ಇಬ್ಬರ ನಡುವೆ ಹೊಂದಾಣಿಕೆ ಇಲ್ಲ. ಇಬ್ಬರ ನಡುವೆ ಸ್ಪರ್ಧೆ ಇದೆ ಎಂಬುದೆಲ್ಲ ಬರೀ ಊಹಾಪೋಹ| ಕೇಂದ್ರದಲ್ಲಿ ಮೋದಿ-ಶಾ, ರಾಜ್ಯಕ್ಕೆ ಬಿಎಸ್‌ವೈ-ಕಟೀಲ್‌ ಕ್ಯಾಪ್ಟನ್‌: ಭಾನುಪ್ರಕಾಶ| 

ಹುಬ್ಬಳ್ಳಿ[ಅ.18]: ಕೇಂದ್ರದಲ್ಲಿ ಮೋದಿ- ಅಮಿತ್‌ ಶಾರಂತೆ ಕರ್ನಾಟಕಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ-ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಇಬ್ಬರೂ ಕ್ಯಾಪ್ಟನ್‌ಗಳು. ಇಬ್ಬರ ನಡುವೆ ಉತ್ತಮ ಹೊಂದಾಣಿಕೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಬ್ಬರ ನಡುವೆ ಹೊಂದಾಣಿಕೆ ಇಲ್ಲ. ಇಬ್ಬರ ನಡುವೆ ಸ್ಪರ್ಧೆ ಇದೆ ಎಂಬುದೆಲ್ಲ ಬರೀ ಊಹಾಪೋಹಗಳಷ್ಟೇ ಎಂದು ಸ್ಪಷ್ಟನೆ ನೀಡಿದರು. ನಮ್ಮ ಪಕ್ಷದಲ್ಲಿ ಮಾಜಿ ಪ್ರಧಾನಿ ದಿ. ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಎಲ್‌.ಕೆ. ಅಡ್ವಾಣಿ ಅವರು ಒಂದು ಮಾದರಿ ಹಾಕಿಕೊಟ್ಟಿದ್ದಾರೆ. ಅದರಂತೆ ಈಗಲೂ ನಡೆಯುತ್ತಿದೆ. ಆಗ ಅಟಲ್‌-ಅಡ್ವಾಣಿ, ಈಗ ಮೋದಿ- ಶಾ ಇದ್ದಾರೆ. ಅದರಂತೆ ರಾಜ್ಯದಲ್ಲಿ ಯಡಿಯೂರಪ್ಪ-ಕಟೀಲು ಇದ್ದಾರೆ. ಇಬ್ಬರಲ್ಲೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರಿಗೆ ಇವರು, ಇವರಿಗೆ ಅವರು ಕ್ಯಾಪ್ಟನ್‌ಗಳು. ಇವರಿಬ್ಬರ ಕ್ಯಾಪ್ಟನ್‌ಶಿಪ್‌ನಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.

ಬಿಜೆಪಿಯಲ್ಲಿ ಬಣ ರಾಜಕೀಯ: BSY ಬೆಂಬಲಿಗರಿಗೆ ಕಚೇರಿಯಿಂದ ಗೇಟ್ ಪಾಸ್

ಕಳೆದ ಕೆಲ ದಿನಗಳಿಂದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಸುದ್ದಿ ಸದ್ದು ಮಾಡುತ್ತಿತ್ತು ಎಂಬುವುದು ಉಲ್ಲೇಖನೀಯ.