ಮೈಸೂರು, (ಜುಲೈ.08): ವಿಶ್ರಾಂತಿಗಾಗಿ ತಾವು ಮೈಸೂರಿಗೆ ಬಂದಿದ್ದೇನೆಯೇ ಹೊರತು. ಹೋಂ ಕ್ವಾರಂಟೇನ್ ಗೆ ಅಲ್ಲ, ಮತ್ತೆ ಇಂದೇ  (ಬುಧವಾರ) ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೋಂ ಕ್ವಾರೆಂಟೇನ್ ಗೊಳಪಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ವಿಶ್ರಾಂತಿಗಾಗಿ ಮೈಸೂರಿನ ತೋಟಕ್ಕೆ ಬಂದಿದ್ದನ್ನೇ ಕೆಲವರು ಹೋಂ ಕ್ವಾರೆಂಟೇನ್ ಸಿದ್ದರಾಮಯ್ಯಗೆ ಭಯ ಎಂದು ಸುಳ್ಳು ಸುದ್ದಿ ಸೃಷ್ಟಿಸಿದ್ದಾರೆ ತಿಳಿಸಿದರು.

ಬಿಎಲ್ ‌ ಸಂತೋಷ್‌ಗೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಮೈಸೂರು ಸಮೀಪವಿರುವ  ಟಿ.ಕತೂರ್ ನಲ್ಲಿರುವ ಫಾರ್ಮ್ ಹೌಸ್‌ಗೆ ತೆರಳಿದ್ದರು. ಸಿದ್ದರಾಮಯ್ಯ ಅವರ ಆಪ್ತರಾದ ಎಚ್,ಸಿ ಮಹಾದೇವಪ್ಪ, ಕೆ.ವೆಂಕಟೇಶ್, ಎಚ್ ಪಿ ಮಂಜುನಾಥ್ ಮತ್ತು ಶಾಸಕ ಬದರಹಳ್ಳಿ ಹಂಪನಗೌಡ ಸಿದ್ದರಾಮಯ್ಯ ಅವರ ಜೊತೆ ನಂದಿನ ರಾಜಕೀಯದ ಬಗ್ಗೆ ಚರ್ಚಿಸುತ್ತಾರೆ.ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್  ಫಾರ್ಮ್ ಹೌಸ್ ಗೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.

ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.  ಈ ಹಿನ್ನೆಲೆಯಲ್ಲಿ ಅವರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದ್ದವು.