ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಭವಾನಿಗೆ ಪರಿಷತ್‌ ಸ್ಥಾನ?

ತೀವ್ರ ಜಟಿಲವಾಗಿದ್ದ ಹಾಸನ ಕ್ಷೇತ್ರದ ಅಭ್ಯಥಿರ್ಯ ಆಯ್ಕೆಯನ್ನು ಅಂತಿಮವಾಗಿ ಯಾವುದೇ ಗೊಂದಲಗಳಿಲ್ಲದೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 

If JDS Comes to Power Bhavani Revanna Will Get Parishat Seat grg

ಬೆಂಗಳೂರು(ಏ.15): ವಿಧಾನಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ತಮಗೆ ಟಿಕೆಟ್‌ ನೀಡಬೇಕು ಎಂದು ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಅವರು ಅಂತಿಮ ಕ್ಷಣದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದ ಕಾರಣ ಭವಿಷ್ಯದಲ್ಲಿ ಅವರಿಗೆ ಉತ್ತಮ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ.

ತೀವ್ರ ಜಟಿಲವಾಗಿದ್ದ ಹಾಸನ ಕ್ಷೇತ್ರದ ಅಭ್ಯಥಿರ್ಯ ಆಯ್ಕೆಯನ್ನು ಅಂತಿಮವಾಗಿ ಯಾವುದೇ ಗೊಂದಲಗಳಿಲ್ಲದೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೆಡಿಎಸ್‌ ಅಧಿಕಾರಕ್ಕೆ ಬಂದಲ್ಲಿ ಭವಾನಿ ರೇವಣ್ಣ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಾನು, ಭವಾನಿ ಹಾಸನ ಬಿಟ್ಟು ಎಲ್ಲೂ ಹೋಗಲ್ಲ: ಎಚ್‌.ಡಿ.ರೇವಣ್ಣ

ಹಲವು ದಿನಗಳಿಂದ ಹಾಸನ ಕ್ಷೇತ್ರದ ಅಭ್ಯಥಿರ್ಯನು್ನ ಅಂತಿಮಗೊಳಿಸುವುದು ಕಷ್ಟಕರವಾಗಿತ್ತು. ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಬೇಕು ಎಂಬುದು ಅವರ ಕುಟುಂಬದವರ ಒತ್ತಾಸೆಯಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಸ್ವರೂಪ್‌ ಅವರನ್ನು ಕಣಕ್ಕಿಳಿಸುವ ಉದೕಶ ಹೊಂದಿದ್ದರು. ಹೀಗಾಗಿ ಹಾಸನ ಕ್ಷೇತ್ರದಿಂದ ಯಾರಿಗೆ ಟಿಕೆಟ್‌ ಲಭಿಸಲಿದೆ ಎಂಬ ತೀವ್ರ ಕುತೂಹಲ ಕೆರಳಿಸಿತ್ತು. ಇದೀಗ ಸ್ವರೂಪ್‌ ಅವರಿಗೆ ಅಂತಿಮವಾಗಿದೆ. ಭವಾನಿ ರೇವಣ್ಣ ಅವರಿಗೆ ಭವಿಷ್ಯದಲ್ಲಿ ಉತ್ತಮ ಸ್ಥಾನ ಕಲ್ಪಿಸುವ ಕುರಿತು ರೇವಣ್ಣ ಜತೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು. ಈ ವೇಳೆ ಭವಾನಿಗೆ ಮುಂದಿನ ದಿನದಲ್ಲಿ ಒಳ್ಳೆಯ ಸ್ಥಾನನಮಾನ ಪಕ್ಷದಲ್ಲಿ ನೀಡಲಾಗುತ್ತದೆ ಎಂಬ ಭರವಸೆ ಮೇರೆಗೆ ಸ್ವರೂಪ್‌ ಅವರಿಗೆ ಟಿಕೆಟ್‌ ನೀಡಲು ಒಪ್ಪಿಗೆ ಸೂಚಿಸಿದರು ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios