರಣ ಮಾಡುತ್ತಿದ್ದೇನೆ. ರಾಜ್ಯದಲ್ಲಿ 40% ಕೆಟ್ಟಸರ್ಕಾರವನ್ನು ಎಂದೂ ನೋಡಿಲ್ಲ. ನಾಳೆ ಕಟ್ಟಡಗಳು ರಸ್ತೆ ಸೇರಿದಂತೆ ಎಲ್ಲಾ ಕೆಲಸಗಳಲ್ಲಿಯೂ 40 ಪರ್ಸೆಂಟ್‌ ಕಮಿಷನ್‌ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಈ ಬಗ್ಗೆ ಲೋಕಾಯುಕ್ತಕ್ಕೆ ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ರಾಷ್ಟ್ರಪತಿಗಳಿಗೆ ರಾಜ್ಯಪಾಲರಿಗೆ ಎಲ್ಲರಿಗೂ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಪ್ರಧಾನಮಂತ್ರಿ ಎಲ್ಲಿಗೆ ಹೋದರು ನಾನು ಸಾರ್ವಜನಿಕರ ಹಣವನ್ನು ತಿನ್ನುವುದಿಲ್ಲ ತಿನ್ನಲು ಬಿಡುವುದಿಲ್ಲ ಎನ್ನುತ್ತಾರೆ.

ಜೆಡಿಎಸ್‌ ಸೋಲಿಸಲು ಬಿಜೆಪಿ- ಕಾಂಗ್ರೆಸ್‌ ಒಳಒಪ್ಪಂದ: ಎಚ್‌.ಡಿ.ಕುಮಾರಸ್ವಾಮಿ

ಆದರೆ ಡಬಲ್ ಎಂಜಿನ್‌ ಸರ್ಕಾರ ಎನ್ನುತ್ತಿರುವ ನೀವು ನಿಮ್ಮ ರಾಜ್ಯದ ಸರ್ಕಾರದ ಬಗ್ಗೆ ಇಲ್ಲಿನ ಭ್ರಷ್ಟಾಚಾರದ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಯಾರಾದರೂ ಏನಾದರೂ ಪ್ರಶ್ನೆ ಪ್ರಶ್ನಿಸಿದರೆ ಅವರಿಗೆ ಇಡಿ ಸಿಬಿಐ ಲೋಕಾಯುಕ್ತ ಮುಂತಾದವುಗಳನ್ನು ಆಕ್ರಮಣ ಮಾಡಿಸುತ್ತಾರೆ ಎಂದು ಆರೋಪಿಸಿದರು. ಬಿಜೆಪಿಗರು ನಮ್ಮ ಪಕ್ಷದವರನ್ನು ಹೆದರಿಸಿ ಬೆದರಿಸುವ ಕೆಲಸ ಮಾಡಿ ತಮ್ಮ ಪಕ್ಷದ ಕಡೆಗೆ ಸೆಡೆಯುವಂತೆ ಮಾಡಿದ್ದಾರೆ. ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು ಎಂದು ಬೇಸರ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ ಎಂಬಂತೆ ಸಮ್ಮಿಶ್ರ ಸರ್ಕಾರ ಬಂದಾಗ ಹಾಗೂ ಬಿಜೆಪಿ ಸರ್ಕಾರದಿಂದ ನಿಮಗೆ ಏನಾದರೂ ಲಾಭವಾಗಿದೆ ಏನು ಆಗಿಲ್ಲ. ಇಲ್ಲಿನ ಮಂತ್ರಿಸರ್ಕಾರಿ ಸ್ವತ್ತನ್ನು ತನ್ನ ಪತ್ನಿ ಹೆಸರಿಗೆ ಮಾಡಿಸಿಕೊಂಡಿದ್ದಾನೆ ಎಂದರೆ ಕಂದಾಯ ಸಚಿವ ಆರ್‌.ಅಶೋಕ್‌ ಏನು ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ನಾರಾಯಣಗೌಡರನ್ನು ಎಂದು ಟೀಕಿಸಿದರು. ಮೇ 10 ಭ್ರಷ್ಟಾಚಾರ ಓಡಿಸುವ ದಿನ. ದುಕನ್ನು ಬದಲಿಸುವ ದಿನ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರಿಗೂ ನ್ಯಾಯ ಸಿಗಲಿದೆ ಎಂದು ತಿಳಿಸಿದರು. 

ಬಿಜೆಪಿ ಯಾವುದೇ ಧರ್ಮದ ವಿರೋಧಿ ಅಲ್ಲ: ಸಂಸದ ಮುನಿಸ್ವಾಮಿ

ಕಾರ್ಯಕ್ರಮದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ರಹಮಾನ್‌ ಖಾನ್‌ ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ಸೋಮಶೇಖರ್‌, ಕಾಂಗ್ರೆಸ್‌ ಅಭ್ಯರ್ಥಿ ಬಿ.ಎಲ್‌.ದೇವರಾಜು, ಮಾಜಿ ಶಾಸಕ ಕೆ ಬಿ ಚಂದ್ರಶೇಖರ್‌, ಬಿ ಪ್ರಕಾಶ್‌, ವಿಜಯ ರಾಮೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರುಗಳಾದ ಕಿಕ್ಕೇರಿ ಸುರೇಶ್‌, ನಾಗೇಂದ್ರಕುಮಾರ್‌, ಮತ್ತಿಘಟ್ಟಕೃಷ್ಣಮೂರ್ತಿ, ಹಲವರು ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

Latest Videos
Follow Us:
Download App:
  • android
  • ios