Asianet Suvarna News Asianet Suvarna News

ತಮಿಳುನಾಡಿಗೆ ನೀರು ಬಿಡದಿದ್ರೆ ನಮ್ಮ ಸರ್ಕಾರ ವಜಾ ಆಗ್ಬಹುದು: ಸಿದ್ದರಾಮಯ್ಯ

ಕಾವೇರಿ ನೀರು ನಿಡಬಾರದು ಎಂಬುದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಂಗ ನಿಂದನೆ ಆಗುತ್ತದೆ, ಸರ್ಕಾರವನ್ನು ವಜಾ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

If water is not released to Tamil Nadu our government may be sacked Says Siddaramaiah gvd
Author
First Published Sep 30, 2023, 2:20 AM IST

ಬೆಂಗಳೂರು (ಸೆ.30): ಕಾವೇರಿ ನೀರು ನಿಡಬಾರದು ಎಂಬುದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಂಗ ನಿಂದನೆ ಆಗುತ್ತದೆ, ಸರ್ಕಾರವನ್ನು ವಜಾ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಬೆಂಗಳೂರು ಬಂದ್‌ ಮಾಡಿದ್ದ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚರ್ಚೆ ನಡೆಸಿ ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ರಾಜ್ಯಕ್ಕೆ ಒಟ್ಟು 106 ಟಿಎಂಸಿ ನೀರಿನ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ಮಾತ್ರ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆ. ನಮಗೆ ಬೆಳೆ ಉಳಿಸಿಕೊಳ್ಳಲು ನೀರಾವರಿಗೆ 70 ಟಿಎಂಸಿ ನೀರು ಅಗತ್ಯವಿದೆ. ಕುಡಿಯಲು 30 ಟಿಎಂಸಿ ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿದಂತೆ ಒಟ್ಟಾರೆ ರಾಜ್ಯಕ್ಕೆ 106 ಟಿಎಂಸಿ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ಮಾತ್ರ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆಯಿದೆ ಎಂದು ವಿವರಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯಗೆ ಪ್ರಯಾಸ: ಜನಾರ್ದನ ರೆಡ್ಡಿ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕು ಎಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ತಿಳಿಸಿದರು.

ಪ್ರತಿ ಸಭೆಯಲ್ಲೂ ಪ್ರತಿಭಟಿಸಿದ್ದೇವೆ: ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಅಷ್ಟೇನೂ ಮಳೆ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು ಎಂದು ಹೇಳಿದರು.

ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರಾದ ವೆಂಕಟಸ್ವಾಮಿ, ಗುರುದೇವ ನಾರಾಯಣ ಕುಮಾರ್, ಕುಮಾರಸ್ವಾಮಿ, ನಟರಾಜ ಶರ್ಮ, ರಘುನಾರಾಯಣಗೌಡ, ಲೋಕೇಶ್ ಗೌಡ್ರು, ಕನ್ನಡ ಪ್ರಕಾಶ್, ಕೃಷ್ಣೇಗೌಡರು, ವಾ.ಚ ಚನ್ನೇಗೌಡ್ರು, ಯೋಗಾನಂದ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಹೊರಬರುತ್ತಿದೆ. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕು.
-ಕುರುಬೂರು ಶಾಂತಕುಮಾರ್‌, ರೈತ ಮುಖಂಡ

ಅಧಿಕಾರದಲ್ಲಿದ್ದಾಗ ಕಾವೇರಿ ನೀರು ಬಿಟ್ಟು ಇಂದು ವಿರೋಧಿಸೋದು ತಪ್ಪು: ಸಚಿವ ಮಧು ಬಂಗಾರಪ್ಪ

ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ತಕ್ಷಣ ವಿಧಾನಮಂಡಲ ಅಧಿವೇಶನ ಕರೆದು ನೀರು ಬಿಡದಿರುವ ತೀರ್ಮಾನ ಕೈಗೊಳ್ಳಬೇಕು.
-ಮುಖ್ಯಮಂತ್ರಿ ಚಂದ್ರು, ಎಎಪಿ ರಾಜ್ಯಾಧ್ಯಕ್ಷ

Follow Us:
Download App:
  • android
  • ios