Asianet Suvarna News Asianet Suvarna News

ಸಿದ್ದರಾಮಯ್ಯ ಒಪ್ಪಿದರೆ ನಾನು ಸಿಎಂ ಆಗುತ್ತೇನೆ: ಆರ್.ವಿ. ದೇಶಪಾಂಡೆ

ನಾನು ಸಚಿವ ಆಗಿ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು. ಆದರೆ ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ನನಗೆ ಸಿಎಂ ಆಗುವ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಲೈಫ್ ನಲ್ಲಿ ಆಂಭಿಷನ್ ಇರಬೇಕು ಎಂದ ಮಾಜಿ ಸಚಿವ ಆರ್.ವಿ. ದೇಶಪಾಂಡೆ

If Siddaramaiah agrees I will become the CM Says Former Minister RV Deshpande grg
Author
First Published Sep 1, 2024, 10:28 PM IST | Last Updated Sep 1, 2024, 10:28 PM IST

ಮೈಸೂರು(ಸೆ.01):  ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಚ್ಚರಿಯ ಹೇಳಿಕೆ ನೀಡಿದರು. ಭಾನುವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ನಾನು ಸಚಿವ ಆಗಿ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು. ಆದರೆ ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ನನಗೆ ಸಿಎಂ ಆಗುವ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಲೈಫ್ ನಲ್ಲಿ ಆಂಭಿಷನ್ ಇರಬೇಕು ಎಂದರು.

ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತರು. 5 ವರ್ಷ ಸಿಎಂ ಆಗಿ ಅವರೇ ಸಿದ್ದರಾಮಯ್ಯ ಇರುತ್ತಾರೆ. ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಎಂದರು.

ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

ನನಗೆ ಗೊತ್ತಿಲ್ಲದ ಯಾವ ಚರ್ಚೆ ನಡೆಯಲು ಸಾಧ್ಯವಿಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದು ಹೇಳಿದರು.

ಫೋನ್ ಟ್ಯಾಟಿಂಗ್ ಆರೋಪ ಕೇಳಿ ಬಂದ ಕೂಡಲೇ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ಮೌಲ್ಯಾಧಾರಿತ ರಾಜಕಾರಣ ನಡೆಯುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಎಂಡಿಎ ವಿಷಯದಲ್ಲಿ ತಪ್ಪೇ ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತ, ಮೌಲ್ಯಾಧಾರಿತ ರಾಜಕಾರಣದ ಬಗ್ಗೆ ಅವರು ನೀಡಿದ ಹೇಳಿಕೆ ಪರೋಕ್ಷವಾಗಿ ಟಾಂಗ್ ನೀಡಿದಂತಿತ್ತು. ಈಗ ದಿನ ಫೋನ್ ಟ್ಯಾಪ್ ನಡೆತಾ ಇದೆ. ಈಗ ಮೌಲ್ಯಾದರಿತ ರಾಜಕಾರಣ ನಡೆಯುತ್ತಿಲ್ಲ. ಹಿಂದೆ ಮೌಲ್ಯಯುತವಾಗಿ ನಡೆದುಕೊಳ್ಳುತ್ತಿದ್ದರು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ? ಸಾವಿರಾರು ಕೋಟಿ ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು.

ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಭಾರ ಬಂದಿರೋದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ಬೇಕಾಗಿದೆ. ತೊಂದರೆ ಆಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ ಎಂದರು.

Latest Videos
Follow Us:
Download App:
  • android
  • ios