ಇತ್ತೀಚೆಗೆ ಕಾಂಗ್ರೆಸ್‌ ವರಿಷ್ಠರ ಮುಖ್ಯಮಂತ್ರಿಯಾಗುವಂತೆ ಸೂಚನೆ ನೀಡಿದರೆ ನಾನು ಸ್ವಾಗತಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದಕ್ಕೆ ಇದೀಗ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. 

ತುಮಕೂರು: ಮುಖ್ಯಮಂತ್ರಿ ಸ್ಥಾನ ನಿಭಾಯಿಸುವ ಸಾಮರ್ಥ್ಯ ಇದೆಯಾ ಎಂದು ಕೇಳಿದ್ದಕ್ಕೆ ಇದೆ ಅಂತ ಹೇಳಿದ್ದೇನೆಯೇ ಹೊರತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಇದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಈಗ ಏಕೆ ಮುಖ್ಯಮಂತ್ರಿ ಸ್ಥಾನದ ವಿಚಾರ ಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಪರಮೇಶ್ವರ್‌ ಅವರು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್‌ ವರಿಷ್ಠರು ನನಗೆ ಮುಖ್ಯಮಂತ್ರಿಯಾಗುವಂತೆ ಸೂಚನೆ ನೀಡಿದರೆ ನಾನು ಸ್ವಾಗತಿಸುತ್ತೇನೆ ಎಂದು ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.