ರಾಜೀನಾಮೆ ನೀಡಿದ್ದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಶಾಸಕ ಯತ್ನಾಳ್ ಮತ್ತೆ ಸವಾಲ್ ಹಾಕಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರೋ ಯತ್ನಾಳ್ ಅಸಲಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡುವಂತೆ ಸವಾಲು ಹಾಕಿದ್ದಾರೆ.
- ಷಡಕ್ಷರಿ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್
ವಿಜಯಪುರ (ಮೇ.02): ರಾಜೀನಾಮೆ ನೀಡಿದ್ದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಶಾಸಕ ಯತ್ನಾಳ್ ಮತ್ತೆ ಸವಾಲ್ ಹಾಕಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರೋ ಯತ್ನಾಳ್ ಅಸಲಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡುವಂತೆ ಸವಾಲು ಹಾಕಿದ್ದಾರೆ. ಪುಕ್ಕಟ್ಟೆ ಪ್ರಚಾರಕ್ಕಾಗಿ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಇವ್ರು ರಾಜೀನಾಮೆ ನೀಡೋದು, ಸಭಾಧ್ಯಕ್ಷರು ತಿರಸ್ಕಾರ ಮಾಡೊದು ಇದೊಂದು ಬೃಹನ್ನಾಟಕ ಎಂದು ಯತ್ನಾಳ್ ಟಾಂಗ್ ನೀಡಿದ್ದಾರೆ. ಸಂಪುಟದ ಹಿರಿಯ ಸಚಿವರ ಈ ರಾಜೀನಾಮೆ ಪ್ರಹಸನ ಕಂಡು ಪ್ರಜ್ಞಾವಂತರು ನಗುವಂತಾಗಿದೆ. ಉತ್ತರನ ಪೌರುಷ ಒಲೆಯ ಮುಂದೆ ಎಂದು ಯತ್ನಾಳ್ ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ..
ಟ್ವಿಟ್‌ನಲ್ಲಿ ಏನಿದೆ ಅನ್ನೋದನ್ನ ನೋಡೊದಾದ್ರೆ.. "ಉತ್ತರನ ಪೌರುಷ ಒಲೆಯ ಮುಂದೆ" ರಾಜೀನಾಮೆ ಅಂಗೀಕಾರ ಆಗೋದಿಲ್ಲ ಅಂತ ಗೊತ್ತಿದ್ದರೂ ಪುಕ್ಕಟೆ ಪ್ರಚಾರಕ್ಕೆ ರಾಜೀನಾಮೆ ಕೊಟ್ಟು ರಾಜೀನಾಮೆಯನ್ನು ತಿರಸ್ಕೃತವಾಗುವಂತ ಪ್ರಭೃತಿಗಳು ಇದ್ದಾರೆ ಎಂಬುದೇ ಸೋಜಿಗದ ಸಂಗತಿ. ಶಾಸಕರು ರಾಜೀನಾಮೆ ಕೊಡುವುದಕ್ಕೆ ರೀತಿ ರಿವಾಜು ಇರುತ್ತೆ ಎಂಬುದು ಇವರಿಗೆ ಗೊತ್ತಿಲ್ಲವೇ. ಇವರು ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು. ಸಭಾಧ್ಯಕ್ಷರಾದ ಖಾದರ್ ಅವರು ಈ ರೀತಿಯಾದ ರಾಜೀನಾಮೆ ಸ್ವೀಕೃತವಾಗುವುದಿಲ್ಲ ಎಂಬುದನ್ನು ಅವರಿಗೆ ತಿಳಿಸಬೇಕಾಗಿತ್ತು.
ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ರಾಜೀನಾಮೆ ಸರಿಯಾದ ವಿಧಾನದಲ್ಲಿಲ್ಲ ಎಂದು ಸ್ವೀಕರಿಸುವ ವೇಳೆಯಲ್ಲೇ ಖಾದರ್ ಅವರು ಹೇಳಬೇಕಾಗಿತ್ತು. ನೀವು ಮಾಡುತ್ತಿರುವ ನಾಟಕವನ್ನು ಪ್ರಜ್ಞಾವಂತ ಮತದಾರರು, ಕ್ಷೇತ್ರದ ಜನತೆ ಗಮನಿಸಿ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎಂಬುದನ್ನು ಮರೆಯದಿರಿ.
ಸುಹಾಸ್ ಶೆಟ್ಟಿ ಹತ್ಯೆ, ಕಾಂಗ್ರೆಸ್ ಸರ್ಕಾರದ ವಿಫಲತೆ: ಯತ್ನಾಳ ವಾಗ್ದಾಳಿ
ಇವರಿಗೆ ನಿಜಕ್ಕೂ ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಲಿ.
-ಬಸನಗೌಡ ಯತ್ನಾಳ್, ವಿಜಯಪುರ ಶಾಸಕ


