ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಎಕಾನಾಮಿಕ್‌ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

ವಿಧಾನಸಭೆ (ಫೆ.15): ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಎಕಾನಾಮಿಕ್‌ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಜತೆಗೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಬಿಜೆಪಿಯ ಡಾ। ಶೈಲೇಂದ್ರ ಬೆಲ್ದಾಳೆ ಅವರು ಪೆರಿಫೆರಲ್‌ ರಿಂಗ್‌ ರಸ್ತೆ ಅನುಷ್ಠಾನ ಕುರಿತು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಡಿ.ಕೆ.ಶಿವಕುಮಾರ್‌ ಅವರ ಗಮನ ಸೆಳೆದರು. ಅದಕ್ಕುತ್ತರಿಸಿದ ಡಿಕೆಶಿ, ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಕಳೆದ 15 ವರ್ಷಗಳ ಹಿಂದೆಯೇ ರೂಪಿಸಲಾಗಿತ್ತು. ಆದರೆ, ಹಲವು ಪ್ರಯತ್ನಗಳ ನಂತರವೂ ಯೋಜನೆ ಜಾರಿ ಆಗಿರಲಿಲ್ಲ. ಇದೀಗ ಯೋಜನೆಯನ್ನು ಆರ್ಥಿಕ ಕಾರಿಡಾರ್‌ ಆಗಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಅದಕ್ಕೆ ಅಗತ್ಯವಿರುವಂತೆ ಯೋಜನೆ ರೂಪಿಸಲಾಗಿದೆ. ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಬಿಡ್‌ಗಳು ಸಲ್ಲಿಕೆಯಾಗುತ್ತಿದೆ. ಫೆ.29ರಂದು ಬಿಡ್‌ ತೆರೆದು ಅರ್ಹ ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾಗುವುದು ಎಂದರು.

ಆಡಳಿತ ಸುಧಾರಣೆಗೆ ಗ್ರಾಪಂಗಳಿಗೆ ರೇಟಿಂಗ್‌ ವ್ಯವಸ್ಥೆ: ಸಚಿವ ಪ್ರಿಯಾಂಕ್‌ ಖರ್ಗೆ

ಯೋಜನೆಗೆ 2,596 ಎಕರೆ ಅವಶ್ಯಕತೆಯಿದ್ದು, ಅದರಲ್ಲಿ 220 ಎಕರೆ ಮಾತ್ರ ಸರ್ಕಾರಿ ಭೂಮಿಯಾಗಿದೆ. ಉಳಿದ ಜಾಗ ಖಾಸಗಿಯವರದ್ದಾಗಿದೆ. ಭೂಮಿ ನೀಡುವ ರೈತರ ಹಿತದೃಷ್ಟಿಯಿಂದಾಗಿ ಈಗಾಗಲೇ ನೋಟಿಫೈ ಆಗಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಡಿ-ನೋಟಿಫೈ ಮಾಡುವುದಿಲ್ಲ ಎಂದು ರೈತರಿಗೆ ಭರವಸೆ ನೀಡಲಾಗಿದೆ. ಜತೆಗೆ ರೈತರಿಗೆ ಸೂಕ್ತ ಪರಿಹಾರವನ್ನೂ ನೀಡಲಾಗುವುದು. ರೈತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

ಗ್ಯಾರಂಟಿ ಮಾದರಿ ಕೈ ಪ್ರಣಾಳಿಕೆ: ‘ಕರ್ನಾಟಕದ ನಮ್ಮ ಗ್ಯಾರಂಟಿ ಪ್ರಣಾಳಿಕೆಯನ್ನು ಟೀಕಿಸಿದ ಬಿಜೆಪಿಯು ಎಲ್ಲಾ ರಾಜ್ಯಗಳಲ್ಲೇ ನಮ್ಮನ್ನೇ ಅನುಸರಿಸಿತು. ದೇಶದ ಭದ್ರತೆ, ಎಲ್ಲಾ ವರ್ಗದ ಜನರಿಗೆ ಅವಕಾಶ, ಜತೆಗೆ ಭಾವನೆಗಳ ಬದಲಿಗೆ ಬದುಕು ಕಟ್ಟಿಕೊಡುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲೇ ಲೋಕಸಭೆ ಪ್ರಣಾಳಿಕೆಗೆ ಸಲಹೆಗಳನ್ನು ನೀಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕಾಂಗ್ರೆಸ್‌ ಲೋಕಸಭೆ ಪ್ರಣಾಳಿಕೆ ಸಮಿತಿಯಿಂದ ಶನಿವಾರ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಸಭೆಯಲ್ಲಿ ಭಾಗವಹಿಸಬೇಕಿತ್ತು ಆದರೆ ಬರಲಾಗಿಲ್ಲ. 150ಕ್ಕೂ ಹೆಚ್ಚು ಮಂದಿ ವಿಷಯ ತಜ್ಞರು ಬಂದಿದ್ದೀರಿ. ಯಾವುದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವೋ ಅಂತಹ ಸಲಹೆ ನೀಡಬೇಕು. ದೇಶದಲ್ಲಿ ಬದಲಾವಣೆ ಹಾಗೂ ಕ್ರಾಂತಿಗೆ ನಮ್ಮ ಸಲಹೆಗಳು ನೆರವಾಗಬೇಕು ಎಂದು ಕರೆ ನೀಡಿದರು.

ಅರಣ್ಯ ವ್ಯಾಪ್ತಿಯಲ್ಲಿ ಇಲ್ಲದ ವಸತಿ ಪ್ರದೇಶ ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಕೃಷ್ಣ ಬೈರೇಗೌಡ

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಈಗ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಆರ್ಥಿಕತೆ ಹಾಳಾಗಲಿದೆ ಎಂದು ಹೇಳುತ್ತಿದ್ದವರು ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಪ್ರಕಟಿಸಿದರು. ನಾವು ನಮ್ಮ ಜನರ ಬದುಕಿನಲ್ಲಿ ಬದಲಾವಣೆ ತರುವುದು ಮುಖ್ಯ. ನಮ್ಮ ಯೋಜನೆಗಳಿಂದ ವಿದ್ಯುತ್ ಬಿಲ್ ನಲ್ಲಿ 1500, ಗೃಹಲಕ್ಷ್ಮಿ ಯೋಜನೆಯಲ್ಲಿ 2000, ಶಕ್ತಿ ಯೋಜನೆಯಲ್ಲಿ 3000 ಹಣ ಉಳಿಯುತ್ತದೆ. ನಮ್ಮ ಐದು ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಸುಮಾರು 5-6 ಸಾವಿರ ಪ್ರತಿ ತಿಂಗಳು ಉಳಿತಾಯವಾಗಲಿದೆ. ಇದು ಜನಪರ ಆಡಳಿತ ಎಂದು ಹೇಳಿದರು.