ಕಾಂಗ್ರೆಸ್‌ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರಕಟಿಸಿದರೆ ನಾವು ಹೋರಾಟದ ಮೂಲಕ ಕಾಂಗ್ರೆಸ್‌ಗೆ ಉತ್ತರ ಕೊಡ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಮಂಗಳೂರು (ಮೇ.25) : ಕಾಂಗ್ರೆಸ್‌ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರಕಟಿಸಿದರೆ ನಾವು ಹೋರಾಟದ ಮೂಲಕ ಕಾಂಗ್ರೆಸ್‌ಗೆ ಉತ್ತರ ಕೊಡ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಿಗಳನ್ನ ಕಂಟ್ರೋಲ್‌ ಮಾಡಿ ಕಾಂಗ್ರೆಸ್‌ ಅಜೆಂಡಾ ಹೇರುವ ಕೆಲಸವನ್ನು ಸರ್ಕಾರ(Congress government) ಮಾಡುತ್ತಿದೆ. ಹಿಂದಿನ ಎಲ್ಲ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿ ಆಗಿದೆ. ಅಂಥ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆಯನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ನಾವು ಹೋರಾಟದ ಮೂಲಕ ಕಾಂಗ್ರೆಸ್‌ಗೆ ಉತ್ತರ ಕೊಡ್ತೇವೆ ಎಂದರು.

ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

ಸಾಂವಿಧಾನಾತ್ಮಕವಾಗಿ ಎಲ್ಲ ಇಲಾಖೆಗಳಲ್ಲೂ ಪ್ರತಿ ನಾಗರಿಕನಿಗೂ ಅವರವರ ಧರ್ಮದ ಅನುಷ್ಠಾನದ ಹಕ್ಕಿದೆ. ನಂಬಿಕೆಗಳ ಆಧಾರದಲ್ಲಿ ಕೆಎಸ್ಸಾರ್ಟಿಸಿ, ಪೊಲೀಸ್‌ ಠಾಣೆಗಳಲ್ಲಿ ಆಯುಧ ಪೂಜೆ ಮಾಡ್ತಾರೆ. ಇಂಥ ಧಾರ್ಮಿಕ ಕಾರ್ಯಗಳನ್ನು ಮಾಡುವ ಪೊಲೀಸರನ್ನು ಒಂದು ಪಕ್ಷಕ್ಕೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್‌ನಿಂದ ಆಗುತ್ತಿದೆ. ಮುಖ್ಯಮಂತ್ರಿಯು ಸಾಂವಿಧಾನಿಕವಾಗಿ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ ಎಂದು ನಳಿನ್‌ ಕುಮಾರ್‌ ಹೇಳಿದರು.

ಹಿಂದೆ ಬಜರಂಗದಳ ನಿಷೇಧ(Bajrangadala ban)ದ ವಿಚಾರ ಹೇಳಿದ್ದರು. ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ. ಹಿಂದೂ ಸಮಾಜಕ್ಕೆ ತೊಂದರೆಯಾದರೆ ಹೋರಾಟ ಮಾಡಿ ಉತ್ತರ ಕೊಡೋ ಶಕ್ತಿ ಬಿಜೆಪಿಗಿದೆ ಎಂದರು.

ಕಾರ್ಯಕರ್ತರಿಗೆ ಹೊಡೆಸಿದ್ದು ನಳಿನ್‌, ಕಲ್ಲಡ್ಕ: ಅಭಯಚಂದ್ರ ಜೈನ್‌ ಆರೋಪ

ಬಿಜೆಪಿ ಸರ್ಕಾರದ 40 ಪರ್ಸೆಂಟ್‌ ಕಮಿಷನ್‌ ವಿರುದ್ಧ ತನಿಖೆ ಮಾಡಲಿ. ಜತೆಗೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ನೀಡಲಾದ ದೂರಿನ ತನಿಖೆಯೂ ಆಗಲಿ ಎಂದು ನಳಿನ್‌ ಕುಮಾರ್‌ ಒತ್ತಾಯಿಸಿದರು.

ಸಿಎಂ ವಿಚಾರದಲ್ಲಿ ಸರ್ಕಾರ ಬರುವ ಮೊದಲೇ ಜಗಳ ಮಾಡಿಕೊಂಡು ಬಂದಿದ್ದಾರೆ. ಈಗ ಕಾಂಗ್ರೆಸ್‌ಗೆ ಬಹುಮತ ಕೊಟ್ಟರೂ ಗಲಾಟೆ ಮಾಡುತ್ತಿದ್ದಾರೆ. ಇನ್ನೂ ಮಂತ್ರಿ ಮಂಡಲ ರಚನೆ ಆಗಿಲ್ಲ, ರಚನೆ ಆದ ಬಳಿಕ ಕಾಂಗ್ರೆಸ್‌ ಸ್ಥಿತಿ ಏನಾಗುತ್ತೆ ಕಾದು ನೋಡಿ ಎಂದರು.