ಸರ್ಕಾರದ ಗ್ಯಾರಂಟಿ ಅನುಷ್ಠಾನದಿಂದ ಅಭಿವೃದ್ದಿ ಕಾರ್ಯ ವಿಳಂಬ: ಶಾಸಕ ದರ್ಶನ್ ಧ್ರುವನಾರಾಯಣ್
ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ತಡವಾಗಿವೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮಂಜೂರು ಆಗಲಿದ್ದು, ಎಲ್ಲ ಗ್ರಾಮಗಳಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು (ಜ.19): ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ತಡವಾಗಿವೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮಂಜೂರು ಆಗಲಿದ್ದು, ಎಲ್ಲ ಗ್ರಾಮಗಳಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ತಾಲೂಕಿನ ಹೆಮ್ಮರಗಾಲ ಗ್ರಾಪಂ ವ್ಯಾಪ್ತಿಯ ಕುಂಬ್ರಳ್ಳಿ, ಬುಜಂಗಯ್ಯನಹುಂಡಿ, ಮಲ್ಲಹಳ್ಳಿ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಲಾಗಿದ್ದ 5 ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಷ್ಠಾನಗೊಳಿಸುವ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವೆನಿಸಿದೆ.
ನೀವು ನಮ್ಮನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡಲೆಂದೇ ಆರಿಸಿ ಕಳುಹಿಸಿದ್ದೀರಿ. ಆದರೆ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಕಾರಣ ಅಭಿವೃದ್ದಿ ಕೆಲಸಗಳು ಕುಂಠಿತಗೊಂಡಿವೆ. ಮುಂದಿನ ತಿಂಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮಂಜೂರಾಗಲಿದ್ದು, ಆ ಅನುದಾನದಲ್ಲಿ ಯಾವ ಯಾವ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳು ಅಗತ್ಯವಾಗಿವೆ ಅದನ್ನು ಪರಿಹರಿಸುವ ಜೊತೆಗೆ ಎಸ್.ಇಪಿ, ಟಿಎಸ್.ಪಿ ಯೋಜನೆಯಡಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಮಾಡಿಕೊಡುವ ಮೂಲಕ ನಿರಂತರ ಅಭಿವೃದ್ದಿ ಕೆಲಸಗಳಿಗೆ ನಾಂದಿ ಹಾಕಲಿದ್ದೇವೆ ಎಂದರು.
ಶ್ರೀರಾಮನ ಬಗ್ಗೆ ಸಚಿವ ರಾಜಣ್ಣ ಹಗುರ ಹೇಳಿಕೆ ಸಲ್ಲದು: ಎಂ.ಪಿ.ರೇಣುಕಾಚಾರ್ಯ
ಗ್ರಾಮೀಣ ಭಾಗದ ಎಲ್ಲ ಗ್ರಾಮಗಳಿಗೂ ಸಹ ಮೂಲಭೂತ ಸೌಕರ್ಯ, ಸಮುದಾಯಭವನ, ಎಲ್ಲ ಕಾಮಗಾರಿಗಳನ್ನು ಪೂರೈಸಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುತ್ತೇನೆ ಮತದಾರರು ಕಾಲಾವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದರು. ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಜನರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು ಎಂಬ ಉದ್ದೇಶದಿಂದ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ನಿಮ್ಮ ಗ್ರಾಮಗಳಿಗೆ ಕರೆತಂದು ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲು ಮುಂದಾಗಿದ್ದೇನೆ.
ನಾನು ರಾಮ ಮತ್ತು ರಾವಣನ ಪರ ಇದ್ದೇನೆ: ಸಚಿವ ಕೆ.ಎನ್.ರಾಜಣ್ಣ
ಮತದಾರರು ದಿನದ 24 ಗಂಟೆಗಳೂ ಸಹ ನನ್ನನ್ನು ದೂರವಾಣಿ ಮೂಲಕವೂ ಸಂಪರ್ಕಿಸಬಹದು. ಮತದಾರರ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಸಿದ್ದನಿದ್ದೇನೆ ಎಂದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಮುಖಂಡರಾದ ಮುದ್ದುಮಾದಶೆಟ್ಟಿ, ಸಿದ್ದಶೆಟ್ಟಿ, ಶ್ರೀನಿವಾಸಮೂರ್ತಿ, ದೊರೆಸ್ವಾಮಿನಾಯಕ, ಶಿವಣ್ಣ, ರಾಜೇಶ್, ಶಿವಪ್ಪದೇವರು, ಕೆ. ನಾಗರಾಜು, ಕಾರ್ಮಿಕ ಮುಖಂಡ ಗೋವಿಂದರಾಜು, ತಾಪಂ ಇಓ ಜೆರಾಲ್ಡ್ ರಾಜೇಶ್, ಪಿಡಿಓ ಕರಿಯಪ್ಪ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.