ಅಧಿಕಾರಕ್ಕೆ ಬಂದರೆ ಪರಶುರಾಮಪುರ ತಾಲೂಕು ಘೋಷಣೆ, ಭರವಸೆ ಈಡೇರಿಸದಿದ್ರೆ ಜೆಡಿಎಸ್ ಪಕ್ಷ ವಿಸರ್ಜನೆ: ಎಚ್‌ಡಿಕೆ
ಪಕ್ಷಕ್ಕೆ ಅಧಿಕಾರ ದೊರೆತ ಕೆಲವೇ ಗಂಟೆಗಳಲ್ಲಿ ಪಂಚರತ್ನ ಕಾರ‍್ಯಕ್ರಮದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲಾಗುವುದು. ಅದು ಸಾಧ್ಯವಾಗದೇ ಹೋದಲ್ಲಿ ಜಾತ್ಯತೀತ ಜನತಾದಳವನ್ನು ವಿಸರ್ಜಿಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಪರಶುರಾಂಪುರ (ಏ.10) : ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಪರಶುರಾಂಪುರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪರಶುರಾಂಪುರ(Parashuramapur)ದ ಮುಖ್ಯವೃತ್ತದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷಕ್ಕೆ ಅಧಿಕಾರ ದೊರೆತ ಕೆಲವೇ ಗಂಟೆಗಳಲ್ಲಿ ಪಂಚರತ್ನ ಕಾರ‍್ಯಕ್ರಮದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲಾಗುವುದು. ಅದು ಸಾಧ್ಯವಾಗದೇ ಹೋದಲ್ಲಿ ಜಾತ್ಯತೀತ ಜನತಾದಳವನ್ನು ವಿಸರ್ಜಿಸುತ್ತೇನೆ ಎಂದರು.
ಕೊನೆಗೂ ಹಾಸನ ಟಿಕೆಟ್ ನಿರ್ಧಾರ ಪ್ರಕಟಿಸಿದ ಕುಮಾರಸ್ವಾಮಿ: ಬ್ಲಾಕ್‌ಮೇಲ್‌ಗೆ ಬಗ್ಗೋದಿಲ್ಲ
ಕಳೆದ ವಿಧಾನ ಸಭೆ ಚುನಾವಣೆ(Karnataka assembly election 2023)ಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ರವೀಶ್‌ಕುಮಾರ್(M Raveesh kumar JDS Candidate) ಕೇವಲ 5 ಸಾವಿರ ಮತಗಳ ಅಂತರದಲ್ಲಿ ಸೋತಿದ್ದಾರೆ. ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ರವೀಶ್‌ಕುಮಾರ್ ಗೆಲವು ತಂದು, ರಾಜ್ಯದಲ್ಲಿ ಜೆಡಿಎಸ್‌ಗೆ ಅಧಿಕಾರ ಕೊಟ್ಟರೆ ರೈತರ ಸಾಲ ಮನ್ನಾ, ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ, ಎಲ್‌ಕೆಜೆ ಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮ, ಸರಕಾರಿ ಶಾಲೆಗಳ ಅಭಿವೃದ್ಧಿ, ಪ್ರತಿ ಗ್ರಾಪಂ ಕೇಂದ್ರದಲ್ಲಿ 30 ಹಾಸಿಗೆ ಆಸ್ಪತ್ರೆ, ಉಚಿತ ಚಿಕಿತ್ಸೆ, ಗಂಭೀರ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ, ರೈತರಿಗೆ ಬೀಜ ಗೊಬ್ಬರ ಖರೀದಿಗೆ 19 ಸಾವಿರ ನೀಡುವುದು ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು.
ರಾಜ್ಯದ ಬಡವರು, ರೈತಾಪಿ ಜನರ ಬದುಕು ಹಸನಾಗಿಸಲು ಪಂಚರತ್ನ ಯೋಜನೆ ಅತ್ಯವಶ್ಯಕವಾಗಿದೆ. ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಇಲ್ಲ. ರೈತನ ಬದುಕು ಅತಂತ್ರವಾಗಿದೆ. ಬೆಲೆ ಏರಿಕೆ, ಮಕ್ಕಳ ಶಿಕ್ಷಣ, ಅನಾರೋಗ್ಯ ಸಮಸ್ಯೆ, ವಸತಿ ಸೇರಿದಂತೆ ಹಲವಾರು ಸವಾಲುಗಳು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ, ರೈತರು ಎಂದಿಗೂ ಸಾಲಗಾರರಾಗದ ರೀತಿಯಲ್ಲಿ ಕಾರ್ಯಕ್ರಮ ರೂಪಿಸುವುದೇ ನನ್ನ ಗುರಿಯಾಗಿದೆ ಎಂದರು.
