ದೇವೇಗೌಡರನ್ನು ನೋಡಿದರೆ ನನಗೆ ಭಕ್ತಿ ಭಾವ ಮೂಡುತ್ತೆ: ಸುಧಾಕರ್‌ ಮಾಜಿ ಪ್ರಧಾನಿಯನ್ನು ಭೇಟಿಯಾದ ಆರೋಗ್ಯ ಸಚಿವ

ಬೆಂಗಳೂರು (ಸೆ.27) : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ನೋಡಿದರೆ ನನಗೆ ಭಕ್ತಿ ಭಾವ ಮೂಡಿಬರುತ್ತದೆ ಎಂದು ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಸೋಮವಾರ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಅವರು ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕೆಲಹೊತ್ತು ಗೌಡರೊಂದಿಗೆ ಸಮಾಲೋಚನೆ ನಡೆಸಿದರು.

ಆರೋಗ್ಯ ವಿಚಾರಿಸಲು ಬಂದ ಸಿಎಂ & ಟೀಮ್‌ಗೆ ದೇವೇಗೌಡ್ರ ಭರ್ಜರಿ ಆತಿಥ್ಯ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಟ್ಟು ಹೋರಾಟಗಾರ ಹಾಗೂ ಹಿರಿಯ ಚೇತನ ದೇವೇಗೌಡರನ್ನು ಭೇಟಿ ಮಾಡಿ ಮಾತನಾಡಿಸಿದೆ. ಅವರನ್ನು ನೋಡಿದರೆ ನನಗೆ ಭಕ್ತಿಯ ಭಾವ ಮೂಡಿಬರುತ್ತದೆ. ಮಾಜಿ ಪ್ರಧಾನಿಗಳ ಪೈಕಿ ಸಕ್ರಿಯರಾಗಿ ಜನಸೇವೆಯಲ್ಲಿ ತೊಡಗಿರುವವರು ಎಂದರೆ ಅದು ದೇವೇಗೌಡರು ಮಾತ್ರ. ಆದ್ದರಿಂದಲೇ ಅವರು ಮಹಾಚೇತನ ಎಂದು ಹಾಡಿ ಹೊಗಳಿದರು. ಮೊಣಕಾಲಿನ ತೊಂದರೆ ಬಿಟ್ಟರೆ ಅವರು ಬಹಳ ಆರೋಗ್ಯವಂತರಾಗಿದ್ದಾರೆ. ಜೊತೆಗೆ ಅವರ ಮಾನಸಿಕ ಶಕ್ತಿಯೂ ಗಟ್ಟಿಯಾಗಿದೆ. ಅವರಿಗೆ ಉತ್ತಮ ಆರೋಗ್ಯ ದೊರೆತು ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡಲಿ ಎಂದು ಆಶಿಸುತ್ತೇನೆ ಎಂದರು.

ಪ್ರಬಲ ಸಿಎಂಗಳ ಟಾರ್ಗೆಟ್‌ ಕಾಂಗ್ರೆಸ್‌ ಸಂಪ್ರದಾಯ 

ಭ್ರಷ್ಟಾಚಾರಕ್ಕೂ ಮತ್ತು ಜಾತಿಗೂ ಸಂಬಂಧವಿಲ್ಲ ಎಂಬುದು ಸತ್ಯ. ಆದರೆ, ಪ್ರಬಲ ಸಮುದಾಯದ ಮುಖ್ಯಮಂತ್ರಿ ಇದ್ದಾಗ ಅವರನ್ನು ವಿಶೇಷವಾಗಿ ಟಾರ್ಗೆಟ್‌ ಮಾಡುವುದು ಕಾಂಗ್ರೆಸ್‌ನ ಸಂಪ್ರದಾಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತೀಕ್ಷ್ನವಾಗಿ ಹೇಳಿದ್ದಾರೆ. ಕಾಂಗ್ರೆಸ್‌ ಪ್ರಬಲ ಸಮುದಾಯದ ವಿರುದ್ಧ ನಿಂತಿದೆ ಎಂಬುದು ಇತಿಹಾಸದಿಂದಲೇ ತಿಳಿದು ಬರುತ್ತದೆ. ಕಾಂಗ್ರೆಸ್‌ ಅಧಿಕಾರದಿಂದ ಕೆಳಕ್ಕಿಳಿಸಿದ ನಾಯಕರ ಪಟ್ಟಿಯನ್ನೇ ನಾನು ನೀಡಿದ್ದೇನೆ. ಇದರ ಬಗ್ಗೆ ಕಾಂಗ್ರೆಸ್‌ ಮೊದಲು ಉತ್ತರ ನೀಡಲಿ ಎಂದರು.

ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಷ್ಟುನಾನು ಬುದ್ಧಿವಂತನಲ್ಲ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆ ಮಾಡಿಸಿದ್ದರು. ಈಶಾನ್ಯ ರಾಜ್ಯಗಳಿಗೆ ಅಂದಿನ ಕಾಲದಲ್ಲೇ ಒಂದೇ ಬಾರಿಗೆ ಆರು ಸಾವಿರ ಕೋಟಿ ರು. ಅನುದಾನ ನೀಡಿದ್ದರು. ಅಂತಹವರನ್ನೇ ಪ್ರಧಾನಿ ಸ್ಥಾನದಿಂದ ಕಾಂಗ್ರೆಸ್‌ನವರು ಕೆಳಕ್ಕಿಳಿಸಿದರು. ಪಿ.ವಿ.ನರಸಿಂಹರಾವ್‌, ರಾಜಶೇಖರಮೂರ್ತಿ, ಎಸ್‌.ನಿಜಲಿಂಗಪ್ಪ, ಎಸ್‌.ಎಂ.ಕೃಷ್ಣ ಮೊದಲಾದ ನಾಯಕರಿಗೆ ಕಾಂಗ್ರೆಸ್‌ ಏನು ಮಾಡಿದೆ ಎಂಬ ಪಟ್ಟಿಯೇ ಇದೆ ಎಂದು ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯಾವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪಿದ್ದಾರೆ ಎಂಬುದನ್ನು ಕಾಂಗ್ರೆಸ್‌ ಹೇಳಬೇಕು. ಬೊಮ್ಮಾಯಿ ಅವರು ಸಮರ್ಥ ಆಡಳಿತ ನೀಡುತ್ತಿರುವುದರಿಂದಲೇ ತಮಗೆ ಉಳಿಗಾಲ ಇಲ್ಲ ಎಂಬುದು ಕಾಂಗ್ರೆಸ್‌ಗೆ ಅರ್ಥವಾಗಿದೆ ಎಂದು ಲೇವಡಿ ಮಾಡಿದರು.