ಸುಳ್ಳು ಆರೋಪ ಮಾಡಿದರೆ ಜನರ ಮುಂದೆ ವಸ್ತುಸ್ಥಿತಿ ಇಡುತ್ತೇವೆ: ಸಿಎಂ ಸಿದ್ದರಾಮಯ್ಯ

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದರೆ ವಸ್ತುಸ್ಥಿತಿ ಜನರ ಮುಂದಿಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

If false allegations are made we will put facts in front of people Says CM Siddaramaiah gvd

ರಾಯಚೂರು (ಅ.07): ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದರೆ ವಸ್ತುಸ್ಥಿತಿ ಜನರ ಮುಂದಿಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ. ರಾಜ್ಯ ಕಾಂಗ್ರೆಸ್ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ವಿರೋಧ ಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪ ಮಾಡಿ ರಾಜೀನಾಮೆ ಬೇಡಿದರೆ ರಾಜೀನಾಮೆ ಕೊಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.

ಜೆಡಿಎಸ್‌ನ ಜಿ.ಟಿ ದೇವೇಗೌಡ ತಮ್ಮನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಲ್ಲಿದ್ದು, ಮೂಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ಧ ವಿರೋಧ ಪಕ್ಷದವರು ಪಾದಯಾತ್ರೆ ನಡೆಸುವುದು ಬೇಡ ಎಂದವರಲ್ಲಿ ಜಿ.ಟಿ ದೇವೇಗೌಡರು ಒಬ್ಬರಾಗಿದ್ದಾರೆ ಎಂದು ಹೇಳಿದರು. 

ಸಿದ್ದರಾಮಯ್ಯಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು: ಸಚಿವ ಶಿವರಾಜ ತಂಗಡಗಿ

ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರ ಮೇಲೆ ಎಫ್ಐಆರ್ ಆಗಿರುವುದರಿಂದ ತಾನು ರಾಜೀನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜೀನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದಷ್ಟೇ ಹೇಳಿದರು. ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅದು ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶವಾಗಿದೆ. ಅಹಿಂದವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಮಾವೇಶ ಇದಾಗಿದೆ ಎಂದು ನುಡಿದರು.

ಒಳಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರದ ವಿರೋಧವಿಲ್ಲ. ಇದರ ಬಗ್ಗೆ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು. ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿ ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ರಾಜ್ಯದಲ್ಲಿ ಕನ್ನಡ ವ್ಯಾವಹಾರಿಕ ಭಾಷೆಯಾಗಲಿ: ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳ ಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19ನೇ ಗೇಟ್ ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮ ತೆಗೆದುಕೊಳ್ಳಲಿದೆ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

Latest Videos
Follow Us:
Download App:
  • android
  • ios