ಕಳೆದ 2018ರ ಚುನಾವಣೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದಂತೆ ಎಲ್ಲ ವರ್ಗದ 28 ಸಾವಿರ ಕೋಟಿ ರು. ಸಾಲಮನ್ನಾ ಮಾಡಿದ್ದೇನೆ. ಈ ಬಾರಿ ಸಾಲ ಮನ್ನಾ ಮಾಡುವ ಯೋಜನೆ ರೂಪಿಸಿಲ್ಲ. ಬದಲಾಗಿ ರೈತರನ್ನೇ ಸಾಲಗಾರರಾಗದಂತೆ ಕಾರ್ಯಕ್ರಮ ರೂಪಿಸಿ, 25 ಸಾವಿರ ಕೋಟಿ ರು. ವೆಚ್ಚದ ಯೋಜನೆ ತಯಾರಿಸಿದ್ದೇನೆ. ಇದೆಲ್ಲವೂ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಹೊಂದಾಣಿಕೆಯಿಂದ ಸಾಧ್ಯವಾಗುವುದಿಲ್ಲ. ಆದ್ದರಿಂದ ಜಾತ್ಯತೀತ ಜನತಾ ದಳಕ್ಕೆ 130 ಸ್ಥಾನ ಗೆಲ್ಲಿಸಿ ಪೂರ್ಣಾವಧಿ ಸರ್ಕಾರವನ್ನು ರೂಪಿಸಲು ಅವಕಾಶ ಮಾಡಿಕೊಡಿ ಎಂದು ಕೋರಿದರು.
ಚಳ್ಳಕೆರೆ ತಾಲೂಕು ಬಯಲು ಪ್ರದೇಶದ ಇಲ್ಲಿ ಪ್ರಮುಖ ವಾಣಿಜ್ಯ ಬೆಳೆ ಶೇಂಗಾ ಬೆಳೆಯುತ್ತಾರೆ. ಸುಮಾರು 20 ವರ್ಷಗಳಿಂದ ಸಕಾಲಕ್ಕೆ ಮಳೆ ಬೆಳೆಯ ಇಲ್ಲದೆ ರೈತರು ಸಾಲದ ದವಡೆಗೆ ಸಿಲುಕಿದ್ದಾರೆ. ಶೇಂಗಾ ಬೆಳೆಯಿಲ್ಲದೆ ಉದ್ಯೋಗವೂ ಇಲ್ಲದೆ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ದೂರದ ನಗರ ಪ್ರದೇಶಗಳಿಗೆ ಯುವ ಪೀಳಿಗೆæ ವಲಸೆ ಹೋಗಿದ್ದಾರೆ. ಜೆಡಿಎಸ್ ಸರ್ಕಾರ ಬಂದ ತಕ್ಷಣ ರೈತರ ಕಷ್ಟಕಾರ್ಪಣ್ಯಗಳನ್ನು ದೂರ ಮಾಡುತ್ತೇನೆ ಎಂದರು.
ದೇವೇಗೌಡರೇ ನಮಗೆ ಸ್ಟಾರ್ ಪ್ರಚಾರಕರು: ನಿಖಿಲ್ ಕುಮಾರಸ್ವಾಮಿ
ಬಹಿರಂಗ ಸಭೆಯಲ್ಲಿ ಚಳ್ಳಕೆರೆ ವಿಧಾನ ಸಭೆ ಕ್ಷೇತ್ರದ ಅಭ್ಯರ್ಥಿ ಎಂ.ರವೀಶ್ ಕುಮಾರ್ ಮಾತನಾಡಿದರು . ಸಭೆಯಲ್ಲಿ ಜಿಲ್ಲಾ ಹಾಗೂ ಕ್ಷೇತ್ರದ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.