Kalaburagi: ಚುನಾವಣೆ ಹಿನ್ನೆಲೆ, 50 ಸಾವಿರಕ್ಕೂ ಹೆಚ್ಚು ನಗದು ಒಯ್ಯುವಂತಿಲ್ಲ: ಡಿಸಿ ಯಶವಂತ ಗುರುಕರ್ ಸೂಚನೆ

ವಿಧಾನಸಭೆ‌ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೆ ದಾಖಲೆ, ವಿವರಣೆ ಇಲ್ಲದೆ ಯಾವುದೇ ವ್ಯಕ್ತಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ‌ ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ. 

In the background of election no more than 50 thousand in cash can be carried Says DC Yeshwanth V Gurukar gvd

ಕಲಬುರಗಿ (ಏ.14): ವಿಧಾನಸಭೆ‌ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೆ ದಾಖಲೆ, ವಿವರಣೆ ಇಲ್ಲದೆ ಯಾವುದೇ ವ್ಯಕ್ತಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ‌ ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ. ಇನ್ನು ದಾಖಲೆ‌ ಇಲ್ಲದ 10,000 ರೂ. ಮೀರಿದ ಯಾವುದೇ ಸರಕುಗಳನ್ನು ಸಂಗ್ರಹಣೆ ಮತ್ತು ಬೃಹತ್ ಪ್ರಮಾಣದಲ್ಲಿ ಸಹ ಸಾಗಿಸುವಂತಿಲ್ಲ. 

ಈ ಆದೇಶ‌ ಚುನಾವಣೆ‌ ಮುಕ್ತಾಯದ ವರೆಗೆ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರಲಿದ್ದು, ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಮತ್ತು ಶಾಂತಿಯುತವಾಗಿ ಚುನಾವಣೆ ಜರುಗಲು ಜಿಲ್ಲೆಯ ಜನತೆ ಸಹಕರಿಸಬೇಕು‌ ಎಂದು‌ ಮನವಿ ಮಾಡಿದ್ದಾರೆ. ಚುನಾವಣೆ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ‌ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿ ಲಂಚ ನೀಡಬಾರದು ಅಥವಾ ಹಣವನ್ನು ಲಂಚದ ರೂಪದಲ್ಲಿ ನೀಡಲು ಪ್ರಯತ್ನಿಸಬಾರದು. ಸರಕುಗಳು, ಬೆಲೆಬಾಳುವ ವಸ್ತುಗಳು, ಉಡುಗೊರೆ ಚೀಟಿಗಳು, ಸಿಮ್ ಕಾರ್ಡ್ ಬಾಕಿಗಳು, ಪ್ರಯಾಣ ಆಯೋಜನೆ, ಉಚಿತ ಆಹಾರ (ಬೇಯಿಸಿದ ಅಥವಾ ಬೇಯಿಸದ), ಮದ್ಯ ಅಥವಾ ಇತರೆ ಪಾನೀಯಗಳು, ಉಚಿತ ಇಂಧನ, ಸಬ್ಸಿಡಿ ಹೀಗೆ ಯಾವುದನ್ನು ನೀಡಬಾರದು ಮತ್ತು ಪಡೆಯಬಾರದು. 

ರಾಮನಗರದ 4 ಕ್ಷೇತ್ರಗಳಲ್ಲೂ ಬಿಜೆಪಿಯದ್ದೇ ಗೆಲುವು: ಸಚಿವ ಅಶ್ವತ್ಥ ನಾರಾ​ಯಣ

ಮುಂದುವರೆದು, ಇದನ್ನು ಯಾವುದೇ ರೀತಿಯಲ್ಲಿ ಸಂಗ್ರಹಿಸಬಾರದು, ಸಾಗಿಸಬಾರದು ಹಾಗೂ ಅದಕ್ಕೆ ಪೂರಕವಾಗಿ ಸಹಾಯ ಮಾಡಬಾರದು ಎಂದು ತಿಳಿಸಿದ್ದಾರೆ. ಇನ್ನು ವಸ್ತುಗಳನ್ನು ಮಾರಾಟ ಮಾಡುವ, ಸಂಗ್ರಹಿಸುವ, ಸ್ಟಾಕ್ ಮಾಡುವ ಅಥವಾ ಇತರೆ ರೀತಿಯ ವ್ಯವಹಾರಗಳನ್ನು ಮಾಡುವ ಪ್ರತಿಯೊಬ್ಬ ವ್ಯಕ್ತಿಯು ಮೇಲಿನ ನಿಷೇಧಿತ ವಸ್ತುಗಳ ಉದ್ದೇಶಕ್ಕಾಗಿ ಯಾವುದೇ ವಹಿವಾಟು ಶಂಕಿಸಿದರೆ, ಲಿಖಿತವಾಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾರಾಟದ ಕುರಿತು ವರದಿ ನೀಡಬೇಕು. 

ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಚಿಸಿರುವ ಸ್ಥಿರ ಕಣ್ಗಾವಲು ತಂಡಗಳು, ಚೆಕ್ ಪೋಸ್ಟ್‌ ತಂಡ, ವಿಡಿಯೋ ಕಣ್ಗಾವಲು ತಂಡ,  ಫ್ಲೈಯಿಂಗ್ ಸ್ಕ್ವಾಡ್‌ಗಳು ಸಾಮಾನ್ಯ ಜನರಿಗೆ ಯಾವುದೇ ಅನಾನುಕೂಲತೆ, ಕಿರಿಕಿರಿ ಆಗದಂತೆ ಖಚಿತಪಡಿಸಿಕೊಳ್ಳಬೇಕು‌ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶದ ಉಲ್ಲಂಘನೆಯಿಂದ ಯಾರಿಗಾದರೂ ಅಡಚಣೆ, ಹಾನಿ, ಕಿರಿಕಿರಿ ಅಥವಾ ಗಾಯ ಇತ್ಯಾದಿಗಳನ್ನು ಉಂಟುಮಾಡಿದರೆ ಅಥವಾ ಮಾನವನ ಜೀವನ, ಆರೋಗ್ಯ ಅಥವಾ ಸುರಕ್ಷತೆ ಅಥವಾ ಗಲಭೆ ಅಥವಾ ಗಲಭೆಗೆ ಬೆದರಿಕೆಯನ್ನು ಉಂಟುಮಾಡುವ ಪ್ರವೃತ್ತಿಗಳನ್ನು ಸೆಕ್ಷನ್ 188 ಐ.ಪಿ.ಸಿ ಅಡಿಯಲ್ಲಿ ಪ್ರತ್ಯೇಕವಾಗಿ ಅಪರಾಧವನ್ನು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಯಶವಂತ ವಿ. ಗುರುಕರ್ ಎಚ್ಚರಿಕೆ ನೀಡಿದ್ದಾರೆ. 

ವಿರೋಧದ ಅಲೆ ಮಧ್ಯೆಯೂ ಕುಮಾರ್‌ ಬಂಗಾರಪ್ಪಗೆ ಬಿಜೆಪಿ ಟಿಕೆಟ್‌: ನಮೋ ವೇದಿಕೆ ಆಶ​ಯಕ್ಕೆ ಹಿನ್ನಡೆ

ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios