Asianet Suvarna News Asianet Suvarna News

'ನಾನು ಜನತಾದಳದ ಸಿಎಂ ಅಲ್ಲ, ಅಪ್ಪಟ ಬಿಜೆಪಿ ಸಿಎಂ '

  • ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಅಸಂಬದ್ಧ
  • ನಾನು ಅಪ್ಪಟ ಬಿಜೆಪಿ ಕಾರ್ಯಕರ್ತನೂ ಹೌದು, ಅಪ್ಪಟ ಬಿಜೆಪಿಯ ಮುಖ್ಯಮಂತ್ರಿಯೂ ಹೌದು
  •  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
im not JDS CM Says Karnataka Chief Minister Basavaraj Bommai snr
Author
Bengaluru, First Published Aug 8, 2021, 7:29 AM IST
  • Facebook
  • Twitter
  • Whatsapp

ಹುಬ್ಬಳ್ಳಿ (ಆ.08): ನಮ್ಮದು ಜನತಾ ಪರಿವಾರದ ಸರ್ಕಾರ, ನಾನು ಜನತಾದಳದ ಸಿಎಂ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಅಸಂಬದ್ಧ. ಇಂತಹ ಹೇಳಿಕೆಗೆ ಯಾವುದೇ ಮಹತ್ವ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಅಪ್ಪಟ ಬಿಜೆಪಿ ಕಾರ್ಯಕರ್ತನೂ ಹೌದು, ಅಪ್ಪಟ ಬಿಜೆಪಿಯ ಮುಖ್ಯಮಂತ್ರಿಯೂ ಹೌದು. ನಾನು ಎಂತಹ ಸಂದರ್ಭದಲ್ಲಿ ಜನತಾದಳ ತೊರೆದಿದ್ದೇನೆ ಎಂಬುದು ಎಚ್‌.ಡಿ. ಕುಮಾರಸ್ವಾಮಿ ಅವರಿಗಷ್ಟೇ ಅಲ್ಲ, ಎಲ್ಲರಿಗೂ ಗೊತ್ತಿದೆ.

ಖಾತೆ ಕ್ಯಾತೆ: ಸಿಎಂ ಬೊಮ್ಮಾಯಿಗೆ ರಾಜೀನಾಮೆ ಎಚ್ಚರಿಕೆ ಕೊಟ್ಟ ಸಚಿವ

 ಅವರು ಅಸಂಬದ್ಧ ಹೇಳಿಕೆಯನ್ನು ನೀಡುತ್ತಿದ್ದಾರೆ. ಅದಕ್ಕೆ ಯಾವುದೇ ಮಹತ್ವ ಇಲ್ಲ. ಕಳೆದ ಹದಿನೈದು ವರ್ಷಗಳಿಂದ ಬಿಜೆಪಿಯಲ್ಲಿ ದುಡಿಯುತ್ತಿದ್ದೇನೆ. ಈಗ ಜನತಾದಳ ಎಂಬ ಪ್ರಶ್ನೆ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.

Follow Us:
Download App:
  • android
  • ios