ನನ್ನ ಸ್ಥಾನ ಡಿ.ಕೆ.ಶಿವಕುಮಾರ್ ತಪ್ಪಿಸಲ್ಲ : ಯೋಗೇಶ್ವರ್

ನನ್ನ ಸ್ಥಾನವನ್ನು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಪ್ಪಿಸಲ್ಲ ಹೀಗೆಂದು ಬಿಜೆಪಿ ಮುಖಂಡ ಸಿಪಿ ಯೋಗೀಶ್ವರ್ ಹೇಳಿದ್ದಾರೆ. 

Im Not the Aspirant Of Ministry Post Says CP Yogeshwar  snr

ಬೆಂಗಳೂರು (ಸೆ.20):  ‘ಸಚಿವ ಸ್ಥಾನದ ರೇಸ್‌ನಲ್ಲಿ ನಾನಿಲ್ಲ. ಆದರೆ, ಸಂಪುಟದಲ್ಲಿ ಅವಕಾಶ ಸಿಕ್ಕರೆ ಕೆಲಸ ಮಾಡುತ್ತೇನೆ, ಇಲ್ಲದಿದ್ದರೆ ಪಕ್ಷ ಸಂಘಟನೆಗಾಗಿ ಕಾರ್ಯ ನಿರ್ವಹಿಸುತ್ತೇನೆ’ ಎಂದು ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಸ್ಪಷ್ಟಪಡಿಸಿದ್ದಾರೆ. 

ಜೆ.ಪಿ.ನಗರದ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆಯಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಆದರೆ, ಅಧಿವೇಶನಕ್ಕೆ ಮೊದಲು ಅಥವಾ ನಂತರವಾಗಲಿದೆಯೋ ಎನ್ನುವುದು ಖಚಿತವಾಗಿ ಗೊತ್ತಿಲ್ಲ. ನಾನು ಸಹ ದೆಹಲಿಗೆ ಹೋಗಿ ಬಂದಿದ್ದೇನೆ. ಸಂಪುಟ ವಿಸ್ತರಣೆ ಕುರಿತು ನನಗೆ ಯಾವುದೇ ರೀತಿಯ ಸಂದೇಶ ಬಂದಿಲ್ಲ. ಅವಕಾಶ ನೀಡಿದರೆ ಕೆಲಸ ಮಾಡುತ್ತೇನೆ. ಇಲ್ಲದಿದ್ದರೆ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ’ ಎಂದು ಹೇಳಿದರು.

"

'2024ಕ್ಕೆ ದೇಶಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಲಿ' ..

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಸದ್ಯಕ್ಕೆ ಅಪ್ರಸ್ತುತ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲಿ ಯಾವುದೇ ಚಿಂತನೆ ಇಲ್ಲ. ಅಂತಹ ವಿದ್ಯಮಾನಗಳು ನಡೆದಿಲ್ಲ’ ಎಂದು ಇದೇ ವೇಳೆ ತಿಳಿಸಿದರು.

ಎಚ್‌​ಡಿಕೆ, ಡಿಕೆ​ಶಿ ಶಕ್ತರಲ್ಲ:  ‘ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪ್ರಭಾವ ಬಿಜೆಪಿಯಲ್ಲಿ ನಡೆಯುವುದಿಲ್ಲ. ಬಿಜೆಪಿ ಮೇಲೆ ಪ್ರಭಾವ ಬೀರುವಷ್ಟುಅವರು ಶಕ್ತರಲ್ಲ. ಅವರಿಬ್ಬರೂ ನಮ್ಮ ಪಕ್ಷದವರಲ್ಲ. ನನಗೆ ಸಿಗುವ ಸ್ಥಾನಮಾನ ತಪ್ಪಿಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಸರ್ಕಾರದಿಂದ ಸಹಾಯ ಪಡೆಯಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿರಬಹುದು ಅಷ್ಟೇ’ ಎಂದರು.
 

Latest Videos
Follow Us:
Download App:
  • android
  • ios