ರಾಹುಲ್ ಕೇಸಲ್ಲಿ ‘ಕೈ’ ಹೋರಾಟ ಕೋರ್ಟ್ ವಿರುದ್ಧವೇ: ಪ್ರಲ್ಹಾದ್ ಜೋಶಿ ಪ್ರಶ್ನೆ
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಂತೆ ಅವರ ಪಕ್ಷದ ನಾಯಕರೂ ಅಪ್ರಬುದ್ಧತೆಯಿಂದ ವರ್ತಿಸುತ್ತಿದ್ದಾರೆ. ನ್ಯಾಯಾಲಯ ಅರ್ಜಿ ತಿರಸ್ಕರಿಸಿದರೆ, ಕಾಂಗ್ರೆಸ್‌ನವರು ಬೀದಿಗಳಿದು ಪ್ರತಿಭಟನೆ ಮಾಡುತ್ತಾರೆ.
ಹುಬ್ಬಳ್ಳಿ (ಜು.09): ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಂತೆ ಅವರ ಪಕ್ಷದ ನಾಯಕರೂ ಅಪ್ರಬುದ್ಧತೆಯಿಂದ ವರ್ತಿಸುತ್ತಿದ್ದಾರೆ. ನ್ಯಾಯಾಲಯ ಅರ್ಜಿ ತಿರಸ್ಕರಿಸಿದರೆ, ಕಾಂಗ್ರೆಸ್‌ನವರು ಬೀದಿಗಳಿದು ಪ್ರತಿಭಟನೆ ಮಾಡುತ್ತಾರೆ. ಈ ಪ್ರತಿಭಟನೆ ಯಾರ ವಿರುದ್ಧ ಎಂಬುದನ್ನು ಆ ಪಕ್ಷದ ಮುಖಂಡರು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಚಾರಣಾ ನ್ಯಾಯಾಲಯದ ತೀರ್ಪಿನ ನಂತರ ಜಿಲ್ಲಾ ಹಾಗೂ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು.
ಆದರೆ, ಆ ಎರಡೂ ನ್ಯಾಯಾಲಯದಲ್ಲೂ ಅರ್ಜಿ ತಿರಸ್ಕೃತಗೊಂಡಿದೆ. ಇದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇವರ ಹೋರಾಟ ಹೈಕೋರ್ಟ್ ವಿರುದ್ಧನಾ ಎಂದು ಪ್ರಶ್ನಿಸಿದರು. ದೇಶದಲ್ಲಿ 57-58 ವರ್ಷ ಆಡಳಿತ ಮಾಡಿದ ಕಾಂಗ್ರೆಸ್‌ಗೆ ಸ್ವಲ್ಪವಾದರೂ ಪ್ರಜ್ಞೆ ಇಲ್ಲದಂತಿದೆ. ವಿಚಾರಣಾ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದರೆ, ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಅವರ ಅಪ್ರಬುದ್ಧತೆ ಹಾಗೂ ಅಹಂಕಾರಕ್ಕೆ ಈ ಸ್ಥಿತಿ ಬಂದಿದೆ. ಇನ್ನಾದರೂ ಕಾಂಗ್ರೆಸ್ ಮುಖಂಡರು ಬೀದಿಗಿಳಿಯುವುದನ್ನು ಬಿಟ್ಟು ತಮ್ಮ ನಾಯಕ ರಾಹುಲ್ ಗಾಂಧಿಗೆ ಬುದ್ಧಿ ಹೇಳುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಪತ್ರಕರ್ತರಿಗೂ ‘ಆರೋಗ್ಯ ಭಾಗ್ಯ’ ನೀಡಲು ಸಿಎಂ ಜತೆ ಚರ್ಚೆ: ಸ್ಪೀಕರ್ ಯು.ಟಿ.ಖಾದರ್
ಭ್ರಷ್ಟಾಚಾರದಲ್ಲಿ ತೊಡಗಿದೆ ಕಾಂಗ್ರೆಸ್ ಸರ್ಕಾರ: ಭ್ರಷ್ಟಾಚಾರ ಎಂದು ಆರೋಪ ಮಾಡಿ ಅಧಿಕಾರಕ್ಕೆ ಬಂದು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು. ಇಲ್ಲಿ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ವಸೂಲಿ ನಡೆದಿದೆ. ಒಂದೊಂದು ಹುದ್ದೆಗೆ ನಾಲ್ಕಾರು ಶಿಫಾರಸು ಪತ್ರಗಳನ್ನು ಕೊಡಲಾಗುತ್ತಿದ್ದು, ಇದರೊಂದಿಗೆ ವಸೂಲಿ ಕಾರ್ಯವೂ ನಡೆದಿದೆ. ಮಾಧ್ಯಮವರು ಆಂತರಿಕ ತನಿಖೆ ಮಾಡಿ ನೋಡಿ. ಯಾವ ರೀತಿ ವಸೂಲಿ ಕಾರ್ಯ ನಡೆಯುತ್ತಿದೆ ಎಂಬುದು ತಿಳಿಯುತ್ತದೆ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಜೋಶಿ ಅವರು ಸಲಹೆ ನೀಡಿದರು.
ಅಕ್ಕಿ ವಿತರಣೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಚಿವರು ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ, ಜುಲೈ ತಿಂಗಳಿಗೆ ನೀಡಿರುವ ಅಕ್ಕಿಯೂ ಕೇಂದ್ರ ಸರ್ಕಾರದ್ದು ಎಂಬುದನ್ನು ನಾಡಿನ ಜನತೆಗೆ ಏತಕ್ಕೆ ಹೇಳುತ್ತಿಲ್ಲ? ಕರ್ನಾಟಕ ಸೇರಿ 80 ಕೋಟಿ ಜನರಿಗೆ ಕೇಂದ್ರ ಸರ್ಕಾರ ಅಕ್ಕಿ ವಿತರಿಸಿದೆಯೇ ಹೊರತು, ರಾಜ್ಯ ಕಾಂಗ್ರೆಸ್ ಸರ್ಕಾರವಲ್ಲ. ಅದನ್ನು ಕೈ ಮುಖಂಡರು ಒಪ್ಪಿಕೊಳ್ಳಲೇಬೇಕು. ರಾಜ್ಯ ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅನಗತ್ಯ ಷರತ್ತು ಹಾಕಲಾಗಿದೆ. ಆ ಮೂಲಕ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಜೋಶಿ ಟೀಕಿಸಿದರು.